ಕಠ್ಮಂಡು, (ನೇಪಾಳ): ನೆನ್ನೆ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗಿದೆ. ಯೋಗಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ತಂದುಕೊಟ್ಟ ಹೆಗ್ಗಳಿಕೆ ಭಾರತಕ್ಕೆ ಸಲ್ಲುತ್ತದೆ. ಏತನ್ಮಧ್ಯೆ ನೇಪಾಳದ ಹಂಗಾಮಿ ಕೆ.ಪಿ. ಶರ್ಮಾ ಒಲಿ ಅವರು ಯೋಗದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯೋಗ ಆರಂಭವಾಗಿದ್ದು ನೇಪಾಳದಲ್ಲಿ. ಯೋಗ ಆರಂಭವಾದಾಗ ಭಾರತವೇ ಇರಲಿಲ್ಲ ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ತಜ್ಞರು ಸತ್ಯವನ್ನು ಮರೆ ಮಾಚುತ್ತಿದ್ದಾರೆ. ಯೋಗವು ನೇಪಾಳದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಆ ಸಂದರ್ಭದಲ್ಲಿ ಭಾರತವೇ ಇರಲಿಲ್ಲ. ಅದು ಎರಡಾಗಿ ವಿಭಜನೆಯಾಗಿತ್ತು ಎಂದು ಕೆ.ಪಿ. ಶರ್ಮಾ ಅವರು ಹೇಳಿದ್ದಾರೆ.
ಇದನ್ನು ಓದಿ: Narada Case: ನಾರದಾ ಪ್ರಕರಣ ಸಂಬಂಧ ಮಮತಾ ಬ್ಯಾನರ್ಜಿ ಮೇಲ್ಮನವಿ ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್
2015ರಿಂದ ಜೂನ್ 21ರಂದು ಅಂತಾರಾಷ್ಟ್ರಿಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಬಗ್ಗೆ 2014ರಲ್ಲಿ ವಿಶ್ವಸಂಸ್ಥೆ ಘೋಷಣೆ ಹೊರಡಿಸಿತ್ತು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಪರಿಗಣಿಸುವಂತೆ ವಿಶ್ವಸಂಸ್ಥೆಗೆ ಸಲಹೆ ನೀಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ