India vs Pakistan: ಪಾಕ್​ ಪಂದ್ಯದ ವೇಳೆ ಖಂಡಿತ ಒತ್ತಡ ಇರುತ್ತೆ, ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಹೇಳಿದ್ದೇನು?

ಆಗಸ್ಟ್ 27ರಿಂದ ಏಷ್ಯಾ ಕಪ್​ 2022 ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ ಎದುರು ಆಡಲಿದ್ದು, ಆಗಸ್ಟ್ 28ರಂದು ಇಂಡೋ-ಪಾಕ್ ಕದನ ನಡೆಯಲಿದೆ.

ರೋಹಿತ್ ಶರ್ಮಾ

ರೋಹಿತ್ ಶರ್ಮಾ

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯನ್ನು ಈ ಬಾರಿ ಯುಎಇಗೆ (UAE) ಸ್ಥಳಾಂತರಿಸಲಾಗಿದೆ. ಈಗಾಗಲೇ ಬಿಸಿಸಿಐ (BCCI) ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ರೋಹಿತ್​ ಶರ್ಮಾ (Rohit Sharma) ಅವರನ್ನು ಭಾರತ ತಂಡದ ನಾಯಕರನ್ನಾಗಿ ಮತ್ತು ಕನ್ನಡಿಗ ಕೆಎಲ್​ ರಾಹುಲ್ (KL Rahul)​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಿದೆ. ಇದರ ನಡುವೆ ಪಂದ್ಯದ ಮೇಳೆ ಸಾಕಷ್ಟು ನಿರೀಕ್ಷೆಗಳಿದ್ದು, ಕಳೆದ ಟಿ20 ವಿಶ್ವಕಪ್​ ಸೋಲನ್ನು ಭಾರತ ತಂಡ ತೀರಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ. ಅಲ್ಲದೇ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಈಗಾಗಲೇ ಉಭಯ ತಂಡಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಕಳೆದ ಕೆಲ ದಿನಗಳ ಹಿಂದೆ ಪಾಕ್ ನಾಯಕ ಬಾಬರ್ ಅಜಂ ಮ್ಯಾಚ್​ ಕುರಿತು ಮಾತನಾಡಿದರೆ, ಇದೀಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಹ ಪಂದ್ಯದ ಕುರಿತು ಮಾತನಾಡಿದ್ದಾರೆ.

ಒತ್ತಡ ಇರುವುದು ನಿಜ:

ಇನ್ನೇನು ಕೆಲ ದಿನಗಳಲ್ಲಿ ಏಷ್ಯಾ ಕಪ್​ 2022 ಆರಂಭವಾಗಲಿದೆ. ಅದರಲ್ಲಿಯೂ ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ​ ತಂಡಗಳ ನಡುವೆ ಪಂದ್ಯ ನಡೆಯಲಿದ್ದು, ಈ ಪಂದ್ಯದ ಮೇಲೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯಿದೆ. ಇದರ ನಡುವೆ ಈ ಮಹತ್ವದ ಪಂದ್ಯದ ಕುರಿತು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದು, ‘ಯಾರೇ ಆಗಿದ್ದರೂ ಪಂದ್ಯದಲ್ಲಿ ಒತ್ತಡ ಇರುತ್ತದೆ. ಬೌಲರ್ ಆಗಿರಲಿ ಬ್ಯಾಟ್ಸ್​ಮನ್ ಆಗಿರಲಿ ಒತ್ತಡ ಸಾಮಾನ್ಯ. ಈ ವಿಷಯದಲ್ಲಿ ಯಾರೂ ಸಹ ಏನೂ ಮಾಡಲಾಗದು.

ಅದರ ಬದಲಾಗಿ ಪಂದ್ಯದ ಮೇಲೆ ಹೆಚ್ಚಿನ ಗಮನಹರಿಸಬೇಕು. ಅದರಲ್ಲಿಯೂ ಈ ಪಂದ್ಯದ ಮೇಲೆ ಸ್ವಲ್ಪ ಹೆಚ್ಚಿನ ಒತ್ತಡ ಖಂಡಿತ ಇರುತ್ತದೆ. ಆದರೆ ನಾನು ನಾಯಕನಾಗಿ ಈ ಒತ್ತಡ ತಂಡದ ಆಟಗಾರರ ಮೇಲೆ ಬರದಂತೆ ನೋಡಿಕೊಳ್ಳು ಪ್ರಯತ್ನಿಸುತ್ತೇನೆ. ನಾಯಕನಾಗಿ ನನಗೆ, ಆಟಗಾರರು ಒತ್ತಡದ ವಾತಾವರಣ ಎಂದು ಭಾವಿಸದಂತಹ ವಾತಾವರಣವನ್ನು ಸೃಷ್ಟಿಸುವುದು ಮುಖ್ಯ‘ ಎಂದು ಹೇಳಿದ್ದಾರೆ.

ಇದನ್ನೂ ಓದಿ: Asia Cup 2022: ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಬಿಗ್ ಶಾಕ್, ತಂಡದ ಪ್ರಮುಖ ಆಟಗಾರ ಔಟ್?

ಭಾರತ-ಪಾಕ್ ಭರ್ಜರಿ ಪೈಟ್​:

ಈಗಾಗಲೇ ಭಾರತ ತಂಡವನ್ನು ಏಷ್ಯಾ ಕಪ್​ಗಾಗಿ ಪ್ರಕಟಿಸಲಾಗಿದೆ. ಇದರ ನಡುವೆ ಇದೀಗ ಪಾಕ್ ತಂಡವನ್ನೂ ಪ್ರಕಟಿಸಲಾಗಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಣ ಬಿಗ್​ ಪೈಟ್​ ನಡೆಯಲಿದೆ. ಉಭಯ ತಂಡಗಳೆರಡೂ ಸಖತ್​ ಬಲಿಷ್ಠವಾಗಿದ್ದು, ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ದುಬೈನಲ್ಲಿ ಮೊದಲ ಪಂದ್ಯವು ನಡೆಯಲಿದ್ದು, ಹೈವೋಲ್ಟೇಜ್ ಪಂದ್ಯಕ್ಕಾಗಿ ಕ್ರಿಕೆಟ್​ ಅಭಿಮಾನಿಗಳು ಕಾತುರರಾಗಿದ್ದಾರೆ. ಈಗಾಗಲೇ ಎಲ್ಲಡೆ ಏಷ್ಯಾ ಕಪ್​ 2022ರ ಮೇಲೆ ನಿರೀಕ್ಷೆ ಹೆಚ್ಚಿದ್ದು, ಪಂದ್ಯವು ಸ್ಟಾರ್​ ಸ್ಪೋರ್ಟ್ಸ್ ನಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ: Asia Cup 2022: ಭಾರತ-ಪಾಕ್ ಪಂದ್ಯದ 10 ಸೆಕೆಂಡ್​ ಜಾಹೀರಾತಿಗೆ ಎಷ್ಟು ರೇಟ್​? ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ!

​ ಏಷ್ಯಾ ಕಪ್​ 2022 ಭಾರತ ಮತ್ತು ಪಾಕ್​ ತಂಡ:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರವೂಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ದಹಾನಿ.
Published by:shrikrishna bhat
First published: