ಒಂಬತ್ತು ಹೊಸ ನ್ಯಾಯಾಧೀಶರು ಇಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇದರಲ್ಲಿ ರಾಜ್ಯ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದ ಕನ್ನಡತಿ ನಾಗರತ್ನ ಬಿ. ವಿ ಸೇರಿ ಮೂವರು ಮಹಿಳಾ ನ್ಯಾಯಮೂರ್ತಿಗಳೂ ಒಳಗೊಂಡಿದ್ದಾರೆ. ಈ ಪೈಕಿ ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿ ಬಿ.ವಿ. ನಾಗರತ್ನ ಅವರ ಹೆಸರು ದೇಶದಾದ್ಯಂತ ಜನರ ಬಾಯಲ್ಲಿ ಕೇಳಿ ಬರುತ್ತಿದೆ. ಏಕೆಂದರೆ ಇದುವರೆಗೆ ಸ್ವತಂತ್ರ ಭಾರತದಲ್ಲಿ ಸುಪ್ರೀಂಕೋರ್ಟ್‍ಗೆ ಯಾವುದೇ ಮಹಿಳೆಯು ನ್ಯಾಯಾಮೂರ್ತಿಯಾಗಿ ನೇಮಕಗೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಜಸ್ಟೀಸ್ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ತಮ್ಮ ಸಹೋದ್ಯೋಗಿಗಳೊಂದಿಗೆ ತೆಗೆಸಿಕೊಂಡ ಫೋಟೋವನ್ನು ಶೇರ್ ಮಾಡಿದ್ದಾರೆ. ಫೋಟೋದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಸುಪ್ರೀಂ ಕೋರ್ಟ್‍ನ ನಾಲ್ವರು ಹಾಲಿ ಮಹಿಳಾ ನ್ಯಾಯಾಧೀಶರೊಂದಿಗೆ ಕಾಣಿಸಿಕೊಂಡಿದ್ದಾರೆ.
ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ನ್ಯಾಯಮೂರ್ತಿ ಬಿ ವಿ ನಾಗರತ್ನ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಹೊಸದಾಗಿ ನೇಮಕವಾದ ನಾಲ್ವರು ಮಹಿಳಾ ನ್ಯಾಯಮೂರ್ತಿಗಳಾಗಿದ್ದಾರೆ. ನ್ಯಾಯಮೂರ್ತಿಗಳಾದ ನಾಗರತ್ನ, ಕೊಹ್ಲಿ ಮತ್ತು ತ್ರಿವೇದಿ ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ಸುಪ್ರೀಂ ಕೋರ್ಟ್ ಹೆಚ್ಚು ಮಹಿಳೆಯರನ್ನು ಹೊಂದಿರುವ ನ್ಯಾಯಾಲಯ ಎಂಬ ಕೀರ್ತಿಗೆ ಭಾಜನವಾಗಿದೆ.
ಈ ಹಿಂದೆ ಮೂವರು ಮಹಿಳಾ ನ್ಯಾಯಾಧೀಶರಿದ್ದರು. ನ್ಯಾಯಮೂರ್ತಿಗಳಾದ ಆರ್ ಬಾನುಮತಿ, ಇಂದಿರಾ ಬ್ಯಾನರ್ಜಿ ಮತ್ತು ಇಂದು ಮಲ್ಹೋತ್ರಾ ಅವರು ಆಗಸ್ಟ್ 2018 ರಿಂದ ಮೇ 2020 ರವರೆಗೆ ನ್ಯಾಯಾಧೀಶರಾಗಿದ್ದರು.
ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು ಸುಪ್ರೀಂ ಕೋರ್ಟ್‍ನ ಮಹಿಳಾ ಮೊದಲ ಮುಖ್ಯ ನ್ಯಾಯಾಧೀಶರಾಗಿರುವ ಕಾರಣ ಸುಪ್ರೀಂಕೋರ್ಟ್‍ನ ಘನತೆ ಇನ್ನು ಹೆಚ್ಚಲಿದೆ. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಇ ಎಸ್ ವೆಂಕಟರಾಮಯ್ಯ ಅವರ ಪುತ್ರಿ, ಅವರು ಸೆಪ್ಟೆಂಬರ್ 2027 ರಲ್ಲಿ ಈ ಹುದ್ದೆಗೆ ಸರದಿಯಲ್ಲಿದ್ದಾರೆ. ಅಲ್ಲದೇ ಒಂಭತ್ತು ನ್ಯಾಯಾಧೀಶರು ಪ್ರಮಾಣವಚನ ಸ್ವೀಕರಿಸಿದ್ದು ಇದೇ ಮೊದಲು.
ಕೋವಿಡ್ ನಿಯಮವನ್ನು ಪಾಲಿಸುವ ಸಲುವಾಗಿ ಈ ಪ್ರಮಾಣವಚನ ಸ್ವೀಕಾರ ಸಮಾರಂಭವು ಸಾಂಪ್ರದಾಯಿಕವಾಗಿ ನಡೆಯುವ ಸಿಜೆಐ ನ್ಯಾಯಾಲಯದ ಕೊಠಡಿಯಲ್ಲಿ ನಡೆಯಲಿಲ್ಲ. ಇದರ ಬದಲು ಸುಪ್ರೀಂ ಕೋರ್ಟ್‍ನ ಹೆಚ್ಚುವರಿ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ನಡೆಯಿತು.ಭಾರತದ ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂಬತ್ತು ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಾರೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಗಮನಿಸಿ ಸಮಾರಂಭದ ಸ್ಥಳವನ್ನು ಸಭಾಂಗಣಕ್ಕೆ ವರ್ಗಾಯಿಸಲಾಗಿದೆ ಎಂದು ಉನ್ನತ ನ್ಯಾಯಾಲಯದ ಸಾರ್ವಜನಿಕ ಸಂಪರ್ಕ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ಪ್ರಮಾಣ ವಚನ ಸಮಾರಂಭದ ನಂತರ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ 34ಕ್ಕೆ ಏರಿದೆ. ಅಲ್ಲದೇ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ್ ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ಜಿತೇಂದ್ರ ಕುಮಾರ್ ಮಹೇಶ್ವರಿ, ಜಸ್ಟಿಸ್ ಹಿಮಾ ಕೊಹ್ಲಿ, ಬಿವಿ ನಾಗರತ್ನ, ಸಿಟಿ ರವಿಕುಮಾರ್, ನ್ಯಾಯಮೂರ್ತಿ ಎಂಎಂ ಸುಂದ್ರೇಶ್, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರು ಕೂಡ ಪ್ರಮಾಣವಚನ ಸ್ವೀಕರಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ