News18 India World Cup 2019

ಏಷ್ಯಾ ಕಪ್​ಗೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ವಿಶ್ರಾಂತಿ, ಇಬ್ಬರು ಕನ್ನಡಿಗರಿಗೆ ಸ್ಥಾನ

news18
Updated:September 1, 2018, 3:07 PM IST
ಏಷ್ಯಾ ಕಪ್​ಗೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ವಿಶ್ರಾಂತಿ, ಇಬ್ಬರು ಕನ್ನಡಿಗರಿಗೆ ಸ್ಥಾನ
news18
Updated: September 1, 2018, 3:07 PM IST
ನ್ಯೂಸ್ 18 ಕನ್ನಡ

ಸೆಪ್ಟೆಂಬರ್ 15ರಿಂದ ಯುಎಇನಲ್ಲಿ ಆರಂಭವಾಗಲಿರುವ ಏಷ್ಯಾಕಪ್​​ಗೆ ಭಾರತ ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ನಾಯಕನ ಜವಾಬ್ದಾರಿಯನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಅಂತೆಯೆ ಉಪ ನಾಯಕನಾಗಿ ಶಿಖರ್ ಧವನ್ ಇದ್ದಾರೆ.

ಎಂಎಸ್​ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯು ಕೇದಾರ್ ಜಾದವ್, ಅಂಬಾಟಿ ರಾಯುಡು, ಕನ್ನಡಿಗ ಮನೀಶ್ ಪಾಂಡೆ ಹಾಗೂ ಕೆಎಲ್ ರಾಹುಲ್​​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಜೊತೆಗೆ ಯುವ ಆಟಗಾರ ವೇಗಿ ಖಲೀಲ್ ಅಹಮ್ಮದ್ ಮೊದಲ ಬಾರಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಟೂರ್ನಿಯು ಸೆ. 15ರಿಂದ ಆರಂಭವಾಗಿ ಸೆ. 28ರ ವರೆಗೆ ನಡೆಯಲಿದೆ.

 ಏಷ್ಯಾ ಕಪ್​​ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್ (ಉಪ ನಾಯಕ), ಕೆಎಲ್ ರಾಹುಲ್, ಅಂಬಾಟಿ ರಾಯುಡು, ಮನೀಶ್ ಪಾಂಡೆ, ಕೇದರ್ ಜಾದವ್, ಎಂಎಸ್ ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್​ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹಮ್ಮದ್
First published:September 1, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...