ಭಾರತ ಕ್ರಿಕೆಟ್ ತಂಡದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ (Rishabh Pant) ಅವರ ಕಾರು (Car) ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಸದ್ಯ ಡೆಹ್ರಾಡೂನ್ನ (Dehradun) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ವೇಳೆ ಕಾರಿನಲ್ಲಿ ಪಂತ್ ಒಬ್ಬರೇ ಇದ್ದರು. ನಿದ್ರೆಯಲ್ಲಿದ್ದ ಕಾರಣ ಕಾರಿನ ಬ್ಯಾಲೆನ್ಸ್ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ನಂತರ ಅವರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಪಂತ್ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಕಿಟಕಿಯನ್ನು ಒಡೆದು ಹೊರಬಂದಿದ್ದಾರೆ. ಅವರು ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದರು. ಅಪಘಾತದ ನಂತರ ಅವರನ್ನು ಡೆಹ್ರಾಡೂನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇದಿಗ ಪಂತ್ ಅವರ ಆರೋಗ್ಯದ ಬಗ್ಗೆ ಬಿಸಿಸಿಐ (BCCI) ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಬಿಸಿಸಿಐ ಮಹತ್ವದ ಹೇಳಿಕೆ:
ರಿಷಭ್ ಪಂತ್ ಅಪಘಾತದ ಬಗ್ಗೆ ಬಿಸಿಸಿಐ ಅಪ್ಡೇಟ್ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದೆ. ಅವರಿಗೆ ಮಂಡಳಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಚಿಕಿತ್ಸೆಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುವುದು ಬಿಸಿಸಿಐನ ಜವಾಬ್ದಾರಿಯಾಗಿದೆ. ಈ ಕಷ್ಟದ ಸಮಯದಿಂದ ಪಂತ್ ಬೇಗ ಹೊರಬರಬೇಕು. ಇದಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಬಿಸಿಸಿಐ ತಿಳಿಸಿದೆ. ಅಲ್ಲದೇ ಪಂತ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Media Statement - Rishabh Pant
The BCCI will see to it that Rishabh receives the best possible medical care and gets all the support he needs to come out of this traumatic phase.
Details here 👇👇https://t.co/NFv6QbdwBD
— BCCI (@BCCI) December 30, 2022
ಇದನ್ನೂ ಓದಿ: Rishabh Pant Accident: ರಿಷಭ್ ಪಂತ್ ಅಪಘಾತದ ಭಯಾನಕ ವಿಡಿಯೋ, ರಸ್ತೆ ಮಧ್ಯೆ ಪ್ರಜ್ಞಾಹೀನವಾಗಿ ಬಿದ್ದಿದ್ದ ಪಂತ್!
ಶ್ರೀಲಂಕಾ ಸರಣಿಯಿಂದ ಪಂತ್ ಔಟ್:
ಇನ್ನು, ಕೊನೆಯದಾಗಿ ಈ ವರ್ಷದ ಅಂತ್ಯದಲ್ಲಿ ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಇದರ ಬಳಿಕ ಅವರು ಮೊಣಕಾಲಿನ ಇಂಜುರಿಯಿಂದಾಗಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ತವರಿನ ಟಿ20 ಮತ್ತು ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದಕ್ಕಾಗಿ ಪಂತ್ ತನ್ನ ತಾಯಿಯನ್ನು ಭೇಟಿಯಾಗಲು ಮನೆಗೆ ಬರುವ ವೇಳೆ ಈ ಅಪಘಾತ ಸಂಭವಿಸಿದೆ. ಸದ್ಯ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದ್ದು, ಈ ವರ್ಷದ ಅವರ ಕ್ರಿಕೆಟ್ ವೃತ್ತಿ ಜೀವನದ ಬಗ್ಗೆ ಅನೇಕರಲ್ಲಿ ಅನುಮಾನ ಮೂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ