Yogi-Modi: ಮೋದಿ ಯೋಗಿ ನಡುವಿನ ಭೇಟಿ; ನಾಯಕತ್ವ ಬದಲಾವಣೆ ಬಗ್ಗೆ ಮೂಡಿತಾ ಅಪಸ್ವರ?

ಪಕ್ಷದ ಸಂಘಟನೆ ಮತ್ತು ಸುಸೂತ್ರ ಸರ್ಕಾರ ರಚನೆ ಹಿನ್ನೆಲೆಯಲ್ಲಿ ದಿನನಿತ್ಯ ನಡೆಯುವ ಭೇಟಿ ಇದಾಗಿದೆ ಇದಕ್ಕೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ

ಯೋಗಿ-ಮೋದಿ

ಯೋಗಿ-ಮೋದಿ

 • Share this:
  ನವದೆಹಲಿ (ಜೂ. 11): ಉತ್ತರ ಪ್ರದೇಶದಲ್ಲಿ ಕೊವೀಡ್​ ನಿರ್ವಹಣೆ ಮಾಡುವ ವಿಚಾರದಲ್ಲಿ ಹೈ ಕಮಾಂಡ್​ ಸಿಎಂ ಯೋಗಿ ಆದಿತ್ಯನಾಥ್​ ಮೇಲೆ ಮುನಿಸು ತೋರಿದೆ ಎನ್ನಲಾಗಿತ್ತು. ಈ ಎಲ್ಲಾ ಊಹಾಪೋಹಾಗಳಿಗೆ ವಿರಾಮ ಹಾಕುವ ಹಾಗೂ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆ ಯೋಗಿ ಆದಿತ್ಯನಾಥ್​ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಭೇಟಿಗೂ ಮೊದಲು ಅವರು ನಿನ್ನೆ ಗೃಹ ಸಚಿವ ಅಮಿತ್​ಶಾ ಅವರನ್ನು ಹಾಗೂ ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು. ಕುತೂಹಲ ಕೆರಳಿಸಿದ್ದ ಈ ಭೇಟಿ ಕುರಿತು ಮಾತನಾಡಿರವು ಪಕ್ಷ ಇದು, ಪಕ್ಷದ ಸಂಘಟನೆ ಮತ್ತು ಸುಸೂತ್ರ ಸರ್ಕಾರ ರಚನೆ ಹಿನ್ನೆಲೆಯಲ್ಲಿ ದಿನನಿತ್ಯ ನಡೆಯುವ ಭೇಟಿ ಇದಾಗಿದೆ ಇದಕ್ಕೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದಿದೆ.

  2022ರಲ್ಲಿ ಎದುರಾಗಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮುನ್ನ ರಾಜ್ಯದಲ್ಲಿ ಸಚಿವ ಸಂಪುಟ ಪುನರ್​ರಚನೆ ನಡೆಯಲಿದ್ದು, ಎಂಎಲ್​ಸಿ ಎ.ಕೆ ಶರ್ಮಾ ಅವರಿಗೆ ಸಂಪುಟದ ಜವಾಬ್ದಾರಿ ನೀಡುವ ಸಾಧ್ಯತೆ ಕುರಿತು ಕೂಡ ಕೇಳಿ ಬಂದಿದ್ದವು.
  ನ್ಯೂಸ್​ 18 ಮೂಲಗಳ ಪ್ರಕಾರ ಬಿಜೆಪಿ ಶಕ್ತಿ ಮತ್ತು ದೌರ್ಬಲ್ಯ ವಿಶ್ಲೇಷಣೆ ನಡೆಸಲು ನಿರ್ಧರಿಸಿದೆ. ಈಗಾಗಲೇ ನಾಯಕರ ಬಗ್ಗೆ ವೈಯಕ್ತಿಕ ವರದಿ ಸಂಗ್ರಹಿಸಲು ಮುಂದಾಗಿದೆ ಎನ್ನಲಾಗಿದೆ.

  ಇದನ್ನು ಓದಿ: ಪ.ಬಂಗಾಳದಲ್ಲಿ ಶುರವಾಯ್ತು ಘರ್​ ವಾಪ್ಸಿ; ಟಿಎಂಸಿಗೆ ಮರಳಲು ನಿರ್ಧರಿಸಿದ ಮುಕುಲ್​ ರಾಯ್​​

  ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.   ಈಗಾಗಲೇ ಯೋಗಿ ಆದಿತ್ಯ ನಾಥ್ ನಾಯಕತ್ವದ​​ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ನೂತನವಾಗಿ ಬಿಜೆಪಿ ಸೇರಿರುವ ಜಿತಿನ್​ ಪ್ರಸಾದ್​ ಅವರನ್ನು ಮುಂದಿನ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯ ಓಲೈಸಿಕೊಳ್ಳಲು ಪಕ್ಷ ನಡೆಸುವ ತಯಾರಿ ನಡೆಸಿದೆ ಎನ್ನಲಾಗಿದೆ. ಜೊತೆಗೆ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.

  ಅಷ್ಟೇ ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ  ಹುಟ್ಟು ಹಬ್ಬಕ್ಕೆ ಹಾರೈಸಿಲ್ಲ ಎನ್ನಲಾಗಿತ್ತು . ತಮ್ಮದೇ ಪಕ್ಷದ ನಾಯಕರ ಹುಟ್ಟುಹಬ್ಬಕ್ಕೆ ವಿಶ್​ ಮಾಡದ ಪ್ರಧಾನಿ ಮೋದಿ ನಡೆ ಹಲವರಲ್ಲಿ ಪ್ರಶ್ನೆಗಳನ್ನು ಮೂಡಿಸಿದ್ದು, ಅನೇಕ ಊಹಾಪೋಹಕ್ಕೂ ಕಾರಣವಾಗಿತ್ತು.

  ಇನ್ನು ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದು, ಲಸಿಕೆ ಅಭಿಯಾನ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈವರೆಗೂ ಕೇಂದ್ರದಿಂದ ರಾಜ್ಯಗಳಿಗೆ 25.60 ಕೋಟಿ ಡೋಸ್ ಹಂಚಿಕೆಯಾಗಿದೆ. ಈವರೆಗೂ 24.44 ಕೋಟಿ ಡೋಸ್ ಬಳಕೆಯಾಗಿದೆ. ರಾಜ್ಯಗಳಲ್ಲಿ ಸದ್ಯ 1.17 ಕೋಟಿ ಡೋಸ್ ಬಳಕೆಗೆ ಲಭ್ಯವಿದೆ. ಇನ್ನು ಮೂರು ದಿನಗಳಲ್ಲಿ 38 ಲಕ್ಷ ಡೋಸ್ ಹಂಚಿಕೆಯಾಗಕಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Seema R
  First published: