India squad: ಆಸ್ಟ್ರೇಲಿಯಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಮೂವರು ಕನ್ನಡಿಗರಿಗೆ ಅವಕಾಶ

India squad for Australia tour: ಈ ಸರಣಿಯಲ್ಲಿ ಭಾರತ 4 ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನು ಆಡಲಿದೆ. ಐಪಿಎಲ್​ನಲ್ಲಿ ಗಾಯಗೊಂಡಿರುವ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್​ ಇಶಾಂತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯುವ ಆಟಗಾರರಿಗೆ ಸ್ಥಾನ ನೀಡಿಲಾಗಿದೆ.

Team India

Team India

 • Share this:
  ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನವೆಂಬರ್ 10 ರಂದು ಮುಕ್ತಾಯಗೊಳ್ಳಲಿದ್ದು, ಅದರ ಬೆನ್ನಲ್ಲೇ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಆಸೀಸ್​ ವಿರುದ್ಧ ಸರಣಿಗಾಗಿ ಪ್ರಯಾಣ ಬೆಳೆಸಲಿದೆ. ಈ ಸರಣಿಯಲ್ಲಿ ಭಾರತ 4 ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನು ಆಡಲಿದೆ. ಐಪಿಎಲ್​ನಲ್ಲಿ ಗಾಯಗೊಂಡಿರುವ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್​ ಇಶಾಂತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯುವ ಆಟಗಾರರಿಗೆ ಸ್ಥಾನ ನೀಡಿಲಾಗಿದೆ.

  ಇನ್ನು ಏಕದಿನ ಹಾಗೂ ಟಿ20 ಪಂದ್ಯಗಳಿಗೆ ಕನ್ನಡಿಗ ಕೆಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದು, ಅದರೊಂದಿಗೆ ಟೆಸ್ಟ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮಯಾಂಕ್ ಅಗರ್ವಾಲ್ ಸಹ ಮೂರು ತಂಡಗಳಲ್ಲೂ ಸ್ಥಾನಗಿಟ್ಟಿಸಿಕೊಂಡಿದ್ದು, ಮನೀಷ್ ಪಾಂಡೆ ಟಿ20 ಹಾಗೂ ಏಕದಿನ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲಿದ್ದಾರೆ.

  ಇನ್ನು ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ 5 ವಿಕೆಟ್ ಕಬಳಿಸಿದ ಕೆಕೆಆರ್​ ಸ್ಪಿನ್ನರ್ ವರುಣ್ ಚಕ್ರವರ್ತಿ ಟಿ20 ಬಳಗದಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ಸಂಜು ಸ್ಯಾಮ್ಸನ್, ಪಂತ್ ಕಂಬ್ಯಾಕ್ ಮಾಡಿದರೆ, ಕೆಕೆಆರ್ ತಂಡದ ಆರಂಭಿಕ ಶುಭ್​ಮನ್ ಗಿಲ್ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

  ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ದೀಪಕ್ ಚಹರ್, ನವದೀಪ್ ಸೈನಿ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ

  ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಭ್​ಮನ್ ಗಿಲ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್

  ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ಶುಭ್​ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್

  ಇದನ್ನೂ ಓದಿ: IPL 2020: ಬೆನ್ ಸ್ಟೋಕ್ಸ್ ಬೆರಳು ಮಡಚಿದ್ದರ ಹಿಂದಿದೆ ಮತ್ತೊಂದು ಕಹಾನಿ..!
  Published by:zahir
  First published: