IND vs PAK: ಟೀಂ ಇಂಡಿಯಾ ಗೆಲುವಿಗಾಗಿ ಕ್ರಿಕೆಟ್ ಭಕ್ತರ ಪೂಜೆ, ಗೆದ್ದು ಬಾ ಭಾರತ ಅಂತ ಮಂದಿರ-ಮಸೀದಿಗಳಲ್ಲಿ ಪ್ರಾರ್ಥನೆ!

IND vs PAK: ದುಬೈನ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಭಾರತ ಮತ್ತು ಪಾಕ್​ ಪಂದ್ಯ ನಡೆಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲಿ ಎಂದು ಬೆಳಗಾವಿಯಲ್ಲಿ ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

IND vs PAK

IND vs PAK

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಯುಎಇ (UAE) ಅಲ್ಲಿ ಅದ್ಧೂರಿಯಾಗಿ ಆರಂಭವಾಗಿದೆ. ಅಲ್ಲದೇ ಇಂದು ಭಾರತ ಮತ್ತು ಪಾಕಿಸ್ತಾನ (IND vs PAK) ನಡುವೆ ಹೈವೋಲ್ಟೇಜ್​ ಮುಖಾಮುಖಿ ಆಗಲಿದ್ದು, ಇದೊಂದು ಪಂದ್ಯಕ್ಕಾಗಿ ಕ್ರಿಕೆಟ್​ ಲೋಕವೇ ಕಾತುರದಿಂದ ಕಾದಿದೆ. ಹೀಗಾಗಿ ಪ್ರತಿ ಬಾರಿಯೂ ಈ ಪಂದ್ಯ ಆರಂಭವಾಗುವ ಮುನ್ನ ಅನೇಕರು ಟೀಂ ಇಂಡಿಯಾ ಗೆಲ್ಲಲೆಂದು ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಇವೆಲ್ಲವನ್ನೂ ಅನೇಕ ವರ್ಷಗಳಿಂದ ನಾವೆಲ್ಲರೂ ನೋಡಿಕೊಂಡು ಬಂದಿದ್ದೇವೆ. ಆದರೆ ಇದೀಗ ಬೆಳಗಾವಿಯಲ್ಲಿ ಭಾರತ ತಂಡ ಗೆಲ್ಲಲೇ ಬೇಕು ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.  ಪಾಕ್​ ಎದುರು ಭಾರತ ತಂಡ ಜಯ ಸಾಧಿಸಲಿ ಎಂದು ವಿಶೇಷ ಪಾರ್ಧನೆಯನ್ನು ಮಾಡಿ ಟೀಂ ಇಂಡಿಯಾ ಪರ ಘೋಷಣೆಗಳನ್ನು ಕೂಗಿದ್ದಾರೆ.

ಟೀಂ ಇಂಡಿಯಾ ಗೆಲುವಿಗೆ ವಿಶೇಷ ಪ್ರಾರ್ಥನೆ:

ಇಂದು ದುಬೈನ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಭಾರತ ಮತ್ತು ಪಾಕ್​ ಪಂದ್ಯ ನಡೆಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲಿ ಎಂದು ಬೆಳಗಾವಿಯಲ್ಲಿ ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟ್ರ ಧ್ವಜ ಹಿಡಿದು ಭಾರತ ತಂಡ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಸದ್ಯ ಇದರ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ. ಅಲ್ಲದೇ ಇದರ ಜೊತೆಗೆ ದೇಶದ ಅನೇಕ ಕಡೆ ಭಾರತದ ಗೆಲುವಿಗಾಗಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.ದೇಶದೆಲ್ಲಡೆ ವಿಶೇಷ ಪೂಜೆ:

ಧರ್ಮನಗರಿ ವಾರಣಾಸಿಯಲ್ಲಿ ಭಾರತೀಯ ಕ್ರಿಕೆಟ್ ಪ್ರೇಮಿಗಳು ಟೀಂ ಇಂಡಿಯಾ ಗೆಲುವಿಗಾಗಿ ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಭಾನುವಾರ ಬನಾರಸ್ ಜನತೆ ಟೀಂ ಇಂಡಿಯಾ ಗೆಲುವಿಗಾಗಿ ಬಾಬಾ ಬಜರಂಗಬಲಿ ಮುಂದೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದರೊಂದಿಗೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಚಿತ್ರಗಳಲ್ಲಿ, ಹನುಮಾನ್ ಚಾಲೀಸಾವನ್ನು ಓದುತ್ತಿರುವ ಜನರು ತಮ್ಮ ಕೈಯಲ್ಲಿ ತ್ರಿವರ್ಣವನ್ನು ಹಿಡಿದಿದ್ದಾರೆ.

ಪವಿತ್ರ ನಗರ ವಾರಣಾಸಿಯಲ್ಲಿ ಟೀಂ ಇಂಡಿಯಾ ಗೆಲುವಿಗಾಗಿ ಸದಾ ಹವನ ಪಠನ ನಡೆಯುತ್ತಲೇ ಇದೆ ಎಂದು ಅಭಿಮಾನಿ ರೋಹಿತ್ ದಿದ್ವಾನಿ ಹೇಳಿದ್ದಾರೆ. ಹೀಗಿರುವಾಗ ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಪ್ರೇಮಿಗಳು ಹನುಮಾನ್ ಚಾಲೀಸಾ ಪಠಿಸುವ ಮೂಲಕ ತಮ್ಮ ತಂಡದ ಗೆಲುವಿಗೆ ಶುಭ ಹಾರೈಸಿದ್ದಾರೆ. ಇದೇ ವೇಳೆ ಮುಜಾಫರ್ ನಗರದ ಪಂಚಮುಖಿ ಮಹಾದೇವ ದೇಗುಲದಲ್ಲಿ  ಪ್ರಹ್ಲಾದ್ ಘಾಟ್‌ನಲ್ಲಿರುವ ಪಂಚಮುಖಿ ಮಹಾದೇವರ ದೇವಸ್ಥಾನದಲ್ಲಿ ಓಂ ನಮಃ ಶಿವಾಯ ಎಂಬ ಘೋಷಣೆಯೊಂದಿಗೆ ಭಾರತಕ್ಕೆ ಜಯವಾಗಲಿ ಎಂದು ಹಾರೈಸಲಾಯಿತು.

ಇದನ್ನೂ ಓದಿ: Asia Cup 2022 IND vs PAK: ಭಾರತ- ಪಾಕಿಸ್ತಾನ ಕದನ, ದುಬೈ ಪಿಚ್​ ಯಾರಿಗೆ ಹೆಚ್ಚು ಸಹಾಯಕವಾಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್‌

IND vs PAK ಸಂಭಾವ್ಯ ಪ್ಲೇಯಿಂಗ್ 11:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್ ಮತ್ತು ದಿನೇಶ್ ಕಾರ್ತಿಕ್

ಪಾಕಿಸ್ತಾನ ತಂಡ: ಬಾಬರ್ ಅಜಮ್ (C), ಮೊಹಮ್ಮದ್ ರಿಜ್ವಾನ್ (WK), ಫಖರ್ ಜಮಾನ್, ಆಸಿಫ್ ಅಲಿ, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಶಾದಾಬ್ ಖಾನ್ (VC), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ.
Published by:shrikrishna bhat
First published: