ನಾಳೆಯಿಂದ 'ಕೆಲಸ ನೀಡಿ' ಅಭಿಯಾನ ನಡೆಸಲಿರುವ ಯೂತ್ ಕಾಂಗ್ರೆಸ್

ನಾಳೆಯಿಂದ ಸಾಮಾಜಿಕ ಜಾಲತಾಣದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗಿ ಯುವಕರ ವಿಡಿಯೋಗಳನ್ನು ಪ್ರಸಾರ ಮಾಡಲಾಗುತ್ತದೆ. ಅಲ್ಲದೆ ಈ ಕೆಳಕಂಡ ಬೇಡಿಕೆಗಳನ್ನು ಇಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯೂತ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಯೂತ್ ಕಾಂಗ್ರೆಸ್​ನಿಂದ ಕೆಲಸ ಕೊಡಿ ಅಭಿಯಾನ

ಯೂತ್ ಕಾಂಗ್ರೆಸ್​ನಿಂದ ಕೆಲಸ ಕೊಡಿ ಅಭಿಯಾನ

  • Share this:
ನವದೆಹಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ನಾಳೆಯಿಂದ ದೇಶಾದ್ಯಂತ ‌'ಕೆಲಸ ನೀಡಿ' ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ.

ಕನ್ನಡಿಗ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಸಕ್ರಿಯವಾಗಿರುವ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದಾ ಒಂದಿಲ್ಲೊಂದು ಪ್ರತಿಭಟನೆ, ಕಾರ್ಯಕ್ರಮ ಮತ್ತು ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದ್ದು, ನಾಳೆಯಿಂದ ದೇಶದುದ್ದಗಲಕ್ಕೂ ಕೆಲಸ ನೀಡಿ (ರೋಜ್ಗಾರ್ ದೋ) ಎಂಬ ಅಭಿಯಾನವನ್ನು  ಆರಂಭಿಸಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಿಂದ ರಾಜ್ಯ, ಜಿಲ್ಲಾ, ತಾಲೂಕು ಮತ್ತು ಗ್ರಾಮಗಳ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಕೇಂದ್ರ ಸರ್ಕಾರವನ್ನು ಎಚ್ಚರಿಸುವುದು ಭಾರತೀಯ ಯೂತ್ ಕಾಂಗ್ರೆಸಿನ ಈ ಅಭಿಯಾನದ ಮುಖ್ಯ ಉದ್ದೇಶ. ನಾಳೆಯಿಂದ ಸಾಮಾಜಿಕ ಜಾಲತಾಣದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗಿ ಯುವಕರ ವಿಡಿಯೋಗಳನ್ನು ಪ್ರಸಾರ ಮಾಡಲಾಗುತ್ತದೆ. ಅಲ್ಲದೆ ಈ ಕೆಳಕಂಡ ಬೇಡಿಕೆಗಳನ್ನು ಇಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯೂತ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಈಗ 30 ಕೋಟಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗ ಸಮಸ್ಯೆಯಿಂದ ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ. ಬಿಜೆಪಿ ಪ್ರತಿ ವರ್ಷ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ವಾಗ್ದಾನ ಮಾಡಿ ಅಧಿಕಾರಕ್ಕೆ ಬಂದಿತ್ತು. ಅದರ ಪ್ರಕಾರ 6 ವರ್ಷಗಳಲ್ಲಿ 12 ಕೋಟಿ ಜನರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಕೋವಿಡ್ 19 ಸಂದರ್ಭವೊಂದರಲ್ಲೇ ಸುಮಾರು 12 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದ್ದರಿಂದ ಯುವ ಕಾಂಗ್ರೆಸ್ 'ಕೆಲಸ ನೀಡಿ' ಎಂಬ ಅಭಿಯಾನ ಕೈಗೆತ್ತಿಕೊಳ್ಳುತ್ತಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ; ಕುಚುಕು ಗೆಳೆಯ ರಾಮುಲು ಜನ್ಮದಿನಕ್ಕೆ ಕವನದ ಮೂಲಕ ಶುಭಾಶಯ ಕೋರಿದ ಜನಾರ್ದನ ರೆಡ್ಡಿ

ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಕೂಡಲೇ ರೈಲ್ವೆ ಮತ್ತು ಇತರೆ ಸರ್ಕಾರಿ ಸಂಸ್ಥೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು. ಕೊರೋನಾ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡವರಿಗೆ ಆರ್ಥಿಕ ನೆರವು ನೀಡಬೇಕು.
ಸರ್ಕಾರಿ ಇಲಾಖೆಗಳಲ್ಲಿ ಇರುವ ಹುದ್ದೆಗಳನ್ನು ರದ್ದುಗೊಳಿಸಬಾರದು.
ನೇಮಕಾತಿ ಬಗ್ಗೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥ ಆಗುವಂತೆ ಮಾಡಿ ಎಂದು ಯೂತ್ ಕಾಂಗ್ರೆಸ್ ಆಗ್ರಹಿಸಲಿದೆ.
Published by:HR Ramesh
First published: