• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS: ಟಾಸ್​ ಗೆದ್ದ ಆಸ್ಟ್ರೇಲಿಯಾ, ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿದ ಟೀಂ ಇಂಡಿಯಾ; ಇಲ್ಲಿದೆ ಪ್ಲೇಯಿಂಗ್​ 11

IND vs AUS: ಟಾಸ್​ ಗೆದ್ದ ಆಸ್ಟ್ರೇಲಿಯಾ, ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿದ ಟೀಂ ಇಂಡಿಯಾ; ಇಲ್ಲಿದೆ ಪ್ಲೇಯಿಂಗ್​ 11

IND vs AUS

IND vs AUS

Border–Gavaskar Trophy: ಈಗಾಗಲೇ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಫಿಟ್ ಆಗಿರುವ ಬಳಿಕ ತಂಡಕ್ಕೆ ಮರಳಿರುವುದು ಭಾರತಕ್ಕೆ ಒಂದು ಉತ್ತಮ ಬೆಳವಣಿಗೆಯಾಗಿದೆ.

  • News18 Kannada
  • 5-MIN READ
  • Last Updated :
  • New Delhi, India
  • Share this:

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ (Vidarbha Cricket Association Stadium) ಆರಂಭವಾಗಿದೆ. ಭಾರತ ತಂಡ ಸತತ ಮೂರು ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು (Border–Gavaskar Trophy) ಜಯಿಸಿದ್ದು, ನಾಲ್ಕನೇ ಬಾರಿಗೆ ಸರಣಿ ವಶಪಡಿಸಿಕೊಳ್ಳುವತ್ತ ಟೀಂ ಇಂಡಿಯಾ ಕಣ್ಣಿಟ್ಟಿದೆ. ಈಗಾಗಲೇ ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಫಿಟ್ ಆಗಿರುವ ಬಳಿಕ ತಂಡಕ್ಕೆ ಮರಳಿರುವುದು ಭಾರತಕ್ಕೆ ಒಂದು ಉತ್ತಮ ಬೆಳವಣಿಗೆಯಾಗಿದೆ. ಇನ್ನು, ನಾಗ್ಪುರ್ ಪಿಚ್ ಮೊದಲ ದಿನದಿಂದಲೇ ತಿರುವು ಪಡೆಯುವ ಸಾಧ್ಯತೆ ಇದೆ. ಈ ಸರಣಿಯ ಮೊದಲ ಪಂದ್ಯ ಇಂದಿನಿಂದ ಫೆ.13ರ ವರೆಗೆ ನಡೆಯಲಿದೆ.


ಪಂದ್ಯದ ವಿವರ:


ಇನ್ನು, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಬಾರ್ಡರ್​ ಗವಾಸ್ಕರ್​ ಟ್ರೋಫಿಯ ಮೊದಲ ಪಂದ್ಯ ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಆರಂಭವಾಗಿದೆ. ಇಂದಿನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮತ್ತು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್‌ಡೇಟ್‌ಗಳಿಗಾಗಿ ನೀವು ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಬಹುದು.



ಭರತ್-ಸೂರ್ಯ ಟೆಸ್ಟ್​ಗೆ ಪಾದಾರ್ಪಣೆ:


ಸೂರ್ಯಕುಮಾರ್ ಯಾದವ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರು ನಾಗ್ಪುರ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಇಶಾನ್ ಕಿಶನ್ ಬದಲಿಗೆ ಭರತ್​ಗೆ ಅವಕಾಶ ದೊರಕಿದ್ದು, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್​ ಬ್ಯಾಟಿಂಗ್​ ಟೀಂ ಇಂಡಿಯಾಗೆ ಇನ್ನಷ್ಟು ಬಲ ತುಂಬಲಿದೆ. ಭರತ್ ಸಹ ಕೀಪಿಂಗ್​ ಮತ್ತು ಬ್ಯಾಟಿಂಗ್​ನಲ್ಲಿ ತಂಡಕ್ಕೆ ಸಹಕಾರಿಯಾಗಲಿದ್ದಾರೆ. ಅಲ್ಲದೇ ಇತ್ತ ಆಸ್ಟ್ರೇಲಿಯಾ ಸಹ ಟಾಡ್ ಮರ್ಫಿಗೆ ಚೊಚ್ಚಲ ಅವಕಾಶ ನೀಡಿದೆ.


WTC ಫೈನಲ್​​ ಮೇಲೆ ಭಾರತ ಕಣ್ಣು:


ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ 2023ರ ಫೈನಲ್​ ಜೂನ್​ನಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿಯ ಫೈನಲ್​ಗೆ ಈಗಾಗಲೇ ಆಸ್ಟ್ರೇಲಿಯಾ ತಲುಪಿದ್ದು, 2ನೇ ತಂಡವಾಗಿ ತಲುಪಲು ಭಾರತ ತಂಡ ಆಸೀಸ್​ ವಿರುದ್ಧ ಈ ಸರಣಿಯನ್ನು ಗೆಲ್ಲಲೇ ಬೇಕಿದೆ. ಈ ಸರಣಿಯನ್ನು 3-0 ಅಥವಾ 3-1 ಅಂತರದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟಿಕೆಟ್ ಕಾಯ್ದಿರಿಸಬಹುದು. ಇದರೊಂದಿಗೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿಯೂ ಅವರು ನಂಬರ್ ಒನ್ ಸ್ಥಾನವನ್ನು ಅಲಂಕರಿಸಬಹುದು.


ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್​ 11:


ಭಾರತ ಪ್ಲೇಯಿಂಗ್​ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್​.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.


ಆಸ್ಟ್ರೇಲಿಯಾ ಪ್ಲೇಯಿಂಗ್​ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್​ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲಂಡ್, ಟಾಡ್ ಮರ್ಫಿ, ನೇಥನ್ ಲ್ಯಾನ್.

Published by:shrikrishna bhat
First published: