Asia Cup Final SL vs PAK: ಇಂದು ಏಷ್ಯಾ ಕಪ್​ 2022 ಫೈನಲ್ ಪಂದ್ಯ, ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಮೆಗಾ ಫೈಟ್​

Asia Cup Final SL vs PAK: ಏಷ್ಯಾ ಕಪ್ T20 ಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

PAK vs SL

PAK vs SL

  • Share this:
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ  ಇಂದು ನಡೆಯಲಿರುವ ಏಷ್ಯಾಕಪ್ ಫೈನಲ್ (Asia Cup Final)ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ (PAK v SL ) ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ದಸುನ್ ಶನಕಾ ನೇತೃತ್ವದ ಶ್ರೀಲಂಕಾ ತಂಡ ಸೂಪರ್ 4ನ (Super 4) ಎಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್‌ಗೆ ತಲುಪಿದೆ. ಅದರಲ್ಲಿಯೂ ಸೀಪರ್ 4ನಲ್ಲಿ ಪಾಕ್​ ಎದುರು ಅಮೋಘ ಗೆಲುವು ದಾಖಲಿಸಿರುವ ಲಂಕಾ ಪಡೆ ಇಂದು ಮತ್ತೊಮ್ಮೆ ಗೆದ್ದು 6ನೇ ಬಾರಿ ಏಷ್ಯಾ ಕಪ್​ 2022 (Asia cup 2022) ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ಆದರೆ ಸೂಪರ್ ಫೋರ್‌ನ ಕೊನೆಯ ಪಂದ್ಯದಲ್ಲಿ ಬಾಬರ್ ಅಜಮ್ ( Babar Azam) ನೇತೃತ್ವದ ಪಾಕಿಸ್ತಾನವು ಸಿಂಹಳಿಯರ ಎದುರು ಸೋತಿದ್ದು, ಇಂದಿನ ಪಂದ್ಯ ಗೆದ್ದು ಸೇಡು ತೀರಿಸಿಕೊಳ್ಳುವ ಜೊತೆ 3ನೇ ಬಾರಿಗೆ ಏಷ್ಯಾ ಕಪ್​ಗೆ ಮುತ್ತಿಕ್ಕಲು ಹವಣಿಸುತ್ತಿದೆ. ಹಾಗಿದ್ದರೆ ಉಭಯ ತಂಡಗಳ ಪ್ಲೇಯಿಂಗ್​ 11 ಹೇಗಿದೆ ಎಂದು ನೋಡೋಣ ಬನ್ನಿ.

ಪಂದ್ಯದ ವಿವರ:

ಏಷ್ಯಾ ಕಪ್​ 2022ರ ಫೈನಲ್​ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಅಂತಿಮ ಹಣಾಹಣಿಯಲ್ಲಿ ಇಂದು ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್​ ಮತ್ತು 7:30 ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಪಿಚ್​ ರಿಪೋರ್ಟ್:

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿನ ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಹೆಚ್ಚಿನ ಸಹಾಯವನ್ನು ಪಡೆಯಬಹುದು. ಟಾಸ್ ಗೆದ್ದ ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಖಚಿತವಾಗಿದೆ. ಏಕೆಂದರೆ ಈ ಪಿಚ್​ನಲ್ಲಿ ಚೇಸಿಂಗ್​ ಮಾಡಿದ ತಂಡವೇ ಹೆಚ್ಚು ಗೆಲುವು ದಾಖಲಿಸಿದ ಕಾರಣ ಮೊದಲು ಇಂದು ಟಾಸ್​ ಮಹತ್ವದ ಪಾತ್ರ ನಿರ್ವಹಿಸಲಿದೆ.

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ಗೆ ಹೇಗಿದೆ ನೋಡಿ ಆಶಿಶ್ ನೆಹ್ರಾ, ಪ್ರಮುಖ ಆಟಗಾರನಿಗಿಲ್ಲ ಅವಕಾಶವಿಲ್ಲ

ಲಂಕಾ-ಪಾಕ್​ ಹೆಡ್​ ಟು ಹೆಡ್​:

ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಈವರೆಗೆ ಒಟ್ಟು 22 ಟಿ20 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಪಾಕಿಸ್ತಾನ 13 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಗೆದ್ದಿದೆ. ಪಾಕಿಸ್ತಾನ ಮೂರನೇ ಬಾರಿಗೆ ಚಾಂಪಿಯನ್ ಆಗುವ ತವಕದಲ್ಲಿದ್ದರೆ, ಶ್ರೀಲಂಕಾ ತಂಡ ಆರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಉದ್ದೇಶದಿಂದ ಕಣಕ್ಕಿಳಿಯಲಿದೆ. ಪ್ರಸಕ್ತ ಟೂರ್ನಿಯಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಸರಿಸಮವಾದ ಪ್ರದರ್ಶನವನ್ನು ನೀಡಿದೆ.

SL vs PAK ಸಂಭಾವ್ಯ ಪ್ಲೇಯಿಂಗ್ XI:

ಶ್ರೀಲಂಕಾ ಸಂಭಾವ್ಯ ತಂಡ: ದನುಷ್ಕ ಗುಣತಿಲಕ, ಪಥುಮ್‌ ನಿಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭನುಕಾ ರಾಜಪಕ್ಷ, ದಸುನ್‌ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಣ.

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಸಮಸ್ಯೆಗಳು

ಪಾಕಿಸ್ತಾನ ಸಂಭಾವ್ಯ ತಂಡ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ಫಖರ್ ಜಮಾನ್, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಕುಶ್ದಿಲ್ ಶಾ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್.
Published by:shrikrishna bhat
First published: