World Heart day 2020: ಇಂದು ವಿಶ್ವ ಹೃದಯ ದಿನ; ನಿಮ್ಮ ಹೃದಯವನ್ನು ಜೋಪಾನ ಮಾಡಿಕೊಳ್ಳಿ

ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ವಾಕ್ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ. ಇದು ಆರೋಗ್ಯಕ್ಕೆ ಒಳ್ಳೆಯದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಸೆ.29): ಇಂದು ವಿಶ್ವ ಹೃದಯ ದಿನ. ಪ್ರತೀ ವರ್ಷ ಸೆಪ್ಟೆಂಬರ್ 29ರಂದು ಪ್ರಪಂಚದಾದ್ಯಂತ ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಹೃದಯ ಸಂಬಂಧಿ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವ ಹೃದಯ ದಿನವನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ಇಂದಿನ ಯಾಂತ್ರಿಕ ಬದುಕಿನ ಶೈಲಿಯಲ್ಲಿ ನಮ್ಮ ಎಡಗೈ ಮುಷ್ಟಿಯಷ್ಟಿರುವ ಹೃದಯವನ್ನು ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಅದರಲ್ಲೂ ಇಂದಿನ ಕೊರೋನಾ ವೈರಸ್​​ನಂತಹ ಸಾಂಕ್ರಾಮಿಕ ರೋಗದ ಮಧ್ಯೆ ನಮ್ಮ ಹೃದಯವನ್ನು ಕಾಪಾಡಿಕೊಳ್ಳುವುದು ಹಿಂದೆಂದಿಗಿಂತಲೂ ಈಗ ಹೆಚ್ಚು ಮುಖ್ಯವಾಗಿದೆ. ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಈ ಹೃದಯ ಸಂಬಂಧಿ ಕಾಯಿಲೆಗಳು ಬರಲು ಕೆಲವೊಂದು ಅಂಶಗಳು ಕಾರಣವಾಗುತ್ತವೆ. ಧೂಮಪಾನ, ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ವಾಯುಮಾಲಿನ್ಯ ಹಾಗೂ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ- ಇವುಗಳಿಂದ ಹೃದಯಾಘಾತ ಅಥವಾ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ.

  ಈ ವರ್ಷ ಕೊರೋನಾ ಮಹಾಮಾರಿ ಜಗತ್ತಿಗೆ ಕಾಲಿಟ್ಟಿದ್ದು, ಹೃದಯದ ಕಾಳಜಿಯನ್ನು ಮತ್ತಷ್ಟು ಮಾಡಬೇಕಿದೆ. ಇಂದು ವಿಶ್ವ ಹೃದಯ ದಿನ. ನಮ್ಮ ಹೃದಯದ ಬಗ್ಗೆ ಅರಿವು ಮೂಡಿಸುವ ಯತ್ನ ಮಾಡಲಾಗುತ್ತದೆ. ಆರೋಗ್ಯಕರ ಆಹಾರ ಪದ್ಧತಿ ಮತ್ತು ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದರಿಂದ ನಮ್ಮ ಹೃದಯವನ್ನು ಜೋಪಾನವಾಗಿ ಕಾಪಾಡಿಕೊಳ್ಳಬಹುದು.

  Coronavirus India Updates: ಭಾರತದಲ್ಲಿ 61 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

  ಕೆಲಸದ ಒತ್ತಡ ಸಾಮಾನ್ಯ. ಈ ಒತ್ತಡವನ್ನು ಕಡಿಮೆ ಮಾಡಿಕೊಳ್ಳದಿದ್ದರೆ ಹೃದಯಕ್ಕೆ ಪೆಟ್ಟು ಬೀಳುವುದು ಖಚಿತ. ಹೀಗಾಗಿ ಕೆಲಸ ಅಥವಾ ಇತರೆ ವಿಷಯಗಳಲ್ಲಿನ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಕೋಪ, ಟೆನ್ಶನ್ ಬಿಟ್ಟು ಶಾಂತ ರೀತಿಯಲ್ಲಿ ಇರಿ. ಇದರಿಂದ ಹೃದಯದ ಆರೋಗ್ಯಕ್ಕೂ ಒಳ್ಳೆಯದು, ಮನಸ್ಸಿಗೂ ನೆಮ್ಮದಿ ಸಿಗುತ್ತದೆ.

  ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ವಾಕ್ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ. ಇದು ಆರೋಗ್ಯಕ್ಕೆ ಒಳ್ಳೆಯದು.

  ಕಣ್ತುಂಬ ನಿದ್ರೆ ಮಾಡುವುದು ಸಹ ಮುಖ್ಯ. ನಿದ್ರೆಯ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ಬರಬಹುದು. ಹೀಗಾಗಿ ಕನಿಷ್ಠ 7-8 ಗಂಟೆಗಳ ಕಾಲ ನಿದ್ದೆ ಮಾಡುವುದು ಆರೋಗ್ಯಕ್ಕೆ ಉತ್ತಮ.
  Published by:Latha CG
  First published: