Asia Cup 2022 IND vs PAK: ಭಾರತ- ಪಾಕಿಸ್ತಾನ ಕದನ, ದುಬೈ ಪಿಚ್​ ಯಾರಿಗೆ ಹೆಚ್ಚು ಸಹಾಯಕವಾಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್‌

IND vs PAK: ಇಂದು ಭಾರತ- ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ ಆರಂಭವಾಗಲಿದೆ. ಹಾಗಿದ್ದರೆ ಪಂದ್ಯದ ಸಂಪೂರ್ಣ ವಿವರ ಇಲ್ಲಿದೆ ನೊಡಿ.

IND vs PAK

IND vs PAK

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಯುಎಇ (UAE) ಅಲ್ಲಿ ಅದ್ಧೂರಿಯಾಗಿ ಆರಂಭವಾಗಿದೆ. ಈ ಬಾರಿ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಇರುವ ಕಾರಣ ಏಷ್ಯಾಕಪ್ ಟೂರ್ನಿ ಸಹ ಟಿ20 ಮಾದರಿಯಲ್ಲಿ ನಡೆಯಲಿದೆ. ಕೊರೋನಾ ನಂತರ 2 ವರ್ಷಗಳ ಬಳಿಕ ಇದೀಗ ಮತ್ತೆ ಏಷ್ಯಾ ಕಪ್​ ನಡೆಯುತ್ತಿದೆ. ಇಂದು ಭಾರತ ಮತ್ತು ಪಾಕಿಸ್ತಾನ (IND vs PAK) ನಡುವೆ ಹೈವೋಲ್ಟೇಜ್​ ಮುಖಾಮುಖಿ ಆಗಲಿದ್ದು, ಇದೊಂದು ಪಂದ್ಯಕ್ಕಾಗಿ ಕ್ರಿಕೆಟ್​ ಲೋಕವೇ ಕಾತುರದಿಂದ ಕಾದಿದೆ. ಹಾಗಿದ್ದರೆ ಇಂದಿನ ಪಂದ್ಯಕ್ಕೆ ಮಳೆಯ ಕಾಟ ಇರಲಿದೆಯೇ? ಹೇಗಿದೆ ಪಿಚ್​ ರಿಪೋರ್ಟ್​ ಹೇಗಿದೆ? ಎಲ್ಲದರ ಸಂಪೂರ್ನ ವರದಿ ಇಲ್ಲಿದೆ ನೋಡಿ.

ಪಂದ್ಯದ ವಿವರ:

ಏಷ್ಯಾ ಕಪ್​ 2022ರ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್​ ಮತ್ತು 7:30 ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ:

ದುಬೈನಲ್ಲಿ ಬಿಸಿಲಿನ ವಾತಾವರಣ ಇರುವುದರಿಂದ ಮಳೆಯಾಗುವ ಸಾಧ್ಯತೆ ಇಲ್ಲ. ತಾಪಮಾನವು ಸುಮಾರು 30 ರಿಂದ 39 ಡಿಗ್ರಿ ಸೆಲ್ಸಿಯಸ್ ಇದೆ. weather.com ಪ್ರಕಾರ ಗಾಳಿಯು ಪಶ್ಚಿಮದಿಂದ ಗಂಟೆಗೆ 10-30 ಕಿಮೀ ವೇಗದಲ್ಲಿ ಬೀಸುತ್ತಿದೆ. ಆರ್ದ್ರತೆಯು 35%-45% ನಡುವೆ ಇದೆ.

ಇದನ್ನೂ ಓದಿ: Asia Cup 2022 IND vs PAK: ಭಾರತದ ವಿರುದ್ಧ ಕಪ್ಪುಪಟ್ಟಿ ಧರಿಸಿ ಆಡಲಿದೆ ಪಾಕ್ ಟೀಂ, ಸಾಂಪ್ರದಾಯಿಕ ಎದುರಾಳಿಗಳಿಗೆ ಏನಾಯ್ತು?

ಪಿಚ್ ವರದಿ:

ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿನ ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಸ್ವಲ್ಪ ಸಹಾಯವನ್ನು ಪಡೆಯಬಹುದು. ಟಾಸ್ ಗೆದ್ದ ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಸ್ಪಿನ್ ಸ್ನೇಹಿಯಾಗಿದೆ ಎಂದು ತೋರುತ್ತದೆ ಆದರೆ ಇತ್ತೀಚಿನ ದಿನಗಳಲ್ಲಿ ಇದು ವೇಗದ ಬೌಲರ್‌ಗಳಿಗೆ ಸಹಾಯ ಮಾಡಿದೆ.

ಹೊಸ ಬೌಲ್​ನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಈ ಪಿಚ್​ನಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆಲುವು ದಾಖಲಿಸಿದೆ. ಪಿಚ್​ನ ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಅಗಿದೆ. 211 ರನ್ ಗರಿಷ್ಠ ಸ್ಕೋರ್​ ಆಗಿದೆ ಮಳೆಯ ಅಡ್ಡಿ ಪಂದ್ಯಕ್ಕಾಗುವ ಯಾವುದೇ ಸಾಧ್ಯತೆಗಳಿಲ್ಲ.

ಇದನ್ನೂ ಓದಿ: Asia Cup 202 IND vs PAK: ಭಾರತ-ಪಾಕಿಸ್ತಾನ ಪಂದ್ಯ ನೋಡಿದ್ರೆ ಬೀಳುತ್ತೆ ದಂಡ, ಇದೆಂತಾ ರೂಲ್ಸ್ ಗುರು!

IND vs PAK ಸಂಭಾವ್ಯ ಪ್ಲೇಯಿಂಗ್ 11:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್ ಮತ್ತು ದಿನೇಶ್ ಕಾರ್ತಿಕ್

ಪಾಕಿಸ್ತಾನ ತಂಡ: ಬಾಬರ್ ಅಜಮ್ (C), ಮೊಹಮ್ಮದ್ ರಿಜ್ವಾನ್ (WK), ಫಖರ್ ಜಮಾನ್, ಆಸಿಫ್ ಅಲಿ, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಶಾದಾಬ್ ಖಾನ್ (VC), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ.
Published by:shrikrishna bhat
First published: