Asia Cup 2022 IND vs PAK: ಟಾಸ್​ ಗೆದ್ದ ಟೀಂ ಇಂಡಿಯಾ, ತಂಡದಲ್ಲಿ ಮಹತ್ವದ ಬದಲಾವಣೆ; ಹೇಗಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs PAK: ಭಾರತ ಮತ್ತು ಪಾಕಿಸ್ತಾನ ತಂಡಗಳು ಕಳೆದ 10 ತಿಂಗಳ ನಂತರ ಇದೀಗ ಮತ್ತೆ ಏಷ್ಯಾ ಕಪ್​ನಲ್ಲಿ ಮುಖಾಮುಖಿ ಆಗುತ್ತಿವೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್​ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

IND vs PAK

IND vs PAK

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಯುಎಇ (UAE) ಅಲ್ಲಿ ಅದ್ಧೂರಿಯಾಗಿ ಆರಂಭವಾಗಿದೆ. ಅಲ್ಲದೇ ಇಂದು ಭಾರತ ಮತ್ತು ಪಾಕಿಸ್ತಾನ (IND vs PAK) ನಡುವೆ ಹೈವೋಲ್ಟೇಜ್​ ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಂದ್ಯದ ಟಾಸ್​ ಆಗಿದ್ದು, ಟಾಸ್​ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ  ( Rohith Sharma) ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದು, ಪಾಕಿಸ್ತಾನ ತಂಡವು ಮೊದಲು ಬ್ಯಾಟಿಂಗ್​ ಮಾಡಲಿದೆ. ಈಗಾಗಲೇ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್​ ಚೇಸಿಂಗ್​ ಮಾಡಿರುವ ತಂಡ ಹೆಚ್ಚು ಗೆಲುವು ಸಾಧಿಸಿದ್ದು, ಇಂದಿನ ಪಂದ್ಯದಲ್ಲಿ ಭಾರತ ತಂಡವು ಪಾಕ್​ ಟಾರ್ಗೆಟ್​​ ಅನ್ನು ಚೇಸ್​ ಮಾಡಲಿದೆ. ಜೊತೆಗೆ ಪಾಕ್​ ಪಂದ್ಯದ ವೇಳೆ ಕಣಕ್ಕಿಳಿಯುತ್ತಿದ್ದಂತೆ ವಿರಾಟ್​ ಕೊಹ್ಲಿ ವಿಶೇಷ ಸಾಧನೆ ಮಾಡಲಿದ್ದಾರೆ. ಅವರು 100ನೇ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದಂತಾಗುತ್ತದೆ.

ಪಿಚ್​ ವರದಿ:

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿನ ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಸ್ವಲ್ಪ ಸಹಾಯವನ್ನು ಪಡೆಯಬಹುದು. ಸ್ಪಿನ್ ಸ್ನೇಹಿಯಾಗಿದೆ ಎಂದು ತೋರುತ್ತದೆ ಆದರೆ ಇತ್ತೀಚಿನ ದಿನಗಳಲ್ಲಿ ಇದು ವೇಗದ ಬೌಲರ್‌ಗಳಿಗೆ ಸಹಾಯ ಮಾಡಿದೆ.

ಹೊಸ ಬೌಲ್​ನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಈ ಪಿಚ್​ನಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆಲುವು ದಾಖಲಿಸಿದೆ. ಪಿಚ್​ನ ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಅಗಿದೆ. 211 ರನ್ ಗರಿಷ್ಠ ಸ್ಕೋರ್​ ಆಗಿದೆ ಮಳೆಯ ಅಡ್ಡಿ ಪಂದ್ಯಕ್ಕಾಗುವ ಯಾವುದೇ ಸಾಧ್ಯತೆಗಳಿಲ್ಲ.

ಇದನ್ನೂ ಓದಿ: IND vs PAK: ಟೀಂ ಇಂಡಿಯಾ ಗೆಲುವಿಗಾಗಿ ಕ್ರಿಕೆಟ್ ಭಕ್ತರ ಪೂಜೆ, ಗೆದ್ದು ಬಾ ಭಾರತ ಅಂತ ಮಂದಿರ-ಮಸೀದಿಗಳಲ್ಲಿ ಪ್ರಾರ್ಥನೆ!

ಭಾರತ-ಪಾಕ್​ ಹೆಡ್​ ಟು ಹೆಡ್​:

ಏಷ್ಯಾಕಪ್ ನಲ್ಲಿ ಈ ಎರಡು ತಂಡಗಳು ಇದುವರೆಗೆ 14 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 8 ಪಂದ್ಯಗಳನ್ನು ಗೆದ್ದಿದೆ. ಪಾಕಿಸ್ತಾನ 5 ಬಾರಿ ಗೆದ್ದಿದೆ. ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಎರಡು ತಂಡಗಳು ಟಿ20ಯಲ್ಲಿ 8 ಬಾರಿ ಮುಖಾಮುಖಿ ಆಗಿದ್ದರೆ, ಭಾರತ 6 ಬಾರಿ ಗೆದ್ದಿದ್ದರೆ, ಪಾಕಿಸ್ತಾನ 2 ಬಾರಿ ಮಾತ್ರ ಗೆದ್ದಿದೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಪಾಕಿಸ್ತಾನ 10 ವಿಕೆಟ್‌ಗಳಿಂದ ಗೆದ್ದಿತು.

ಇದನ್ನೂ ಓದಿ: Asia Cup 202 IND vs PAK: ಭಾರತ-ಪಾಕಿಸ್ತಾನ ಪಂದ್ಯ ನೋಡಿದ್ರೆ ಬೀಳುತ್ತೆ ದಂಡ, ಇದೆಂತಾ ರೂಲ್ಸ್ ಗುರು!

IND vs PAK ಪ್ಲೇಯಿಂಗ್​ 11:

ಭಾರತ ತಂಡದ ಪ್ಲೇಯಿಂಗ್​ 11: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡದ ಪ್ಲೇಯಿಂಗ್​ 11: ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ರಿಜ್ವಾನ್, ಆಸಿಫ್ ಅಲಿ, ಇಫ್ತಿಕರ್ ಅಹ್ಮದ್, ಕುಶ್ ದಿಲ್ ಶಾ, ಶಾದಾಬ್ ಖಾನ್, ಹರೀಶ್ ರವೂಫ್, ನಸೀಮ್ ಶಾ, ಮೊಹಮ್ಮದ್ ನವಾಜ್, ದಹಾನಿ.
Published by:shrikrishna bhat
First published: