HOME » NEWS » Sports » CRICKET BCCI ANNOUNCES TEAM INDIA SQUAD FOR ENGLAND T20IS ZP

Team India: ಇಂಗ್ಲೆಂಡ್​ ವಿರುದ್ದ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಮೂವರು ಹೊಸಬರಿಗೆ ಅವಕಾಶ

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ವಿಕೆಟ್‌ ಕೀಪರ್).

news18-kannada
Updated:February 21, 2021, 5:26 PM IST
Team India: ಇಂಗ್ಲೆಂಡ್​ ವಿರುದ್ದ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಮೂವರು ಹೊಸಬರಿಗೆ ಅವಕಾಶ
Team india
  • Share this:
ಇಂಗ್ಲೆಂಡ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 19 ಸದಸ್ಯರನ್ನು ಒಳಗೊಂಡಿರುವ ಈ ಬಳಗದಲ್ಲಿ ಮುಂಬೈ ಆಟಗಾರ ಸೂರ್ಯಕುಮಾರ್ ಯಾದವ್, ಯುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಹಾಗೂ ರಾಹುಲ್ ತಿವಾಠಿಯಾ ಚೊಚ್ಚಲ ಬಾರಿಗೆ ಸ್ಥಾನ ಪಡೆದಿದ್ದಾರೆ.

ಕಳೆದ ಸೀಸನ್​ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿರಲಿಲ್ಲ. ಆದರೆ ಈ ಬಾರಿ ದೇಶೀಯ ಕ್ರಿಕೆಟ್​ನಲ್ಲೂ ಮಿಂಚುವ ಮೂಲಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ವಿಕೆಟ್​ ಕೀಪರ್ ಆಗಿ ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆಗೊಂಡಿದ್ದು, ಹಾಗೆಯೇ ಆಲ್​ರೌಂಡರ್​ ಸ್ಥಾನದಲ್ಲಿ ರಾಹುಲ್ ತಿವಾಠಿಯ ಟೀಮ್​ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿ, ಗಾಯದಿಂದ ಹೊರಗುಳಿದಿದ್ದ ಸ್ಪಿನ್ನರ್​ ವರಣ್ ಚಕ್ರವರ್ತಿ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಈ ಸರಣಿಯಿಂದ ಜಸ್​ಪ್ರೀತ್ ಬುಮ್ರಾ ಹಾಗಊ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸಲಿದ್ದಾರೆ. ಮಾರ್ಚ್​ 12ರಿಂದ ಅಹ್ಮದಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿ ಆರಂಭವಾಗಲಿದೆ.

ಟೀಮ್ ಇಂಡಿಯಾ ಟಿ20 ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ವಿಕೆಟ್‌ ಕೀಪರ್), ಇಶಾನ್ ಕಿಶನ್(ವಿಕೆಟ್‌ ಕೀಪರ್),ಯಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತಿವಾಠಿಯಾ, ಟಿ.ನಟರಾಜನ್, ಭುವನೇಶ್ವರ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.
Published by: zahir
First published: February 21, 2021, 4:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories