ಭಾರತ vs ನ್ಯೂಜಿಲೆಂಡ್: ಕಿವೀಸ್ ನಾಡಿಗೆ ಬಂದಿಳಿದ ಕೊಹ್ಲಿ ಪಡೆ

(Screenshot)

(Screenshot)

ವಿರಾಟ್ ಕೊಹ್ಲಿ ಹಾಗೂ ತಂಡದ ಆಟಗಾರರು ಆಸ್ಟ್ರೇಲಿಯಾದಿಂದ ನೇರವಾಗಿ ಕಿವೀಸ್ ನಾಡಿಗೆ ಬಂದಿದ್ದು, ಇದೇ ಬುಧವಾರದಿಂದ ಏಕದಿನ ಸರಣಿ ಆರಂಭವಾಗಲಿದೆ.

  • News18
  • 4-MIN READ
  • Last Updated :
  • Share this:

ಆಕ್ಲೆಂಡ್​​​​ (ಜ. 21): ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಕಂಡಿರುವ ಟೀಂ ಇಡಿಯಾ ಸದ್ಯ ನ್ಯೂಜಿಲೆಂಡ್ ಸವಾಲು ಎದುರಿಸಲು ಆಕ್ಲೆಂಡ್​​​​ಗೆ ಬಂದಿಳಿದಿದೆ.

ವಿರಾಟ್ ಕೊಹ್ಲಿ ಹಾಗೂ ತಂಡದ ಆಟಗಾರರು ಆಸ್ಟ್ರೇಲಿಯಾದಿಂದ ನೇರವಾಗಿ ಕಿವೀಸ್ ನಾಡಿಗೆ ಬಂದಿದ್ದು, ಇದೇ ಬುಧವಾರದಿಂದ ಏಕದಿನ ಸರಣಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ಜೊತೆ ಪತ್ನಿ ಅನುಷ್ಕಾ ಶರ್ಮಾ ಕೂಡ ಆಗಮಿಸಿದ್ದು, ಈ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

 



ಇದನ್ನೂ ಒದಿ: 'ಆರಂಭದ ಪರೀಕ್ಷೆ ಮುಗಿಯಿತು, ನಿಜವಾದ ಆಟ ಈಗ ಆರಂಭ’: ಭಾರತಕ್ಕೆ ಕಿವೀಸ್ ಮಾಜಿ ಆಟಗಾರ ಚಾಲೆಂಜ್

ವಿಮಾನ ನಿಲ್ದಾಣದಿಂದ ಹೊರಬರುವ ವೇಳೆ ಅಭಿಮಾನಿಗಳಿಗೆ ಕೇದರ್ ಜಾಧವ್ ಹಾಗೂ ದಿನೇಶ್ ಕಾರ್ತಿಕ್ ಹಸ್ತಾಕ್ಷರ ನೀಡಿದರು. ನ್ಯೂಜಿಲೆಂಡ್​​ನಲ್ಲಿ ಭಾರತ ಒಟ್ಟು ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ-20 ಸರಣಿಯನ್ನು ಆಡಲಿದೆ.

 



ಏಕದಿನ ಸರಣಿ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್, ಕೇದರ್ ಜಾಧವ್, ಎಂ ಎಸ್ ಧೋನಿ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ, ವಿಜಯ್ ಶಂಕರ್, ಶುಭ್ಮನ್ ಗಿಲ್.

ಟಿ-20 ಸರಣಿಗೆ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೇದರ್ ಜಾಧವ್, ಎಂ ಎಸ್ ಧೋನಿ, ಕ್ರುನಾಲ್ ಪಾಂಡ್ಯ ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್,  ಭುವನೇಶ್ವರ್ ಕುಮಾರ್, ಸಿದ್ಧಾರ್ಥ್​ ಕೌಲ್, ಖಲೀಲ್ ಅಹ್ಮದ್, ವಿಜಯ್ ಶಂಕರ್, ಶುಭ್ಮನ್ ಗಿಲ್.

First published: