ಶಿವಮೊಗ್ಗ: ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಂದ ಉದ್ಘಾಟನೆಗೊಂಡ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Shivamogga Airport) ಸದ್ಯದಲ್ಲೇ ವಿಮಾನ ಹಾರಾಟ ಆರಂಭಗೊಳ್ಳಲಿದೆ. ಈ ಕುರಿತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ (BY Raghavendra) ಅಧಿಕೃತ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಶೀಘ್ರದಲ್ಲೇ ವಿಮಾನ ಹಾರಾಟ ಶುರುವಾಗಲಿದೆ. ಇಂಡಿಗೋ ಏರ್ಲೈನ್ಸ್ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಸೇವೆ ನೀಡಲಿದೆ. ಅಲ್ಲದೇ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡುವವರಿಗೆ ಹೊಸ ಸೌಲಭ್ಯವೊಂದು ಸಹ ದೊರೆಯಲಿದೆ.
ಶಿವಮೊಗ್ಗ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಸಿಗಲಿದೆ ಭರ್ಜರಿ ಸಬ್ಸಿಡಿ
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಆರಂಭಿಕ ದಿನಗಳಲ್ಲಿ 500 ರೂ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಈ ಸಬ್ಸಿಡಿಯಿಂದ ಸರ್ಕಾರಕ್ಕೆ ಪ್ರತಿದಿನ 72 ಸಾವಿರ ಹಣ ಅಗತ್ಯವಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನದಲ್ಲಿ ಇದ್ದವರು ಇವ್ರೇ!
ಇನ್ನೂ ಹಲವು ನಗರಗಳಿಗೆ ಸೌಲಭ್ಯ
ಇನ್ನು ಕೆಲವೇ ದಿನಗಳಲ್ಲಿ ಶಿವಮೊಗ್ಗದಿಂದ ಬೆಂಗಳೂರಿನ ಜೊತೆಗೆ ಇನ್ನೂ ಹಲವು ನಗರಗಳಿಗೆ ವಿಮಾನ ಪ್ರಯಾಣ ಸೇವೆ ಆರಂಭವಾಗಲಿದೆ. ಈ ಕುರಿತು ವಿವರವನ್ನು ಒದಗಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.
ಇಡೀ ರಾಷ್ಟ್ರದಲ್ಲಿಯೇ ಅತ್ಯಂತ ಕಡಿಮೆ ವೆಚ್ಚ ಅಂದರೆ, 449 ಕೋಟಿ ರೂ. ನಲ್ಲಿ ಕಾಮಗಾರಿ ಮುಗಿದಿರುವ ಏಕೈಕ ವಿಮಾನ ನಿಲ್ದಾಣವೆಂದೇ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಖ್ಯಾತಿ ಪಡೆದುಕೊಂಡಿದೆ.
ಇದನ್ನೂ ಓದಿ: Shivamogga Airport: ಶಿವಮೊಗ್ಗದಲ್ಲಿ ಸಿಗಲಿದೆ ಈ ಸಂಸ್ಥೆಗಳ ವಿಮಾನ ಸೇವೆ!
ಶಿವಮೊಗ್ಗದ 775 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡದೇ ಸುಂದರ ವಿಮಾನ ನಿಲ್ದಾಣ. ರಾಜ್ಯದಲ್ಲಿಯೇ ಬೆಂಗಳೂರು ಹೊರತುಪಡಿಸಿದರೆ, ಅತ್ಯಂತ ಉದ್ದದ ರನ್ ವೇ ಹೊಂದಿರುವ ಏಕೈಕ ವಿಮಾನ ನಿಲ್ದಾಣವೆಂದೇ ಇದು ಖ್ಯಾತಿ ಪಡೆದಿದೆ.
220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಸುಮಾರು 660 ಎಕರೆ ಪ್ರದೇಶದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ಶಿವಮೊಗ್ಗ ವಿಮಾನ ನಿಲ್ದಾಣ 45 ಮೀಟರ್ ಅಗಲದ 3,200 ಮೀಟರ್ ಉದ್ದದ ರನ್ ವೇ ಹೊಂದಿದೆ.
ಮಲೆನಾಡಿನಲ್ಲಿ ಅತ್ಯಂತ ಆಧುನಿಕ ಸೌಲಭ್ಯ
ಒಟ್ಟಾರೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆಯೋದು ಪಕ್ಕಾ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ