IND vs PAK Asia Cup 2022: ಭಾರತ-ಪಾಕ್​ ಪಂದ್ಯ, ಟೀಂ ಇಂಡಿಯಾ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ಫಿಕ್ಸ್

IND vs PAK: ಭಾರತ ಮತ್ತು ಪಾಕ್ ತಂಡಗಳ ಪ್ಲೇಯಿಂಗ್​ 11 ಬಗ್ಗೆ ಈವರೆಗೂ ಯಾವುದೇ ಸ್ಪಷ್ಟನೆ ದೊರಕಿಲ್ಲ ಎಂದರೂ ತಪ್ಪಾಗಲಾರದು. ಆದರೆ ಟೀಂ ಇಂಡಿಯಾ ಪಾಳಯದಲ್ಲಿ ಬದಲಾವಣೆ ಫಿಕ್ಸ್ ಎನ್ನಲಾಗುತ್ತಿದೆ.

IND vs PAK

IND vs PAK

  • Share this:
ಏಷ್ಯಾ ಕಪ್​ 2022ರ (Asia Cup 2022) ಲೀಗ್​ ಹಂತ ಈಗಾಗಲೇ ಮುಗಿದಿದೆ. ಭಾರತ ಸೇರಿದಂತೆ ಟೂರ್ನಿಯ ಪ್ರಮುಖ 4 ತಂಡಗಳಾದ ಪಾಕಿಸ್ತಾನ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಸೂಪರ್ 4 ಹಂತಕ್ಕೆ ತಲುಪಿದೆ.  ಇದೀಗ ಸೂಪರ್ 4 ಹಂತದ ಭಾಗವಾಗಿ ಇಂದಿನ ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ (IND vs PAK) ತಂಡಗಳು ಸೆಣಸಾಡಲಿವೆ. ಆದರೆ ಉಭಯ ತಂಡಗಳೆರಡಕ್ಕೂ ಇಂದಿನ ಪಂದ್ಯದಲ್ಲಿ ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಭಾರತ ಮತ್ತು ಪಾಕ್ ತಂಡಗಳ ಆಟಗಾರರ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟನೇ ದೊರಕಿಲ್ಲ ಎಂದರೂ ತಪ್ಪಾಗಲಾರದು. ಆದರೆ ಟೀಂ ಇಂಡಿಯಾ ಪಾಳಯದಲ್ಲಿ ಬದಲಾವಣೆ ಫಿಕ್ಸ್ ಎನ್ನಲಾಗುತ್ತಿದೆ.

ಸ್ಟಾರ್​ ಪ್ಲೇಯರ್​ಗಳು ಟೂರ್ನಿಯಿಂದ ಹೊರಕ್ಕೆ:

ಹೌದು, ಈಗಾಗಲೇ ಮೊಣಕಾಲು ಗಾಯದಿಂದ ಟೀಂ ಇಂಡಿಯಾದ ಸ್ಟಾರ್​ ಆಲ್​ರೌಂಡರ್​  ರವೀಂದ್ರ ಜಡೇಜಾ ಟೂರ್ನಿಯಿಂದಲೇ ಹೊರನಡೆದಿದ್ದಾರೆ. ಇದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅತ್ತ ಪಾಕಿಸ್ತಾನ ತಂಡದಲ್ಲಿಯೂ ಸ್ಟಾರ್​ ಬೌಲರ್​ ಗಾಯಾಳುವಾಗಿದ್ದು, ಇಂದಿನ ಪಂದ್ಯಕ್ಕೆ ಲಭ್ಯವಿರುವುದಿಲ್ಲವೆಂದು ಹೇಳಲಾಗಿದೆ. ಪಾಕ್​ನ  ಶಾನವಾಜ್ ದಹಾನಿ ಅವರು ಏಷ್ಯಾ ಕಪ್‌ನ ಸೂಪರ್ 4 ಪಂದ್ಯದಲ್ಲಿ ಭಾರತ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ ಎಂದು ಪಾಕ್​ ಮಂಡಳಿ ತಿಳಿಸಿದೆ. ಇದರಿಂದಾಗಿ ಉಭಯ ತಂಡಗಳೆರಡರಲ್ಲಿಯೂ ಸ್ಟಾರ್​ ಆಟಗಾರರ ಅನುಪಸ್ಥಿತಿ ಎದ್ದು ಕಾಡುತ್ತಿದೆ.

ಇದರಿಂದಾಗಿ ಉಭಯ ತಂಡಗಳೆರಡರಲ್ಲಿಯೂ ಪ್ಲೇಯಿಂಗ್​ 11 ಅಲ್ಲಿ ಬದಲಾವಣೆ ಫಿಕ್ಸ್ ಎಂದು ಹೇಳಲಾಗುತ್ತಿದೆ. ಜಡೇಜಾ ಬದಲಿಗೆ ಈಗಾಗಲೇ ಅಕ್ಷರ್​ ಪಟೇಲ್​ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಅವರನ್ನು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಸುವುದು ಅನುಮಾನ ಎನ್ನಲಾಗುತ್ತಿದೆ. ಹಾಗಿದ್ದರೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್​ 111 ಹೇಗಿರಲಿದೆ ಎಂದು ನೋಡೋಣ ಬನ್ನಿ.

ಇದನ್ನೂ ಓದಿ: IND vs PAK Asia Cup 2022: ಆ ಪದ ಹೇಳೋಕೆ ನಾಚಿಕೊಂಡ ರಾಹುಲ್​ ದ್ರಾವಿಡ್! ವಿಡಿಯೋ ಸಿಕ್ಕಾಪಟ್ಟೆ ವೈರಲ್​​

IND vs PAK ಸಂಭಾವ್ಯ ಪ್ಲೇಯಿಂಗ್ 11:

ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ , ದೀಪಕ್ ಹೂಡಾ, ಭುವನೇಶ್ವರ್ ಕುಮಾರ್ , ಅಶ್ವಿನ್ , ಯುಜ್ವೇಂದ್ರ ಚಹಾಲ್ , ಅರ್ಷದೀಪ್ ಸಿಂಗ್.

ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ 11: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್) , ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಹ್ಯಾರಿಸ್ ರೌಫ್, ನಸೀಮ್ ಶಾ ಮತ್ತು ಹಸನ್ ಅಲಿ/ಮೊಹಮ್ಮದ್ ಹಸ್ನೈನ್.

ಪಂದ್ಯದ ವಿವರ:

ಏಷ್ಯಾ ಕಪ್​ 2022ರ ಸೂಪರ್​ 4 ಹಂತದ 2ನೇ ಭಾರತ ಮತ್ತು ಪಾಕ್​ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್​ ಮತ್ತು 7:30 ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಇದನ್ನೂ ಓದಿ: IND vs PAK Asia Cup 2022: ಟೀಂ ಇಂಡಿಯಾಗೆ ತಲೆನೋವಾದ ಪಾಕಿಸ್ತಾನದ ಈ 5 ಆಟಗಾರರು

ಪಿಚ್​ ರಿಪೋರ್ಟ್:

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿನ ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಹೆಚ್ಚಿನ ಸಹಾಯವನ್ನು ಪಡೆಯಬಹುದು. ಟಾಸ್ ಗೆದ್ದ ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಖಚಿತವಾಗಿದೆ.
Published by:shrikrishna bhat
First published: