ಟೀಮ್ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಕೊರೋನಾ ಪಾಸಿಟಿವ್ ಸುದ್ದಿ ಬೆನ್ನಲ್ಲೇ, ಇದೀಗ ಮತ್ತೋರ್ವ ಭಾರತ ತಂಡದ ಮಾಜಿ ಆಟಗಾರ ಯುಸೂಫ್ ಪಠಾಣ್ ಕೂಡ ಕೊರೋನಾ ಸೋಂಕಿಗೆ ತುತ್ತಾಗಿರುವುದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯೂಸುಫ್ ಪಠಾಣ್, 'ನನಗೆ ಕೊರೋನಾ ವೈರಸ್ ಪಾಸಿಟಿವ್ ಇರುವುದು ತಿಳಿದು ಬಂದಿದೆ. ಪರೀಕ್ಷೆಯಲ್ಲಿ ಈ ಸೋಂಕಿನ ಗುಣ ಲಕ್ಷಣಗಳು ಕಂಡು ಬಂದಿದೆ. ಹೀಗಾಗಿ ನಾನು ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಾರೆ.
ಅಲ್ಲದೆ ಕೊರೋನಾ ಸೋಂಕು ಇತರರಿಗೆ ಹರಡದಂತೆ ಸೂಚಿಸಲಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ನಾನು ಪಾಲಿಸುತ್ತಿರುವುದಾಗಿ ಯೂಸುಫ್ ಪಠಾಣ್ ತಿಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರಲ್ಲಿ ಕೊರೋನಾ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಬೆನ್ನಲ್ಲೇ ಯುಸೂಫ್ ಪಠಾಣ್ ಕೊರೋನಾ ಟೆಸ್ಟ್ ವರದಿ ಕೂಡ ಪಾಸಿಟಿವ್ ಬಂದಿರುವುದು ಇತರೆ ಆಟಗಾರರ ಚಿಂತೆಗೆ ಕಾರಣವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ