ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ (VCS) ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾದ (IND vs AUS) ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ (Border–Gavaskar Trophy) ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸ್ಥಾನ ಖಚಿತ ಪಡಿಸಿಕೊಳ್ಳುವ ಸಲುವಾಗಿ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಹಾಗಿದ್ದರೆ, ಈ ಸರಣಿಯ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಪಂದ್ಯದ ವಿವರ:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30 ರಿಂದ ನಡೆಯಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಸರಣಿಯ ನೇರ ಪ್ರಸಾರ ಮತ್ತು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ನೀವು ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್‌ಡೇಟ್‌ಗಳಿಗಾಗಿ ನೀವು ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಬಹುದು.
ಪಿಚ್ ವರದಿ
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಗ್ರೌಂಡ್‌ನಲ್ಲಿರುವ ಪಿಚ್ ಕೆಂಪು-ಬಾಲ್ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ಸ್ನೇಹಿ ಮೇಲ್ಮೈಯನ್ನು ಹೊಂದಿದೆ. ಆದರೆ ಇತ್ತೀಚಿನ ವರದಿಯ ಪ್ರಕಾರ, ಸ್ಥಳದ ಕ್ಯುರೇಟರ್ ಈ ಪಂದ್ಯಕ್ಕಾಗಿ ಸ್ಪಿನ್ ಸ್ನೇಹಿ ಮೇಲ್ಮೈಯನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚು ಸಹಾಯಕವಾಗಿರಲಿದ್ದು, ಕೊನೆಯ ದಿನಗಳಲ್ಲಿ ಬೌಲರ್ಗಳಿಗೆ ಸಹಾಯಕವಾಗಿರಲಿದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆ ಇದೆ. 2008 VCA ಮೈದಾನವನ್ನು ಆರಂಭವಾಗಿದ್ದು, ಈವರೆಗೆ ವಿಸಿಎ ನಲ್ಲಿ 9 ಟೆಸ್ಟ್‌ಗಳನ್ನು ಆಯೋಜಿಸಲಾಗಿದೆ. ಮೈದಾನದ ಆಸನ ಸಾಮರ್ಥ್ಯ: 45,000 ಆಗಿದೆ.
ಇದನ್ನೂ ಓದಿ: Rohit Sharma: ಟೆಸ್ಟ್ ನಾಯಕತ್ವವನ್ನೂ ಕಳೆದುಕೊಳ್ತಾರಾ ರೋಹಿತ್? ಮಹತ್ವದ ನಿರ್ಧಾರಕ್ಕೆ ಮುಂದಾದ ಬಿಸಿಸಿಐ!
ಹವಾಮಾನ ವರದಿ:
ಇನ್ನು, ಇಂದಿನ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಈ ಪಂದ್ಯವು ಫೆ.9ರಿಂದ ಫೆ.13ರ ವರೆಗೆ ನಡೆಯಲಿದೆ. ಈ ಪಂದ್ಯದ 5 ದಿನಗಳ ಕಾಲ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಇರಲಿದೆ. ಹಾಗಾಗಿ ಪಂದ್ಯದ ಯಾವುದೇ ದಿನಗಳಲ್ಲಿ ಮಳೆಯ ಅಪಾಯವಿಲ್ಲ. ಆದ್ದರಿಂದ, ಟೆಸ್ಟ್ ಸರಣಿಯ ಆರಂಭಿಕ ಪಂದ್ಯದಲ್ಲಿ ಹವಾಮಾನವು ಹೇದರಿಕೆ ಇಲ್ಲ.
VCA ಮೈದಾನ ಅಂಕಿಅಂಶ:
ಪಂದ್ಯಗಳು: 6
ಭಾರತದ ಗೆಲುವು: 4, ಒಂದು ಪಂದ್ಯ ಡ್ರಾ
ಗರಿಷ್ಠ ಸ್ಕೋರ್: 2017ರಲ್ಲಿ ಭಾರತದ ವಿರುದ್ಧ ಶ್ರೀಲಂಕಾ 610/6
ಕಡಿಮೆ ಸ್ಕೋರ್: 2015ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 79/10
ಸರಾಸರಿ 1ನೇ ಇನ್ನಿಂಗ್ಸ್ ಸ್ಕೋರ್: 324
ಸರಾಸರಿ 2ನೇ ಇನ್ನಿಂಗ್ಸ್ ಸ್ಕೋರ್: 362
ಗರಿಷ್ಠ ವೈಯಕ್ತಿಕ ಸ್ಕೋರ್: ಹಾಶಿಮ್ ಆಮ್ಲ (253)
ಉತ್ತಮ ಬೌಲಿಂಗ್: ಜೇಸನ್ ಕ್ರೆಜಾ (251ಕ್ಕೆ 8 ವಿಕೆಟ್)
ಭಾರತ - ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11:
ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ (ಡಬ್ಲ್ಯುಕೆ), ಕ್ಯಾಮೆರಾನ್ ಗ್ರೀನ್ / ಮ್ಯಾಟ್ ರೆನ್ಶಾ, ನಾಥನ್ ಲಿಯಾನ್, ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್ (ಸಿ), ಲ್ಯಾನ್ಸ್ ಮೋರಿಸ್, ಸ್ಕಾಟ್ ಬೋಲ್ಯಾಂಡ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ