Asia Cup 2022: ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಬಿಗ್ ಶಾಕ್, ತಂಡದ ಪ್ರಮುಖ ಆಟಗಾರ ಔಟ್?

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಏಷ್ಯಾಕಪ್​ 2022ರಲ್ಲಿ ಭರ್ಜರಿ ಪೈಪೋಟಿ ನಡೆಯಲಿದೆ. ಈಗಾಗಲೇ ಆಗಸ್ಟ್ 28ರಂದು ಇಂಡೋ -ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ ಇದರ ನಡುವೆ ಪಾಕ್ ತಂಡಕ್ಕೆ ದೊಡ್ಡ ಆಘಾತವೊಂದು ಉಂಟಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಈ ಬಾರಿ ಶ್ರೀಲಂಕಾ ಬದಲಿಗೆ ಯುಎಇಗೆ (UAE) ಸ್ಥಳಾಂತರಿಸಲಾಗಿದೆ. ಸದ್ಯ ಟೂರ್ನಿಯ ವೇಳಾಪಟ್ಟಿ ಸಹ ಪ್ರಕಟವಾಗಿದೆ. ಇದರ ನಡುವೆ ಇದೀಗ ಬಿಸಿಸಿಐ (BCCI) ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಈಗಾಗಲೇ ಪ್ರಕಟವಾಗಿರು ವೇಳಾಪಟ್ಟಿಯ ಪ್ರಕಾರ ಭಾರತ ಮೊದಲ ಪಂದ್ಯದಲ್ಲಿ ಪಾಕಿಸ್ತಾನ (Pakistan) ತಂಡವನ್ನು ಎದುರಿಸಲಿದೆ.  ಆದರೆ, ಈ ಪಂದ್ಯಕ್ಕೂ ಮುನ್ನ ಪಾಕ್ ತಂಡದ ಆತಂಕ ಹೆಚ್ಚಿದೆ. ಪಾಕಿಸ್ತಾನದ ಸ್ಟಾರ್ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ಶಾಹೀನ್ ಅಫ್ರಿದಿ ಭಾರತ ವಿರುದ್ಧದ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. 

ಪಾಕ್​ ಅಫ್ರಿದಿ ಏಷ್ಯಾಕಪ್​ನಿಂದ ಔಟ್​?:

ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಏಷ್ಯಾಕಪ್​ 2022ರಲ್ಲಿ ಭರ್ಜರಿ ಪೈಪೋಟಿ ನಡೆಯಲಿದೆ. ಈಗಾಗಲೇ ಆಗಸ್ಟ್ 28ರಂದು ಇಂಡೋ -ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ ಇದರ ನಡುವೆ ಪಾಕ್ ತಂಡಕ್ಕೆ ದೊಡ್ಡ ಆಘಾತವೊಂದು ಉಂಟಾಗಿದೆ. ತಂಡದ ಪ್ರಮುಖ ಬೌಲರ್ ಆದ ಶಾಹೀನ್ ಅಫ್ರಿದಿಗೆ ಮೊಣಕಾಲು ಗಾಯವಾಗಿದ್ದು, ಈ ಗಾಯದಿಂದ ಅವರು ಇನ್ನೂ ಚೇತರಿಸಿಕೊಂಡಿಲ್ಲ. ಪಾಕಿಸ್ತಾನ ಕ್ರಿಕೆಟ್ ತಂಡ ಶಾಹೀನ್ ಅಫ್ರಿದಿಗೆ ಫಿಟ್ ಆಗಲು ಗರಿಷ್ಠ ಸಮಯವನ್ನು ನೀಡಲು ಪ್ರಯತ್ನಿಸುತ್ತಿದೆ. ನಾವು ವೈದ್ಯರ ಸಲಹೆ ಪಡೆಯುತ್ತಿದ್ದೇವೆ ಎಂದು ಬಾಬರ್ ಆಜಮ್ ಹೇಳಿದ್ದಾರೆ. ಅಲ್ಲದೆ ನಮ್ಮ ವೈದ್ಯರು ಶಾಹೀನ್ ಅಫ್ರಿದಿಯ ಸಂಪೂರ್ಣ ಕಾಳಜಿ ವಹಿಸುತ್ತಿದ್ದಾಗಿ ಹಳಿಕೊಂಡಿದೆ.

ಏಷ್ಯಾಕಪ್​ಗಾಗಿ ಪಾಕ್ ತಂಡ ಪ್ರಕಟ:

ಇನ್ನು, ಕಳೆದೆರಡು ದಿನಗಳ ಹಿಂದೆ ಏಷ್ಯಾಕಪ್​ಗಾಗಿ ಪಾಕ್​ ತಂಡವನ್ನುಪ್ರಕಟಿಸಿದ್ದು, ತಂಡದ ನಾಯಕತ್ವವನ್ನು ಬಾಬರ್ ಆಜಂ ಅವರಿಗೆ ನೀಡಿದೆ.

ಪಾಕಿಸ್ತಾನ ತಂಡ: ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ಇದನ್ನೂ ಓದಿ: Asia Cup 2022: ಭಾರತ ಮತ್ತು ಪಾಕಿಸ್ತಾನ ತಂಡಗಳು ಪ್ರಕಟ, ಹೇಗಿರಲಿದೆ ಹೈವೋಲ್ಟೇಜ್ ಕದನ?

ಏಷ್ಯಾ ಕಪ್​ 2022ಗೆ ಟೀಂ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಲೋಕೇಶ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಇದನ್ನೂ ಓದಿ: Mithali Raj: ಮಿಥಾಲಿ ರಾಜ್ ಮದುವೆಯಾಗದೇ ಇರುವುದಕ್ಕೆ ಇದೇ ಕಾರಣಾನಾ? ಇಲ್ಲಿದೆ ಕುತೂಹಲಕಾರಿ ಸಂಗತಿ

ಭಾರತ-ಪಾಕ್ ಭರ್ಜರಿ ಪೈಟ್​:

ಈಗಾಗಲೇ ಭಾರತ ತಂಡವನ್ನು ಏಷ್ಯಾ ಕಪ್​ಗಾಗಿ ಪ್ರಕಟಿಸಲಾಗಿದೆ. ಇದರ ನಡುವೆ ಇದೀಗ ಪಾಕ್ ತಂಡವನ್ನೂ ಪ್ರಕಟಿಸಲಾಗಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಣ ಬಿಗ್​ ಪೈಟ್​ ನಡೆಯುವುದಂತೂ ಪಕ್ಕಾ ಎನ್ನಲಾಗುತ್ತಿದೆ. ಉಭಯ ತಂಡಗಳೆರಡೂ ಸಖತ್​ ಬಲಿಷ್ಠವಾಗಿದ್ದು, ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ದುಬೈನಲ್ಲಿ ನಡೆಯಲಿರುವ ಮೊದಲ ಪಂದ್ಯವು ನಡೆಯಲಿದ್ದು, ಹೈವೋಲ್ಟೇಜ್ ಪಂದ್ಯಕ್ಕಾಗಿ ಕ್ರಿಕೆಟ್​ ಅಭಿಮಾನಿಗಳು ಕಾತುರರಾಗಿ ಕುಳಿತಿದ್ದಾರೆ. ಈಗಾಗಲೇ ಎಲ್ಲಡೆ ಏಷ್ಯಾ ಕಪ್​ 2022ರ ಮೇಲೆ ನಿರೀಕ್ಷೆ ಹೆಚ್ಚಿದೆ. ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಉಪ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ.
Published by:shrikrishna bhat
First published: