ನವದೆಹಲಿ: ಕಾಂಗ್ರೆಸ್ ನಾಯಕತ್ವ ಬದಲಾಯಿಸುವಂತೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಪಕ್ಷದ ನಾಯಕರು ಪತ್ರ ಬರೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರು ನಾಳೆ (ಸೋಮವಾರ) ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಸಲು ಸನ್ನದ್ಧರಾಗಿದ್ದಾರೆ ಎನ್ನಲಾಗಿದೆ.
ಕೆಲವು ವಾರಗಳ ಹಿಂದೆ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಂಸದರು ಸೇರಿದಂತೆ ಹಲವು ನಾಯಕರು ಪಕ್ಷದ ನಾಯಕತ್ವ ಬದಲಾವಣೆ ಮಾಡುವಂತೆ ಕೋರಿ ಬರೆದ ಪತ್ರ ಪಕ್ಷದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಇದೀಗ ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಇಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಮಹತ್ವದ ಮಾತುಕತೆ, ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಪತ್ರಕ್ಕೆ ಸೋನಿಯಾ ಗಾಂಧಿ ಅವರು ಔಪಚಾರಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ಮಧ್ಯಂತರ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ ಮತ್ತು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಹಾಗೂ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ: ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕೂಗು; 23 ಹಿರಿಯ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ
ಆದಾಗ್ಯೂ, ಈ ಎಲ್ಲ ಬೆಳವಣಿಗೆ ಸಂಬಂಧ ನ್ಯೂಸ್ 18 ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೆವಾಲಾ ಅವರನ್ನು ಸಂಪರ್ಕಿಸಿದಾಗ ಅವರು, ಸೋನಿಯಾ ಗಾಂಧಿ ರಾಜೀನಾಮೆ ನೀಡುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ