ಭಾರತ- ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯಕ್ಕೆ ಬೆಟ್ಟಿಂಗ್; 11 ಜನರ ಬಂಧನ

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಭಾರತ ಗೆದ್ದು ಬೀಗಿತ್ತು. ಹೀಗಾಗಿ ಮೂರನೇ ಏಕದಿನ ನಿರ್ಣಾಯಕ ಪಂದ್ಯವಾಗಿತ್ತು. ಇದರ ಜೊತೆಗೆ ಬೆಟ್ಟಿಂಗ್ ದಂಧೆ ಕೂಡ ಜೋರಾಗಿಯೇ ಇತ್ತು.

news18-kannada
Updated:January 20, 2020, 2:23 PM IST
ಭಾರತ- ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯಕ್ಕೆ ಬೆಟ್ಟಿಂಗ್; 11 ಜನರ ಬಂಧನ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜ. 20): ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಏತನ್ಮಧ್ಯೆ, ಈ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು 11 ಜನರನ್ನು ಬಂಧಿಸಿದ್ದಾರೆ.

ರಾಜಧಾನಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಬಂಧಿತರಿಂದ ಪೊಲೀಸರು 70 ಮೊಬೈಲ್ ಫೋನ್, ಎರಡು ಟಿವಿ ಮತ್ತು ಏಳು ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದೇ ದಿನ ಕೋಟ್ಯಂತರ ರೂಪಾಯಿ ಬೆಟ್ಟಿಂಗ್ ನಡೆದಿದೆ ಎಂದು ತಿಳಿದುಬಂದಿದೆ.

ಮಂಗಳೂರು ಏರ್​ಪೋರ್ಟ್​ನಲ್ಲಿ ಪತ್ತೆಯಾಯ್ತು ಸಜೀವ ಬಾಂಬ್; ಭದ್ರತಾ ವೈಫಲ್ಯ, ವಿಮಾನ ನಿಲ್ದಾಣ ಕೆಲಕಾಲ ಬಂದ್

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಭಾರತ ಗೆದ್ದು ಬೀಗಿತ್ತು. ಹೀಗಾಗಿ ಮೂರನೇ ಏಕದಿನ ನಿರ್ಣಾಯಕ ಪಂದ್ಯವಾಗಿತ್ತು. ಇದರ ಜೊತೆಗೆ ಬೆಟ್ಟಿಂಗ್ ದಂಧೆ ಕೂಡ ಜೋರಾಗಿಯೇ ಇತ್ತು. ಸದ್ಯ ಈ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟಿದ್ದ ಆರೋಪದ ಮೇಲೆ ದೆಹಲಿ ಪೊಲೀಸರ ಅಪರಾಧ ವಿಭಾಗವು 11 ಜನರನ್ನು ಬಂಧಿಸಿದೆ.

ಈ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಸ್ಟೀವ್ ಸ್ಮಿತ್ ಅವರ 131 ರನ್ ಹಾಗೂ ಮಾರ್ನಸ್ ಲಾಬುಶೇನ್ ಅವರ 54 ರನ್​ಗಳ ನೆರವಿನಿಂದ ಆಸೀಸ್ 50 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಬಾರಿಸಿತು.

ಪಂತ್ ಹೊರಕ್ಕೆ?: ನ್ಯೂಜಿಲೆಂಡ್ ಸರಣಿಗೆ ಹೊಸ ವಿಕೆಟ್ ಕೀಪರ್ ಎಂದ ಕೊಹ್ಲಿ; ಯಾರು ಗೊತ್ತಾ?

ಟಾರ್ಗೆಟ್ ಬೆನ್ನಟ್ಟಿದ ಭಾರತ ರೋಹಿತ್ ಶರ್ಮಾ(119) ಅವರ ಅಮೋಘ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ(89) ಅವರ ಅತ್ಯುತ್ತಮ ಬ್ಯಾಟಿಂಗ್​ನಿಂದಾಗಿ 47.3 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 289 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿತು.
First published: January 20, 2020, 2:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading