ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ (defamation case) ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ (Lok Sabha membership) ರದ್ದಾಗಿದೆ. ಅವರ ಲೋಕಸಭಾ ಸದಸ್ಯತ್ವ ರದ್ದುಗೊಂಡ ಹಿನ್ನೆಲೆಯಲ್ಲಿ ಮುಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವುದು ಕಷ್ಟವೇ ಎನ್ನುವ ಚರ್ಚೆ ಶುರುವಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು (Surat court) ದೋಷಿ ಎಂದು ತೀರ್ಪಿತ್ತಿದ್ದು, ಅದನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರೆ ಕಾಂಗ್ರೆಸ್ ವಂಶಸ್ಥ ರಾಹುಲ್ ಗಾಂಧಿ ಲೋಕಸಭೆಗೆ ಸ್ಪರ್ಧಿಸಲು ಸಾಧ್ಯವಾಗುತ್ತದೆ ಎನ್ನಲಾಗುತ್ತದೆ.
ಮೇಲ್ಮನವಿ ಸಲ್ಲಿಸಲು ಅವಕಾಶ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಮೇಲಿನ ಆರೋಪ ಸಾಬೀತಾಗಿದೆ. ಈ ಶಿಕ್ಷೆಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಜಾಮೀನು ನೀಡಿರುವುದರಿಂದ ರಾಹುಲ್ ಗಾಂಧಿ ತಕ್ಷಣ ಜೈಲಿಗೆ ಹೋಗುವುದಿಲ್ಲ. ಶಿಕ್ಷೆಯ ದಿನಾಂಕದಿಂದ ಜಾರಿಗೆ ಬರುವಂತೆ ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.
8 ವರ್ಷ ಅನರ್ಹವಾಗುತ್ತಾ ಸದಸ್ಯತ್ವ?
ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ಅನುಗುಣವಾಗಿದೆ. ಅಲ್ಲದೆ, ಕಾನೂನು ತನ್ನ ಸಮಯವನ್ನು ಪೂರೈಸಿದ ನಂತರ ಇನ್ನೂ ಆರು ವರ್ಷಗಳವರೆಗೆ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹರಾಗಿರುತ್ತಾರೆ. ಈ ಪ್ರಕರಣದಲ್ಲಿ ಎರಡು ವರ್ಷಗಳು ಅಂದರೆ ಗಾಗಿ ರಾಹುಲ್ ಗಾಂಧಿ ಅವರ ಅನರ್ಹತೆ ಎಂಟು ವರ್ಷಗಳವರೆಗೆ ಇರುತ್ತದೆ.
ಇದನ್ನೂ ಓದಿ: Rahul Gandhi: ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಡಿ ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ!
2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ರಾಹುಲ್?
ಸದ್ಯ ರಾಹುಲ್ ಗಾಂಧಿಗೆ 52 ವರ್ಷ. ಮುಂದಿನ 8 ವರ್ಷ ಶಿಕ್ಷೆಯಾದರೆ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.ಆದರೆ ರಾಹುಲ್ ಗಾಂಧಿ ಖಂಡಿತವಾಗಿಯೂ ಉಚ್ಚ ನ್ಯಾಯಾಲಯದ ಮೊರೆ ಹೋಗುತ್ತಾರೆ. ಏಕೆದಂರೆ ತನ್ನ ಸದಸ್ಯತ್ವವನ್ನು ಉಳಿಸಿಕೊಳ್ಳಲುವ ಅವರು ಶಿಕ್ಷೆಯನ್ನು ತಡೆಹಿಡಿಯಬೇಕು ಅಥವಾ ರದ್ದುಗೊಳಿಸಬೇಕು. ಆಗ ಅವರನ್ನು ಅನರ್ಹಗೊಳಿಸುವ ಸಂಸತ್ತಿನ ನಿರ್ಧಾರದ ವಿರುದ್ಧ ಅವರು ಭಾರತದ ನ್ಯಾಯಾಲಯಗಳಿಗೆ ಮೇಲ್ಮನವಿ ಸಲ್ಲಿಸಬಹುದು.
ಪ್ರಧಾನಿ ರೇಸ್‌ನಿಂದ ಹಿಂದೆ ಸರಿಯುತ್ತಾರಾ ಕಾಂಗ್ರೆಸ್ ನಾಯಕ?
52ರ ಹರೆಯದಲ್ಲೂ ಯಂಗ್ ಟರ್ಕ್ ಎಂದು ಕರೆಯಲ್ಪಡುವ ರಾಹುಲ್ ಗಾಂಧಿ ಆಗ 63ರ ಹರೆಯದವರಾಗಿರುತ್ತಾರೆ. ಹೀಗಾಗಿ ರಾಹುಲ್ ಗಾಂಧಿ ಅವರು ಪ್ರಾಯೋಗಿಕವಾಗಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ, ಅಥವಾ ಕಾಂಗ್ರೆಸ್ ನೇತೃತ್ವದ ಯಾವುದೇ ವಿರೋಧ ಪಕ್ಷ ರಚನೆ ಮತ್ತು ಸಹಜವಾಗಿ ಪ್ರಧಾನಿ ಸ್ಪರ್ಧೆಯಿಂದ ಹೊರಗುಳಿಯುವ ಸಾಧ್ಯತೆ ಇದೆ.
ರಾಹುಲ್ ಏನು ಹೇಳಿದ್ದರು?
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾಗಿದ್ದ ರಾಹುಲ್ ಗಾಂಧಿ ಅವರು 2019ರಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ವೇಳೆ ‘ಹುಡುಕಿದರೆ ಇನ್ನೊಂದಷ್ಟು ಜನ ಮೋದಿಗಳು ಸಿಗುತ್ತಾರೆ. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಹೀಗೆ ಎಲ್ಲಾ ಕಳ್ಳರ ಹೆಸರು ಮೋದಿ ಅಂತಾನೆ ಬರುತ್ತೆ’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಗುಜರಾತ್‌ನಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು.
ಇದನ್ನೂ ಓದಿ: The Vial: ಜಗತ್ತನ್ನೇ ಆವರಿಸಿತ್ತು ಕೋವಿಡ್ 19, ಮೋದಿ ಮನಸ್ಸಿನಲ್ಲಿದ್ದ ಮೊದಲ ಆಲೋಚನೆ ಏನು?
ತೀರ್ಪು ನೀಡಿದ್ದ ಸೂರತ್ ಕೋರ್ಟ್
ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿತ್ತು. ಅಲ್ಲದೇ, ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ