Free Mobile Phones: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಸುಮಾರು ಒಂದು ಕೋಟಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ಫೋನ್ ಮತ್ತು ಟ್ಯಾಬ್ಲೆಟ್ಗಳನ್ನು ವಿತರಿಸಲು ಮುಂದಾಗಿದೆ. ಉತ್ತರ ಪ್ರದೇಶ ರಾಜ್ಯ ಸರ್ಕಾರವು ತಾಂತ್ರಿಕ, ವೈದ್ಯಕೀಯ ಮತ್ತು ನರ್ಸಿಂಗ್ ಸಂಸ್ಥೆಗಳಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ಗಳು ಮತ್ತು ಸ್ಮಾರ್ಟ್ಫೋನ್ಗಳನ್ನು ನೀಡಲಿದೆ. ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಲ್ಲಿ ದಾಖಲಾದವರಿಗೆ ಈ ಸಾಧನಗಳನ್ನು ವಿತರಿಸಲು ರಾಜ್ಯ ಸರ್ಕಾರ ಚಿಂತಿಸಿದೆ ಎಂದು ವಿಷಯ ತಿಳಿದ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
ಶನಿವಾರದಂದು ನಡೆದ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ನವೆಂಬರ್ ಅಂತ್ಯದೊಳಗೆ ಅವರಿಗೆ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಲೆಟ್ಗಳನ್ನು ವಿತರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವರದಿಗಳ ಪ್ರಕಾರ, ಮುಖ್ಯ ಕಾರ್ಯದರ್ಶಿ ಆರ್ ಕೆ ತಿವಾರಿ ಅವರು, ಈ ಸಾಧನಗಳು ವಿದ್ಯಾರ್ಥಿಗಳನ್ನು ಡಿಜಿಟಲ್ ಸಬಲರನ್ನಾಗಿಸುತ್ತವೆ ಮತ್ತು ಅವರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುತ್ತವೆ ಎಂದು ಹೇಳಿದ್ದಾರೆ.
ರಾಜ್ಯದ ವಿಶ್ವವಿದ್ಯಾನಿಲಯಗಳು ತಮಗೆ ಸಂಯೋಜಿತವಾಗಿರುವ ಕಾಲೇಜುಗಳ ನೋಂದಾಯಿತ ವಿದ್ಯಾರ್ಥಿಗಳ ಮಾಹಿತಿಯನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗಳ ಕಛೇರಿಗಳಿಗೆ ಕಳುಹಿಸಿ ಅವರು ಮಾಹಿತಿಯನ್ನು ಪರಿಶೀಲಿಸುತ್ತಾರೆ ಮತ್ತು ಕೈಗಾರಿಕಾ ಅಭಿವೃದ್ಧಿಯ ಆದೇಶದ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಟ್ಯಾಬ್ಲೆಟ್ಗಳು ಮತ್ತು ಸ್ಮಾರ್ಟ್ಫೋನ್ಗಳನ್ನು ವಿತರಿಸಲಿದೆ.
ಇದನ್ನು ಓದಿ:Viral Pic: ನೆಟ್ಟಿಗರ ಮನಗೆಲ್ಲುತ್ತಿದೆ ಈ ಫೋಟೋ; ಪರಿಸರ ಪ್ರೇಮಿ ತುಳಸಿಗೌಡರಿಗೆ ಅಭಿನಂದನೆ ಮಹಾಪೂರ
ಸುಲ್ತಾನ್ಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸುವ ವೇಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ನವೆಂಬರ್ ಅಂತ್ಯದ ವೇಳೆಗೆ ಯುವಕರಿಗೆ ಟ್ಯಾಬ್ಲೆಟ್ಗಳು ಮತ್ತು ಸ್ಮಾರ್ಟ್ಫೋನ್ಗಳನ್ನು ವಿತರಿಸುವುದಾಗಿ ಘೋಷಿಸಿದ್ದಾರೆ. "ಉತ್ತರ ಪ್ರದೇಶದ ಯುವಕರನ್ನು ಇತ್ತೀಚಿನ ತಂತ್ರಜ್ಞಾನದೊಂದಿಗೆ ಸಜ್ಜುಗೊಳಿಸಲು, ರಾಜ್ಯ ಸರ್ಕಾರವು ನವೆಂಬರ್ ಕೊನೆಯ ವಾರದಿಂದ ಟ್ಯಾಬ್ಲೆಟ್ ಮತ್ತು ಲ್ಯಾಪ್ಟಾಪ್ಗಳನ್ನು ಒದಗಿಸಲು ಪ್ರಾರಂಭಿಸುತ್ತದೆ" ಎಂದಿದ್ದಾರೆ.
ಇದನ್ನು ಓದಿ: Success Story: 6 ವರ್ಷಗಳಲ್ಲಿ 12 ಸರ್ಕಾರಿ ಹುದ್ದೆ; ಅನೇಕರಿಗೆ ಸ್ಪೂರ್ತಿ ಈ ಐಪಿಎಸ್ ಅಧಿಕಾರಿಯ ಯಶೋಗಾಥೆ
ಈ ವರ್ಷದ ಆಗಸ್ಟ್ನಲ್ಲಿ ಉತ್ತರ ಪ್ರದೇಶ ರಾಜ್ಯ ಅಸೆಂಬ್ಲಿಯಲ್ಲಿ ಈ ಹಿಂದೆ ಮಂಡಿಸಲಾದ ಪೂರಕ ಬಜೆಟ್ ಅನ್ನು ಅನುಸರಿಸಿ INR 3,000 ಕೋಟಿಯನ್ನು ಯುವಜನರಿಗೆ ಡಿಜಿಟಲ್ ಪರಿಣತಿಯನ್ನು ಮಾಡುವ ಪ್ರಯತ್ನದಲ್ಲಿ ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳನ್ನು ಖರೀದಿಸಲು ಮೀಸಲಿಟ್ಟಿತು. ಸರ್ಕಾರವು ಈಗಾಗಲೇ 2.5 ಮಿಲಿಯನ್ ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳನ್ನು ಖರೀದಿಸಲು ಬಿಡ್ಗಳನ್ನು ಆಹ್ವಾನಿಸಿದೆ. ಶೀಘ್ರದಲ್ಲೇ ಹೆಚ್ಚಿನ ಸಾಧನಗಳನ್ನು ಖರೀದಿಸುವ ನಿರೀಕ್ಷೆಯಿದೆ.
ಪ್ರತ್ಯೇಕವಾಗಿ, ಯುಪಿ ಸರ್ಕಾರವು X ಮತ್ತು XII ತರಗತಿಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಪ್ರಸ್ತಾಪಿಸಿದೆ. ಈ ಸಾಧನಗಳನ್ನು ಖರೀದಿಸಲು ಸಾಧ್ಯವಾಗದ ಉನ್ನತ ವಿದ್ಯಾರ್ಥಿಗಳಿಗೆ 20 ಲಕ್ಷ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲು ರಾಜ್ಯ ಸರ್ಕಾರ ಯೋಚಿಸುತ್ತಿದೆ. ಈ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಳ್ಳಲು ಮಹತ್ವಾಕಾಂಕ್ಷಿ ವಿದ್ಯಾರ್ಥಿಗಳು www.upcmo.up.nic.in ಗೆ ಭೇಟಿ ನೀಡಬೇಕಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ