HOME » NEWS » Sports » CRICKET 5 BIG RECORDS THAT CAN BE MADE DURING THIS SERIES ZP

AUS vs IND: ಭಾರತ-ಆಸ್ಟ್ರೇಲಿಯಾ ಟೆಸ್ಟ್​ನಲ್ಲಿ ಆಟಗಾರರ ಮುಂದಿದೆ 5 ದಾಖಲೆಗಳು

ಮೊದಲ ಟೆಸ್ಟ್​ ಪಂದ್ಯದ ಮೂಲಕ ವಿಶ್ವ ದಾಖಲೆ ಬರೆಯುವ ಸುವರ್ಣಾವಕಾಶ ಕೊಹ್ಲಿ ಮುಂದಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಮೂಡಿಬಂದರೆ ನಾಯಕನಾಗಿ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ.

news18-kannada
Updated:December 16, 2020, 9:56 PM IST
AUS vs IND: ಭಾರತ-ಆಸ್ಟ್ರೇಲಿಯಾ ಟೆಸ್ಟ್​ನಲ್ಲಿ ಆಟಗಾರರ ಮುಂದಿದೆ 5 ದಾಖಲೆಗಳು
India vs Australia
  • Share this:
ಡಿಸೆಂಬರ್ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ. ಹೊನಲು-ಬೆಳಕಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್​ ಪಂದ್ಯವನ್ನು ವೀಕ್ಷಿಸಲು ಇಡೀ ವಿಶ್ವ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.

ಇನ್ನೂ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್​ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್​ ಬ್ರಿಸ್ಬೇನ್​ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ. ಈ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಕೊಹ್ಲಿ-ಅನುಷ್ಕಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ನಾಯಕ ಮೊದಲ ಪಂದ್ಯದ ಬಳಿಕ ಭಾರತಕ್ಕೆ ಮರಳಲಿದ್ದಾರೆ.

ಇನ್ನು ಈ ಟೆಸ್ಟ್ ಸರಣಿ ಮೂಲಕ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಅತ್ತ ಆಸ್ಟ್ರೇಲಿಯಾದ ಇಬ್ಬರು ಹೊಸ ರೆಕಾರ್ಡ್ ಕ್ರಿಯೇಟ್ ಮಾಡಲು ತುದಿಗಾಲಲ್ಲಿ ನಿಂತಿದ್ರೆ, ಇತ್ತ ಟೀಮ್ ಇಂಡಿಯಾದ ಮೂವರು ಹೊಸ ದಾಖಲೆಯೊಂದಿಗೆ ಭಾರತಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಹಾಗಿದ್ರೆ ಇಂಡೋ-ಆಸೀಸ್ ಟೆಸ್ಟ್ ಸರಣಿಯಲ್ಲಿ ಯಾರಿಗೆಲ್ಲಾ ದಾಖಲೆ ನಿರ್ಮಾಣ ಮಾಡುವ ಅವಕಾಶಗಳಿವೆ ನೋಡೋಣ.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಗರಿಷ್ಠ ವಿಕೆಟ್‌ಗಳ ಪಡೆದ ಅಗ್ರ 3 ಬೌಲರ್‌ಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಸುವರ್ಣಾವಕಾಶವಿದೆ. ಆಸೀಸ್ ವಿರುದ್ಧ ಏಳು ಟೆಸ್ಟ್ ಪಂದ್ಯಗಳಲ್ಲಿ ಶಮಿ 30.83 ಸರಾಸರಿಯಲ್ಲಿ 31 ವಿಕೆಟ್ ಪಡೆದಿದ್ದಾರೆ.

ಇನ್ನು ಈ ಸರಣಿಯಲ್ಲಿ ಅವರು ಐದು ವಿಕೆಟ್ ಪಡೆದರೆ, ಆಸ್ಟ್ರೇಲಿಯಾದಲ್ಲಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದಿರುವ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ. ಈ ದಾಖಲೆ ಬಿಶನ್ ಸಿಂಗ್ ಬೇಡಿ ಅವರ ಹೆಸರಿನಲ್ಲಿದ್ದು, ಬೇಡಿ ಆಸ್ಟ್ರೇಲಿಯಾದಲ್ಲಿ ನಡೆದ 7 ಟೆಸ್ಟ್ ಪಂದ್ಯಗಳಲ್ಲಿ 35 ವಿಕೆಟ್ ಪಡೆದಿದ್ದಾರೆ.

ನಾಥನ್ ಲಿಯಾನ್: ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಾಥನ್ ಲಿಯಾನ್ ಬಾರ್ಡರ್-ಗವಾಸ್ಕರ್ ಸರಣಿಯ ಅತ್ಯಂತ ಯಶಸ್ವಿ ಬೌಲರುಗಳಲ್ಲಿ ಒಬ್ಬರು. 18 ಟೆಸ್ಟ್ ಪಂದ್ಯಗಳಲ್ಲಿ ಲಿಯಾನ್ 85 ವಿಕೆಟ್ ಪಡೆದಿದ್ದಾರೆ. ಇನ್ನು ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಆಟಗಾರರಾಗಲು ಅವರಿಗೆ ಒಂದು ವಿಕೆಟ್ ಅವಶ್ಯಕತೆಯಿದೆ. ಈ ಮೂಲಕ 18 ಟೆಸ್ಟ್ ಪಂದ್ಯಗಳಲ್ಲಿ 85 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿ ದಾಖಲೆ ಬರೆಯುವ ಅವಕಾಶ ಲಿಯಾನ್ ಮುಂದಿದೆ.

ಚೇತೇಶ್ವರ ಪೂಜಾರ: ಚೇತೇಶ್ವರ ಪೂಜಾರ 2018-19ರ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಹೆಚ್ಚು ರನ್ ಗಳಿಸಿದ್ದರು. ಅಲ್ಲದೆ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿ ಪೂಜಾರಾಗೆ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿ ದಾಖಲೆ ಬರೆಯುವ ಅವಕಾಶ ಒದಗಿ ಬಂದಿದೆ. ಪೂಜಾರ ಆಸ್ಟ್ರೇಲಿಯಾ ವಿರುದ್ಧ 16 ಟೆಸ್ಟ್‌ಗಳಲ್ಲಿ 1622 ರನ್ ಗಳಿಸಿದ್ರೆ, ಸೆಹ್ವಾಗ್ 22 ಪಂದ್ಯಗಳಲ್ಲಿ 1738 ರನ್ ಗಳಿಸಿದ್ದಾರೆ. ಇನ್ನೂ 117 ರನ್ ಗಳಿಸಿದರೆ, ಸೆಹ್ವಾಗ್ ಅವರನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ವಿರುದ್ಧ ಯಶಸ್ವಿ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಲಿದ್ದಾರೆ.ಸ್ಟೀವ್ ಸ್ಮಿತ್: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದ ಶ್ರೇಷ್ಠ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲು ಸ್ಟೀವ್ ಸ್ಮಿತ್‌ಗೆ ಎರಡು ಶತಕಗಳ ಅಗತ್ಯವಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ 10 ಟೆಸ್ಟ್ ಪಂದ್ಯಗಳಲ್ಲಿ ಸ್ಮಿತ್ 7 ಶತಕಗಳನ್ನು ಬಾರಿಸಿದ್ದಾರೆ. ಇನ್ನು ಈ ಸರಣಿಯಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಹೆಸರಲ್ಲಿದೆ. ಅವರು 29 ಪಂದ್ಯಗಳಲ್ಲಿ 8 ಶತಕಗಳನ್ನು ಸಿಡಿಸಿದ್ದಾರೆ. ಹೀಗಾಗಿ 4 ಟೆಸ್ಟ್ ಪಂದ್ಯಗಳಲ್ಲಿ ಸ್ಮಿತ್ 2 ಶತಕ ಬಾರಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ.

ವಿರಾಟ್ ಕೊಹ್ಲಿ: ಮೊದಲ ಟೆಸ್ಟ್​ ಪಂದ್ಯದ ಮೂಲಕ ವಿಶ್ವ ದಾಖಲೆ ಬರೆಯುವ ಸುವರ್ಣಾವಕಾಶ ಕೊಹ್ಲಿ ಮುಂದಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಮೂಡಿಬಂದರೆ ನಾಯಕನಾಗಿ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಪಂಟರ್ ಪಾಂಟಿಂಗ್ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ನಾಯಕನಾಗಿ 41 ಶತಕಗಳನ್ನು ಬಾರಿಸಿದ್ರೆ, ವಿರಾಟ್ ಕೊಹ್ಲಿ ಸಹ 41 ಶತಕಗಳನ್ನು ಸಿಡಿಸಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಕೊಹ್ಲಿ ಶತಕ ಬಾರಿಸುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.
Published by: zahir
First published: December 16, 2020, 9:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories