IND vs ENG: ಏಕದಿನ-ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ, ವಿರಾಟ್​ ಕೊಹ್ಲಿಗೆ ಶಾಕ್!

ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಎರಡೂ ತಂಡಗಳಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಮರಳಲಿದ್ದಾರೆ. ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರನ್ನು ಕೈ ಬಿಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಇಂಗ್ಲೆಂಡ್ ವಿರುದ್ಧದ ಏಕದಿನ (ODI) ಹಾಗೂ ಟಿ20 (T20) ಸರಣಿಗೆ ಭಾರತ ತಂಡವನ್ನು (Team India) ಬಿಸಿಸಿಐ (BCCI) ಪ್ರಕಟಿಸಿದೆ. ಎರಡೂ ತಂಡಗಳಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕನಾಗಿ ಮರಳಲಿದ್ದಾರೆ. ವಿರಾಟ್ ಕೊಹ್ಲಿ (Virat Kohli), ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರನ್ನು ಕೈ ಬಿಡಲಾಗಿದೆ. ಆದರೆ, ಅಂತಿಮ 2 ಟಿ20 ಪಂದ್ಯಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅರ್ಷದೀಪ್ ಸಿಂಗ್ ಅವರನ್ನು ಟಿ20 ಜೊತೆಗೆ ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಮ್ರಾನ್ ಮಲಿಕ್ ಟಿ20 ತಂಡದಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ. ರಿತುರಾಜ್ ಗಾಯಕ್ವಾಡ್ ಮತ್ತು ಸಂಜು ಸ್ಯಾಮ್ಸನ್ ಮೊದಲ T20 ಪಂದ್ಯಕ್ಕೆ ತಂಡದಲ್ಲಿ ಮಾತ್ರ ಸೇರ್ಪಡೆಗೊಂಡಿದ್ದಾರೆ. ಜುಲೈ 7ರಿಂದ ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಜುಲೈ 17ರ ವರೆಗೆ ಪಂದ್ಯಗಳು ನಡೆಯಲಿವೆ. ಆರಂಭದಲ್ಲಿ ಎರಡೂ ತಂಡಗಳು ಟೆಸ್ಟ್ ಪಂದ್ಯಗಳನ್ನು ಆಡಲಿವೆ. ಜುಲೈ 1 ರಿಂದ (ಇಂದಿನಿಂದ) ಟೆಸ್ಟ್ ಪಂದ್ಯ ಆರಂಭವಾಗಲಿದೆ. ಭಾರತ ತಂಡ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಅಂತಿಮ ಟೆಸ್ಟ್ ಪಂದ್ಯ ಗೆದ್ದು ಸರಣಿ ಗೆಲುವನ್ನು ಸಾಧಿಸಲು ಟೀಂ ಇಂಡಿಯಾ ಹವಣಿಸುತ್ತಿದೆ.

ಐಪಿಎಲ್ ಸ್ಟಾರ್​ಗಳಿಗೆ ಮಣೆ:

ಇಂಗ್ಲೆಂಡ್ ಸರಣಿಗೆ ಪ್ರಕಟವಾಗಿರುವ ತಂಡವನ್ನು ಗಮನಿಸಿದರೆ, ವೇಗದ ಬೌಲರ್ ಉಮ್ರಾನ್ ಮಲಿಕ್ ಅವರು ಎಲ್ಲಾ ಮೂರು ಟಿ20ಐ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಅವರು ಈಗ ಈ ಸ್ವರೂಪಕ್ಕೆ ಸಿದ್ಧರಾಗಬೇಕಾಗುತ್ತದೆ ಎಂಬುದು ಸ್ಪಷ್ಟವಾಯಿತು. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಸಂದರ್ಭದಲ್ಲಿ ಎಡಗೈ ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ತಂಡದಲ್ಲಿದ್ದರು.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20ಗೆ ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಕೊನೆಯ 2 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆದರೆ, ಮೂರು ಪಂದ್ಯಗಳ ಏಕದಿನ ಸರಣಿಗೆ ಯುವ ಬೌಲರ್ ಆಯ್ಕೆಯಾಗಿದ್ದಾರೆ. ಮತ್ತೊಂದೆಡೆ, ಸಂಜು ಸ್ಯಾಮ್ಸನ್ ಮತ್ತು ರಿತುರಾಜ್ ಮೊದಲ ಟಿ20 ಗೆ ಆಯ್ಕೆಯಾಗಿದ್ದಾರೆ. ಅಂದರೆ ಇದುವರೆಗೆ ತಮ್ಮ ಪ್ರದರ್ಶನದಿಂದ ಆಯ್ಕೆಗಾರರನ್ನು ಹೆಚ್ಚು ಮೆಚ್ಚಿಸಲು ಸಾಧ್ಯವಾಗಿಲ್ಲ. ಅವರು ಏಕದಿನ ತಂಡದಲ್ಲೂ ಇಲ್ಲ. ಮೂರು ಟಿ20 ಪಂದ್ಯಗಳಿಗೆ ದೀಪಕ್ ಹೂಡಾ ಮತ್ತು ಇಶಾನ್ ಕಿಶನ್ ಕೂಡ ಆಯ್ಕೆಯಾಗಿದ್ದಾರೆ. ಇಶಾನ್ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: WTC 2021-23: ಟೆಸ್ಟ್ ಚಾಂಪಿಯನ್‌ಶಿಪ್​ಗಾಗಿ 8 ತಂಡಗಳ ನಡುವೆ ಪೈಪೋಟಿ, ಭಾರತದ ಮುಂದಿರುವ ಸವಾಲುಗಳಿವು

ಕೊಹ್ಲಿಯನ್ನು ಕೈ ಬಿಟ್ಟ ಬಿಸಿಸಿಐ:

ಇನ್ನು, ವಿರಾಟ್​ ಕೊಹ್ಲಿ ಸದ್ಯ ಕಳಪೆ ಫಾರ್ಮ್​ ನಲ್ಲಿದ್ದು, ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಆಗಿದ್ದಾರೆ. ಅಲ್ಲದೇ ಏಕದಿನ ತಂಡದ್ಲಲಿಯೂ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಮೊದಲ ಟಿ20 ಪಂದ್ಯದಿಂದ ಅವರನ್ನು ಕೈ ಬಿಡಲಾಗಿದ್ದು, ಕೊಹ್ಲಿ ಅವರಿಗೆ ಬಿಸಿಸಿಐ ಶಾಕ್ ನೀಡಿದೆ. ಕೊಹ್ಲಿ ಅವರಿಗೆ ಮಾತ್ರವಲ್ಲದೇ ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರನ್ನು ಕೈ ಬಿಡಲಾಗಿದೆ. ಆದರೆ, ಅಂತಿಮ 2 ಟಿ20 ಪಂದ್ಯಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಬಿಸಿಸಿಐ ಮುಂಬರುವ ಟಿ20 ವಿಶ್ವಕಪ್ ನತ್ತ ಹೆಚ್ಚು ಬಲಿಷ್ಠ ತಂಡವನ್ನು ಕಟ್ಟಲು ಸಿದ್ಧತೆ ನಡೆಸುತ್ತಿರುವಂತೆ ಕಾಣುತ್ತಿದೆ.

ಇಂಗ್ಲೆಂಡ್ ಸರಣಿಗೆ ಭಾರತ ತಂಡ:

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಶಮಿ ಮೊಹಮ್ಮದ್, ಕೃಷ್ಣ, ಮೊಹಮ್ಮದ್ ಶಮಿ ಸಿರಾಜ್ ಮತ್ತು ಅರ್ಷದೀಪ್ ಸಿಂಗ್.

ಇದನ್ನೂ ಓದಿ: IND vs SA: ರದ್ದಾದ ಪಂದ್ಯದ ಟಿಕೆಟ್ ದರ ಮರುಪಾವತಿಸಲು ಮುಂದಾದ KSCA

ಮೊದಲ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

ಎರಡನೇ ಮತ್ತು ಮೂರನೇ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವೀಂದ್ರ ಪಟೇಲ್. ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್ ಮತ್ತು ಉಮ್ರಾನ್ ಮಲಿಕ್.
Published by:shrikrishna bhat
First published: