ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ 2023ರ (Border Gavaskar Trophy) ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿತು. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Vidarbha Cricket Association Stadium) ನಡೆಯುತ್ತಿರುವ ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತೀಯರ ದಾಳಿಗೆ ಕುಸಿದಿದ್ದು, ಕೇವಲ 63.5 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿತು. ಭಾರತದ ಪರ 5 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ (Ravindra Jadeja) ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.
ಇಂದಿನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮತ್ತು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್‌ಡೇಟ್‌ಗಳಿಗಾಗಿ ನೀವು ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಬಹುದು.
ಅಲ್ಪಮೊತ್ತಕ್ಕೆ ಕುಸಿದ ಆಸೀಸ್:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸೀಸ್ಗೆ ಭಾರತೀಯ ಬೌಲರ್ಗಳು ಆರಂಭಿಕ ಆಘಾತ ನೀಡಿದರು. ಜಡೇಜಾ ಅವರ ದಾಳಿಗೆ ಕುಸಿದ ಆಸೀಸ್ ಅಲ್ಪಮೊತ್ತಕ್ಕೆ ಆಲೌಟ್ ಆಗುವ ಮೂಲಕ ಮೊದಲ ಇನ್ನಿಂಗ್ಸ್ ಮುಗಿಸಿದೆ. ಆಸೀಸ್ ಪರ ಡೇವಿಡ್ ವಾರ್ನರ್ 1 ರನ್, ಉಸ್ಮಾನ್ ಖವಾಜಾ 1 ರನ್, ಟೆಸ್ಟ್ ನಂಬರ್ 1 ಬ್ಯಾಟ್ಸ್ಮನ್ ಮಾರ್ನಸ್ ಲಾಬುಶೇನ್ 49 ರನ್, ಮ್ಯಾಟ್ ರೆನ್ಶಾ ಶೂನ್ಯ, ಸ್ಟೀವ್ ಸ್ಮಿತ್ 37 ರನ್, ಪೀಟರ್ ಹ್ಯಾಂಡ್ಸ್ಕಾಂಬ್ 31 ರನ್, ಅಲೆಕ್ಸ್ ಕ್ಯಾರಿ 36 ರನ್, ಪ್ಯಾಟ್ ಕಮಿನ್ಸ್ 6 ರನ್, ಸ್ಕಾಟ್ ಬೊಲಂಡ್ 1 ರನ್, ಟಾಡ್ ಮರ್ಫಿ ಶೂನ್ಯ ಮತ್ತು ನೇಥನ್ ಲ್ಯಾನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
Innings Break!
Brilliant effort from #TeamIndia bowlers as Australia are all out for 177 in the first innings.
An excellent comeback by @imjadeja as he picks up a fifer 👏👏
Scorecard - https://t.co/edMqDi4dkU #INDvAUS @mastercardindia pic.twitter.com/RPOign3ZEq
— BCCI (@BCCI) February 9, 2023
ಬಹಳ ದಿನಗಳ ನಂತರ ತಂಡಕ್ಕೆ ಮರಳಿದ ರವೀಂದ್ರ ಜಡೇಜಾ ಇಂದು ಆಸೀಸ್ ವಿರುದ್ಧ ಭರ್ಜರಿ ಬೌಲಿಂಗ್ ಮಾಡಿದರು. ಜಡೇಜಾ ಅವರು 22 ಓವರ್ ಎಸೆದು 8 ಓವರ್ ಮೇಡಿನ್ ಜೊತೆ 47 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಉಳಿಂದತೆ ಅಶ್ವಿನ್ ಸಹ 15.5 ಓವರ್ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಪಡೆದರು.
ಇದನ್ನೂ ಓದಿ: T20 World Cup 2023: ಟಿ20 ವಿಶ್ವಕಪ್ನಲ್ಲಿ ರಿಚಾ ಘೋಷ್ ಅಬ್ಬರ, ಕೊನೆಯ 2 ಓವರ್ನಲ್ಲಿ ಸಿಕ್ಸರ್ಗಳ ಸುರಿಮಳೆ
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲಂಡ್, ಟಾಡ್ ಮರ್ಫಿ, ನೇಥನ್ ಲ್ಯಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ