ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಪಂದ್ಯಕ್ಕೆ ಅಣಿಯಾಗುತ್ತಿದೆ. 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ 2ನೇ ಪಂದ್ಯದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ. ಅದರಲ್ಲೂ ಮೊದಲ ಪಂದ್ಯದಲ್ಲಿ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಅವರಿಗೆ 2ನೇ ಪಂದ್ಯದ ವೇಳೆ ವಿಶ್ರಾಂತಿ ನೀಡಲಿದ್ದಾರೆ.
ಅದರಂತೆ ದ್ವಿತೀಯ ಏಕದಿನ ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದ ಬ್ಯಾಟಿಂಗ್ ವೇಳೆ ಗಾಯಗೊಂಡ ರೋಹಿತ್ ಶರ್ಮಾ ಫೀಲ್ಡಿಂಗ್ಗೆ ಇಳಿದಿರಲಿಲ್ಲ. ಅವರ ಬದಲಿ ಆಟಗಾರನಾಗಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದಿದ್ದರು. ಹೀಗಾಗಿ 2ನೇ ಪಂದ್ಯದಲ್ಲೂ ಹಿಟ್ಮ್ಯಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.
ಮೊಣಕೈ ಗಾಯಕ್ಕೆ ತುತ್ತಾಗಿರುವ ರೋಹಿತ್ ಶರ್ಮಾ 2ನೇ ಪಂದ್ಯದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಮುಂಬರುವ ಐಪಿಎಲ್ ಹಾಗೂ ಟಿ20 ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಹಿಟ್ಮ್ಯಾನ್ ರಿಸ್ಕ್ ತೆಗೆದುಕೊಳ್ಳಲು ಮುಂದಾಗುವುದಿಲ್ಲ. ಅಲ್ಲದೆ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಇರುವುದರಿಂದ ತಂಡವು ಆತಂಕ ಪಡುವ ಅಗತ್ಯತೆ ಕೂಡ ಇಲ್ಲ. ಹೀಗಾಗಿ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಶುಭ್ಮನ್ ಗಿಲ್ ಆರಂಭಿಕರಾಗಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಶ್ರೇಯಸ್ ಉಳಿದ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಅಯ್ಯರ್ಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅಲಭ್ಯರಾಗಲಿದ್ದಾರೆ. ಇವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆಯಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ