ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Vidarbha Cricket Association Stadium) ಆರಂಭವಾಗಿದೆ. ಟಾಸ್ ಗೆದ್ದ ಕಾಂಗರೂ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಮೊದಲ ದಿನದ ಬೋಜನ ವಿರಾಮದ ವೇಳೆಗೆ ಭಾರತ ತಂಡ ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಅವರನ್ನು ಬೌಲ್ಡ್ ಮಾಡುವ ಮೂಲಕ ಅನುಭವಿ ವೇಗಿ ಮೊಹಮ್ಮದ್ ಶಮಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 400 ವಿಕೆಟ್‌ಗಳನ್ನು ಪೂರೈಸುವುದರ ಜೊತೆಗೆ ಆಸೀಸ್ಗೆ ಆರಂಭಿಕ ಆಘಾತ ನೀಡಿದರು. ಅಲ್ಲದೇ ನಂತರದಲ್ಲಿ ಕೆಲ ತಿಂಗಳ ಬಳಿಕ ಕಂಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ (Ravindra Jadeja) 3 ವಿಕೆಟ್ ಪಡೆದು ಮಿಂಚಿದ್ದಾರೆ. ಸುದ್ದಿ ಬರೆಯುವ ವೇಳೆಗೆ ಆಸ್ಟ್ರೇಲಿಯಾ ತಂಡ 42 ಓವರ್ಗೆ 5 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿದೆ.
ಆಸೀಸ್ಗೆ ಆರಂಭಿಕ ಆಘಾತ:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸೀಸ್ಗೆ ಭಾರತೀಯ ಬೌಲರ್ಗಳು ಆರಂಭಿಕ ಆಘಾತ ನೀಡಿದರು. ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರನ್ನು ಬೌಲ್ಡ್ ಮಾಡುವ ಮೂಲಕ ಅನುಭವಿ ವೇಗಿ ಮೊಹಮ್ಮದ್ ಶಮಿ ಆಸೀಸ್ಗೆ ಆಘಾತ ನೀಡಿದರು. ಉಸ್ಮಾನ್ ಖವಾಜಾ ಅವರನ್ನೂ ಸಹ ಮೊಹಮ್ಮದ್ ಸಿರಾಜ್ ಔಟ್ ಮಾಡುವ ಮೂಲಕ ಭಾರತಕ್ಕೆ ಆಸರೆಯಾದರ. ಇನ್ನು, ಆಸೀಸ್ ಪರ ಡೇವಿಡ್ ವಾರ್ನರ್ 1 ರನ್, ಉಸ್ಮಾನ್ ಖವಾಜಾ 1 ರನ್, ಟೆಸ್ಟ್ ನಂಬರ್ 1 ಬ್ಯಾಟ್ಸ್ಮನ್ ಮಾರ್ನಸ್ ಲಾಬುಶೇನ್ 49 ರನ್, ಮ್ಯಾಟ್ ರೆನ್ಶಾ ಶೂನ್ಯಕ್ಕೆ ಹಾಗೂ ಸ್ಟೀವ್ ಸ್ಮಿತ್ 37 ರನ್ಗೆ ವಿಕೆಟ್ ಒಪ್ಪಿಸಿದರು.
Superb start to the session for #TeamIndia!@imjadeja gets 2 in 2 🙌🏻
Labuschagne & Renshaw depart and Australia are 4 down.
Live - https://t.co/edMqDi4dkU #INDvAUS @mastercardindia pic.twitter.com/GYFqxE536B
— BCCI (@BCCI) February 9, 2023
ಗಾಯದ ಸಮಸ್ಯೆಯಿಂದ ಕಳೆದ ಏಷ್ಯಾಕಪ್ನಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಬಾರ್ಡರ್ ಗವಾಸ್ಕರ್ ಸರಣಿ ಮೂಲಕ ಮತ್ತೆ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. ರವೀಂದ್ರ ಜಡೇಜಾ ಅವರು ಆಸೀಸ್ನ ಪ್ರಮುಖ 3 ವಿಕೆಟ್ ತೆಗೆದು ತಂಡಕ್ಕೆ ಬ್ರೇಕ್ ಥ್ರೂ ನೀಡಿದರು. ಉಳಿದಂತೆ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಲಾ 1 ವಿಕೆಟ್ ಪಡೆದಿದ್ದಾರೆ.
ಭಾರತಕ್ಕೆ ಇದು ಮಹತ್ವದ ಸರಣಿ:
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023ರ ಫೈನಲ್ ಜೂನ್ನಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿಯ ಫೈನಲ್‌ಗೆ ಈಗಾಗಲೇ ಆಸ್ಟ್ರೇಲಿಯಾ ತಲುಪಿದ್ದು, 2ನೇ ತಂಡವಾಗಿ ತಲುಪಲು ಭಾರತ ತಂಡ ಆಸೀಸ್ ವಿರುದ್ಧ ಈ ಸರಣಿಯನ್ನು ಗೆಲ್ಲಲೇ ಬೇಕಿದೆ. ಈ ಸರಣಿಯನ್ನು 3-0 ಅಥವಾ 3-1 ಅಂತರದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟಿಕೆಟ್ ಕಾಯ್ದಿರಿಸಬಹುದು. ಇದರೊಂದಿಗೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿಯೂ ಅವರು ನಂಬರ್ ಒನ್ ಸ್ಥಾನವನ್ನು ಅಲಂಕರಿಸಬಹುದು.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲಂಡ್, ಟಾಡ್ ಮರ್ಫಿ, ನೇಥನ್ ಲ್ಯಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ