IND vs PAK Asia Cup 2022: ಇಂದು ಭಾರತ-ಪಾಕ್ ಹೈವೋಲ್ಟೇಜ್ ಮ್ಯಾಚ್​, ಹೇಗಿದೆ ಉಭಯ ತಂಡಗಳ ಬಲಾಬಲ

IND vs PAK Asia cup 2022: ಇಂದು ಏಷ್ಯಾ ಕಪ್​ 2022ಲ್ಲಿ ಹೈವೋಲ್ಟೇಜ್​ ಪಂದ್ಯವೊಂದು ನಡೆಯಲಿದೆ. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ದುಬೈನ ರಣಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಒಂದು ಪಂದ್ಯಕ್ಕಾಗಿ ಕೋಟ್ಯಾಂತರ ಅಬಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

IND vs PAK

IND vs PAK

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಗೆ ಯುಎಇ (UAE) ಅಲ್ಲಿ ಅದ್ಧೂರಿಯಾಗಿ ಚಾಲನೆ ದೊರಕಿದೆ. ಈ ಬಾರಿ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಇರುವ ಕಾರಣ ಏಷ್ಯಾಕಪ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ನಡೆಸಲಾಗುತ್ತಿದೆ. ಕೊರೋನಾ ಹಿನ್ನಲೆ 2 ವರ್ಷಗಳ ನಂತರ ಇದೀಗ ಮತ್ತೆ ಏಷ್ಯಾ ಕಪ್​ ನಡೆಯುತ್ತಿದೆ. ಅದರಲ್ಲಿಯೂ ಈ ಬಾರಿ ನಿರೀಕ್ಷೆಯಂತೆ ಭಾರತ ಮತ್ತು ಪಾಕಿಸ್ತಾನ (IND vs PAK) ತಂಡಗಳು ಮುಖಾಮುಖಿ ಆಗುತ್ತಿವೆ. ಇಂದು ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೋ ಮತ್ತು ಪಾಕ್​ ಕದನ ನಡೆಯಲಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್​ ಲೋಕವೇ ಕಾತುರದಿಂದ ಕಾದು ಕುಳಿತಿದೆ ಎಂದರೂ ತಪ್ಪಾಗಲಾರದು.  ಇಂದಿನ ಪಂದ್ಯದಲ್ಲಿ ಯಾವ ತಂಡ ಎಷ್ಟು ಬಲಿಷ್ಠವಾಗಿದೆ, ಯಾವೆಲ್ಲಾ ಆಟಗಾರರು ಇಂದು ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ಪಂದ್ಯದ ವಿವರ:

ಏಷ್ಯಾ ಕಪ್​ 2022ರ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್​ ಮತ್ತು 7:30 ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ನೋಡಬಹುದಾಗಿದೆ.

ಪಿಚ್​ ವರದಿ:

ಭಾರತ ಮತ್ತು ಪಾಕಿಸ್ತಾನ ತಂಡಗಳು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ. ಈ ಮೈದಾನವು ವಿಕೆಟ್ ಬ್ಯಾಟಿಂಗ್‌ಗೆ ಉತ್ತಮವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೌಲರ್‌ಗಳು ಹೊಸ ಚೆಂಡಿನೊಂದಿಗೆ ಹೆಚ್ಚು ಆಕ್ರಮಣಕಾರಿಯಾಗಿ ದಾಳಿ ಮಾಡಲು ಪಿಚ್​ ಸಹಾಯಕವಾಗುತ್ತದೆ.ಇದರಿಂದಾಗಿ ಟಾಸ್ ಗೆದ್ದ ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: India vs Pakistan: ಭಾರತೀಯ ಚೆಲುವೆಯರಿಗೆ ಬೌಲ್ಡ್ ಆದ ಪಾಕ್ ಕ್ರಿಕೆಟಿಗರು! ಇವರೇ ನೋಡಿ ಇಂಡಿಯಾದ ಅಳಿಯಂದ್ರು!

ಆದರೆ ಪಾಕ್​ ಕಳೆದ ಕೆಲ ವರ್ಷಗಳಿಂದ ದುಬೈ ಮೈದಾನದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿದ ಅನುಭವವನ್ನು ಹೊಂದಿದೆ. ಹಾಗೆಯೇ ಭಾರತದ ಆಟಗಾರರು ಐಪಿಎಲ್​ನಲ್ಲಿ ಈ ಮೈದಾನದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಆದರೆ ಹೊಸ ಬೌಲ್​ನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಇದರಿಂದಾಗಿ ಪಿಚ್​ನಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆಲುವು ದಾಖಲಿಸಿದೆ. ಪಿಚ್​ನ ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಅಗಿದೆ. 211 ರನ್ ಗರಿಷ್ಠ ಸ್ಕೋರ್​ ಆಗಿದೆ.ಇಂದಿನ ಪಂದ್ಯಕ್ಕೆ ಮಳೆಯ ಅಡ್ಡಿ ಆಗುವ ಯಾವುದೇ ಸಾಧ್ಯತೆಗಳಿಲ್ಲ.

IND vs PAK ಹೆಡ್​ ಟು ಹೆಡ್​:

ಇನ್ನು, ಉಭಯ ತಂಡಗಳ ಬಲಾಬಲ ನೋಡುವುದಾದರೆ, ಏಷ್ಯಾ ಕಪ್​ ಈ ಬಾರಿ ಟಿ20 ಮಾದರಿಯಲ್ಲಿ ನಡೆಯುತ್ತಿದೆ. ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್​ನಲ್ಲಿ ಈವರೆಗೆ ಒಟ್ಟು 14 ಬಾರಿ ಮುಖಾಮುಖಿ ಆಗಿದೆ. ಈ ವೇಳೆ ಭಾರತ 8 ಬಾರಿ ಗೆದ್ದಿದೆ. ಪಾಕಿಸ್ತಾನ ಕೇವಲ 5 ಬಾರಿ ಗೆದ್ದಿದೆ. ಇದರ ನಡುವೆ ಒಂದು ಪಂದ್ಯ ರದ್ದಾಗಿತ್ತು. ಅಲ್ಲದೇ ಉಭಯ ತಂಡಗಳು ಟಿ20 ಅಲ್ಲಿ ಈವರೆಗೆ ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 6ರಲ್ಲಿ ಭಾರತ ಮತ್ತು ಕೇವಲ 2ರಲ್ಲಿ ಪಾಕ್​ ಗೆದ್ದಿದೆ.

ಇದನ್ನೂ ಓದಿ:  IND vs PAK: ರಿವೀಲ್ ಆಯ್ತು ಪಾಕ್​ ಎದುರು ಕಣಕ್ಕಿಳಿಯುವ ಟೀಂ ಇಂಡಿಯಾ ಆಟಗಾರರ ಲಿಸ್ಟ್, ಇಲ್ಲಿದೆ ಭಾರತ ತಂಡದ ಪ್ಲೇಯಿಂಗ್ 11

IND vs PAK  ಸಂಭಾವ್ಯ ಪ್ಲೇಯಿಂಗ್ 11:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ,  ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್ ಮತ್ತು ದಿನೇಶ್ ಕಾರ್ತಿಕ್

ಪಾಕಿಸ್ತಾನ ತಂಡ: ಬಾಬರ್ ಅಜಮ್ (C), ಮೊಹಮ್ಮದ್ ರಿಜ್ವಾನ್ (WK), ಫಖರ್ ಜಮಾನ್, ಆಸಿಫ್ ಅಲಿ, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಶಾದಾಬ್ ಖಾನ್ (VC), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ.
Published by:shrikrishna bhat
First published: