ಭಾರತೀಯ ಕ್ರಿಕೆಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ (WTC Final 2023) ಆಡಲು ಸಿದ್ಧವಾಗಿದೆ. ಟೀಂ ಇಂಡಿಯಾ ಈ ಬಾರಿ ಚಾಂಪಿಯನ್ ಆಗಲು ಭರ್ಜರಿ ತಯಾರಿ ನಡೆಸುತ್ತಿದೆ. ಜೂನ್ 7 ರಿಂದ ಓವಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ತಂಡಗಳು ಫೈನಲ್‌ನಲ್ಲಿ ಸೆಣಸಲಿವೆ. ಈ ಬಹುನಿರೀಕ್ಷಿತ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಮಂಡಳಿ (BCCI) ಮಹತ್ವದ ಘೋಷಣೆ ಮಾಡಿದೆ. ಭಾರತವು ಟೀಂ ಇಂಡಿಯಾಕ್ಕೆ ಮ್ಯಾನೇಜರ್ ಅನ್ನು ನೇಮಿಸಿದೆ, ಅವರ ಯಶಸ್ಸಿನ ಪ್ರಮಾಣವು ಶೇಕಡಾ 100 ಆಗಿದೆ.
ಬಿಸಿಸಿಐ ಮಹತ್ವದ ನಿರ್ಧಾರ:
ಬಿಸಿಸಿಐ ಅನಿಲ್ ಪಟೇಲ್ ಅವರನ್ನು ಡಬ್ಲ್ಯುಟಿಸಿ ಫೈನಲ್ 2023 ಗಾಗಿ ಟೀಂ ಇಂಡಿಯಾದ ಮ್ಯಾನೇಜರ್ ಆಗಿ ನೇಮಿಸಿದೆ. ಅನಿಲ್ ಪಟೇಲ್ ಗುಜರಾತ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ. ಈ ಹಿಂದೆ ಟೀಂ ಇಂಡಿಯಾದ ಮ್ಯಾನೇಜರ್ ಕೂಡ ಆಗಿದ್ದರು. ಪಟೇಲ್ 2017, 2018 ಮತ್ತು 2019 ರಲ್ಲಿ ಭಾರತ ತಂಡದ ಮ್ಯಾನೇಜರ್ ಆಗಿದ್ದರು. ಅನಿಲ್ ಪಟೇಲ್ ಮ್ಯಾನೇಜರ್ ಹುದ್ದೆಯಲ್ಲಿದ್ದಾಗ ಟೀಂ ಇಂಡಿಯಾ 9 ಸರಣಿಗಳನ್ನು ಆಡಿದೆ ಮತ್ತು ಭಾರತ ತಂಡವು ಎಲ್ಲವನ್ನೂ ಗೆದ್ದಿದೆ. ಅಂದರೆ ಪಟೇಲರ ಯಶಸ್ಸಿನ ಪ್ರಮಾಣ ಶೇಕಡ 100ರಷ್ಟಿದೆ.
ಐಪಿಎಲ್‌ನಲ್ಲಿ ಆಟಗಾರರು ಬ್ಯುಸಿ:
ಟೀಂ ಇಂಡಿಯಾದಲ್ಲಿರುವ ಎಲ್ಲಾ ಆಟಗಾರರು ಮೇ 29ರೊಳಗೆ ಇಂಗ್ಲೆಂಡ್ ತಲುಪಲಿದ್ದಾರೆ. ಈ ಸಮಯದಲ್ಲಿ ಭಾರತೀಯ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. 18 ಪಂದ್ಯಗಳನ್ನು ಆಡಿರುವ ಭಾರತ ಫೈನಲ್‌ಗೆ ಅರ್ಹತೆ ಪಡೆದಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ 10 ಟೆಸ್ಟ್‌ಗಳನ್ನು ಗೆದ್ದಿದೆ. 3 ಟೆಸ್ಟ್‌ಗಳು ಡ್ರಾ ಆಗಿದ್ದರೆ ಅವರು 5 ರಲ್ಲಿ ಸೋತಿದ್ದಾರೆ. ಕಳೆದ ಬಾರಿಯ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೋತಿತ್ತು.
ಇದನ್ನೂ ಓದಿ: IPL 2023: ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಬಿಗ್ ಶಾಕ್! ನಿಯಮ ಉಲ್ಲಂಘಿಸಿದ ವಿರಾಟ್, ಧೋನಿ
ಸ್ಟಾರ್ ಆಟಗಾರರ ಅಲಭ್ಯತೆ:
ಇನ್ನು, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೂ ಮುನ್ನ ಭಾರತ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾದ ಆರಂಭಿಕ ಹಾಗೂ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗಾಯಗೊಂಡಿರುವ ರಾಹುಲ್ ಸ್ಥಾನಕ್ಕೆ ಬಿಸಿಸಿಐ ಹೊಸ ವಿಕೆಟ್ ಕೀಪರ್ ಹೆಸರನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಬದಲಿಗೆ ಬಿಸಿಸಿಐ ಇಶಾನ್ ಕಿಶನ್ ಹೆಸರನ್ನು ಆಯ್ಕೆ ಮಾಡಿದೆ. ಕೆಎಸ್ ಭರತ್ ಪ್ರಮುಖ ವಿಕೆಟ್ ಕೀಪರ್ ಬ್ಯಾಟಿಂಗ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಶಾನ್ ಕಿಶನ್ ಆಸ್ಟ್ರೇಲಿಯ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ತಂಡದಲ್ಲಿ ಆಯ್ಕೆಯಾಗಿದ್ದರು ಆದರೆ ಅವರಿಗೆ ಚೊಚ್ಚಲ ಅವಕಾಶ ಸಿಗಲಿಲ್ಲ.
WTC ಫೈನಲ್‌ಗೆ ಭಾರತ - ಆಸೀಸ್ ತಂಡ:
ಭಾರತ ತಂಡ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (c), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಸ್ ಭರತ್ (WK), ಇಶಾನ್ ಕಿಶನ್ (WK), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಉಮೇಶ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್.
ಮೀಸಲು ಆಟಗಾರರು: ರಿತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ಸಿ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ