Asia Cup 2022: ಏಷ್ಯಾ ಕಪ್​ಗೆ ಪ್ರಮುಖ ತಂಡಗಳ ಪ್ರಕಟ, ಇಲ್ಲಿದೆ ಟೀಂಗಳ ಸಂಪೂರ್ಣ ವಿವರ

ಏಷ್ಯಾ ಕಪ್​ 2022 ಈ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಅಲ್ಲಿನ ಆರ್ಥಿಕ ತೊಂದರೆ ಕಾರಣದಿಂದ ಟೂರ್ನಿಯನ್ನು ಯುಎಇ ಅಲ್ಲಿ ನಡೆಸಲಾಗುತ್ತಿದೆ. ಅಲ್ಲದೇ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪ್ರಮುಖ ತಂಡಗಳ ಆಟಗಾರರ ಪಟ್ಟಿಯನ್ನು ನೋಡೋಣ ಬನ್ನಿ.

ಏಷ್ಯಾ ಕಪ್ 2022

ಏಷ್ಯಾ ಕಪ್ 2022

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯನ್ನು ಈ ಬಾರಿ ಯುಎಇಗೆ (UAE) ಸ್ಥಳಾಂತರಿಸಲಾಗಿದೆ. ಸದ್ಯ ಟೂರ್ನಿಯ ವೇಳಾಪಟ್ಟಿ ಸಹ ಪ್ರಕಟವಾಗಿದ್ದು, ಈಗಾಗಲೇ ಬಿಸಿಸಿಐ (BCCI) ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಭಾರತ ತಂಡಕ್ಕೆ ರೋಹಿತ್​ ಶರ್ಮಾ (Rohit Sharma) ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದರೆ, ಕನ್ನಡಿಗ ಕೆಎಲ್​ ರಾಹುಲ್ (KL Rahul)​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಿದೆ. ಕೇವಲ ಭಾರತ ತಂಡ ಮಾತ್ರವಲ್ಲದೇ ಉಳಿದ ಎಲ್ಲಾ ತಂಡಗಳನ್ನು ಪ್ರಕಟಿಸಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ದೇಶ ಸೇರಿದಂತೆ ಎಲ್ಲಾ ತಂಡಗಳ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಿದ್ದರೆ ಯಾವೆಲ್ಲಾ ತಂಡಗಳಲ್ಲಿ ಯಾವೆಲ್ಲಾ ಆಟಗಾರರು ಈ ಬಾರಿ ಏಷ್ಯಾ ಕಪ್​ 2022ಗೆ ಆಯ್ಕೆ ಆಗಿದ್ದಾರೆ ಎಂದು ನೋಡೋಣ ಬನ್ನಿ.

ಏಷ್ಯಾ ಕಪ್​ 2022ರಲ್ಲಿ ಭಾಗವಹಸಿಲಿರುವ ತಂಡಗಳ ಆಟಗಾರರ ಪಟ್ಟಿ:

ಏಷ್ಯಾ ಕಪ್​ 2022 ಈ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಅಲ್ಲಿನ ಆರ್ಥಿಕ ತೊಂದರೆ ಕಾರಣದಿಂದ ಟೂರ್ನಿಯನ್ನು ಯುಎಇ ಅಲ್ಲಿ ನಡೆಸಲಾಗುತ್ತಿದೆ. ಅಲ್ಲದೇ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪ್ರಮುಖ ತಂಡಗಳ ಆಟಗಾರರ ಪಟ್ಟಿಯನ್ನು ನೋಡೋಣ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.

ಇದನ್ನೂ ಓದಿ: Virat Kohli-Anushka Sharma: ಮುಂಬೈ ಬೀದಿಗಳಲ್ಲಿ ಸುತ್ತಾಡಿದ ವಿರಾಟ್​-ಅನುಷ್ಕಾ, ಸ್ಕೂಟರ್ ಸವಾರಿ ಮಾಡಿದ ಸ್ಟಾರ್​​ ಜೋಡಿ

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರವೂಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ದಹಾನಿ.

ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಚರಿತ್ ಅಸಲಂಕಾ (ಉಪನಾಯಕ), ಧನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಶಾಲ್ ಮೆಂಡಿಸ್ (ವಿಕೆಟ್‌ಕೀಪರ್), ಭಾನುಕಾ ರಾಜಪಕ್ಸೆ (ವಿಕೆಟ್‌ಕೀಪರ್), ಅಶೆನ್ ಬಂಡಾರ, ಧನಂಜಯ ಡಿ ಸಿಲ್ವಾ, ವನಿಂದು ಹಸ್ಸರಂಗ, ಮಹೇಶ್ ಟೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ದ್ವಾಂಡರ್ಸೆ ಚಮೀರ, ಬಿನೂರ ಫೆರ್ನಾಂಡೊ, ಚಾಮಿಕ ಕರುಣಾರತ್ನೆ, ದಿಲ್ಶನ್ ಮಧುಶಂಕ, ಮತಿಶ ಪತಿರಾನ, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ನುವಾನಿಂದು ಫೆರ್ನಾಂಡೊ, ಕಸುನ್ ರಜಿತ.

ಅಫ್ಘಾನಿಸ್ತಾನ ತಂಡ: ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್, ಅಫ್ಸರ್ ಝಝೈ, ಅಜ್ಮತುಲ್ಲಾ ಒಮರ್ಜಾಯ್, ಫರೀದ್ ಅಹ್ಮದ್ ಮಲಿಕ್, ಫಜಲ್ ಹಕ್ ಫಾರೂಕಿ, ಹಶ್ಮತುಲ್ಲಾ ಶಾಹಿದಿ, ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ಮುಜಿಬ್ ಉಲ್ ರಹಮಾನ್, ಮುಜಿಬ್ ಹಕ್, ನೂರ್ ಅಹ್ಮದ್, ರಹಮಾನುಲ್ಲಾ ಗುರ್ಬಾಜ್, ರಶೀದ್ ಖಾನ್ ಮತ್ತು ಸಮೀವುಲ್ಲಾ ಶಿನ್ವಾರಿ.

ಇದನ್ನೂ ಓದಿ: Asia Cup 2022: ಏಷ್ಯಾ ಕಪ್​ ಇತಿಹಾಸದ ಬಗ್ಗೆ ನಿಮಗೆಷ್ಟು ಗೊತ್ತು? 38 ವರ್ಷಗಳ ಟೂರ್ನಿಯ ಕುರಿತು ತಿಳಿದುಕೊಳ್ಳಿ

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಅನ್ಮೋಲ್ ಹಕ್, ಪರ್ವೇಜ್ ಎಮಾನ್, ಅಫೀಫ್ ಹೊಸೈನ್, ಮುಶ್ಫಿಕರ್ ರಹೀಮ್, ಮಹಮದುಲ್ಲಾ, ತಸ್ಕಿನ್, ನೂರುಲ್ ಹಸನ್, ಸಬ್ಬೀರ್ ರೆಹಮಾನ್, ಮೊಸದ್ದೆಕ್ ಹೊಸೈನ್, ಸೈಫುದ್ದೀನ್, ಮಹೇದಿ ಹಸನ್, ಮಹಿದಿ ಮಿರಾಜ್, ನಸೋಮ್, ಮುಸ್ತಾಫಿಕ್.
Published by:shrikrishna bhat
First published: