ಕೊರೋನಾ ಭೀತಿ ನಡುವೆ ದೆಹಲಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

ಮೃತ ಮಹಿಳೆಯು ಖಿನ್ನತೆಯಿಂದ ಬಳಲುತ್ತಿದ್ದು, ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

news18-kannada
Updated:July 16, 2020, 4:55 PM IST
ಕೊರೋನಾ ಭೀತಿ ನಡುವೆ ದೆಹಲಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಜು.16): ರಾಷ್ಟ್ರ ರಾಜಧಾನಿ ನವದೆಹಲಿಯ ತಿಮ್ರಾಪುರ್​ ಪ್ರದೇಶದ ಬಾಲಕ್ ರಾಮ್​ ಆಸ್ಪತ್ರೆಯ ಮಹಿಳಾ ಉದ್ಯೋಗಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ದುರ್ದೈವಿಯನ್ನು ಕೌಶಲ್ಯಾ ದೇವಿ ಎಂದು ಗುರುತಿಸಲಾಗಿದ್ದು, ದೆಹಲಿಯ ಧಾಕಾ ಗ್ರಾಮದವರು ಎನ್ನಲಾಗಿದೆ.

ಘಟನೆ ಬಳಿಕ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಅರುಣ ಅಸಫ್ ಅಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಮಹಿಳೆ ಅಸುನೀಗಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಜ್ಯುವೆಲರಿ ಶಾಪ್​ಗೆ ವಿದೇಶಿಗರ ಸೋಗಿನಲ್ಲಿ ಬಂದು ಸಾವಿರಾರು ರೂಪಾಯಿ ಹಣ ಎಗರಿಸಿದ ಚಾಲಾಕಿ ಕಳ್ಳರು

ಮೃತ ಮಹಿಳೆಯು ಖಿನ್ನತೆಯಿಂದ ಬಳಲುತ್ತಿದ್ದು, ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಆಕೆಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಳು ಎನ್ನಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್​, ದೆಹಲಿ ಬಿಜೆಪಿ ಅಧ್ಯಕ್ಷ ಅದೇಶ್ ಗುಪ್ತ ಮತ್ತಿತರರು ಬಾಲಕ್​ ರಾಮ್​ ಆಸ್ಪತ್ರೆಯ ಐಸೋಲೇಶ್​ ವಾರ್ಡ್​​ ಉದ್ಘಾಟಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಈ ಘಟನೆಯಿಂದಾಗಿ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
Published by: Latha CG
First published: July 16, 2020, 4:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading