ಪ್ರಧಾನಿ ಮೋದಿಗೆ ಪತ್ರ ಬರೆದ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್

news18
Updated:August 30, 2018, 8:25 PM IST
ಪ್ರಧಾನಿ ಮೋದಿಗೆ ಪತ್ರ ಬರೆದ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್
news18
Updated: August 30, 2018, 8:25 PM IST
ನ್ಯೂಸ್ 18 ಕನ್ನಡ

ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದು ಬರೆದಿದ್ದಾರೆ. ಪ್ರಾಣಿಗಳ ಮೇಲೆ ನಡೆಯುತ್ತಿರುವ ಹಿಂಸೆ, ದೌರ್ಜನ್ಯವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು, ಪ್ರಾಣಿಗಳ ಮೇಲಿನ ಕ್ರೌರ್ಯದ ವಿರುದ್ಧ ಕಠಿಣವಾದ ಕಾನೂನು ಜಾರಿಗೊಳಿಸಬೇಕೆಂದು ಪ್ರಧಾನಿಗೆ ಪತ್ರ ಬರೆದು ಚಹಾಲ್ ಮನವಿ ಮಾಡಿದ್ದಾರೆ.

ಪ್ರಾಣಿಗಳ ಮೇಲೆ ನಡೆಯುತ್ತಿರುವ ಹಿಂಸೆಯನ್ನು ತಡೆಗಟ್ಟುವ ಅಗತ್ಯವಿದ್ದು, 1960ರ ಪ್ರಾಣಿಗಳ ದೌರ್ಜನ್ಯ ತಡೆ ಕಾಯ್ದೆಯ ಪ್ರಕಾರ, ಮೊದಲ ಬಾರಿ ಪ್ರಾಣಿಯನ್ನು ಹಿಂಸಿಸುವ ವ್ಯಕ್ತಿಗೆ 50 ರೂ. ದಂಡ ಹಾಕುವ ಅವಕಾಶವಿದೆ. ಆದರೆ ಆ ವ್ಯಕ್ತಿಗಳನ್ನು ಶಿಕ್ಷಿಸಲು ಸಾಧ್ಯವಿಲ್ಲ. ಈಗಿರುವ ಕಾನೂನನ್ನು ಬದಲಾಯಿಸಿ ಪ್ರಾಣಿಗಳನ್ನು ಹಿಂಸಿಸಿದರೆ ಅಂತವರಿಗೆ ಜೈಲು ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತನ್ನಿ ಎಂದು ಚಹಾಲ್ ಅವರು ಮೋದಿಗೆ ನೀಡಿದ ಪತ್ರದಲ್ಲಿ ಬರೆದಿದ್ದಾರೆ.
First published:August 30, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ