HOME » NEWS » Sports » CRICKET BCCI PLANS T20I SERIES AGAINST SOUTH AFRICA NEW ZEALAND ZEALAND BEFORE T20 WORLD CUP ZP

ಟಿ20 ವಿಶ್ವಕಪ್​ಗೂ ಮುನ್ನ ಮತ್ತೆರಡು ಸರಣಿ ಆಯೋಜಿಸಲು ಬಿಸಿಸಿಐ ಬಿಗ್ ಪ್ಲ್ಯಾನ್..!

ಇಂಗ್ಲೆಂಡ್ ವಿರುದ್ಧದ ಸರಣಿ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಇದರ ಬಳಿಕ ಭಾರತವು ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಆಡಲಿದೆ.

news18-kannada
Updated:March 18, 2021, 8:09 PM IST
ಟಿ20 ವಿಶ್ವಕಪ್​ಗೂ ಮುನ್ನ ಮತ್ತೆರಡು ಸರಣಿ ಆಯೋಜಿಸಲು ಬಿಸಿಸಿಐ ಬಿಗ್ ಪ್ಲ್ಯಾನ್..!
Team india
  • Share this:
ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೂ ಮುನ್ನ ಮತ್ತೆರಡು ಸರಣಿಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಈ ಬಗ್ಗೆ ಈಗಾಗಲೇ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಬಿಸಿಸಿಐ ಮಾತುಕತೆ ನಡೆಸಿದೆ. ಅದರಂತೆ ಅಕ್ಟೋಬರ್​ನಲ್ಲಿ ದ್ವಿಪಕ್ಷೀಯ ಸರಣಿಯನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ.

ಈ ಟಿ20 ಸರಣಿಗಾಗಿ ನ್ಯೂಜಿಲೆಂಡ್ ತಂಡವು ಅಕ್ಟೋಬರ್​ ವೇಳೆ ಭಾರತಕ್ಕೆ ಬರಲಿದ್ದು, ಅದರ ಬೆನ್ನಲ್ಲೇ ಇದೇ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಭಾರತ ಟಿ20 ಸರಣಿ ಆಡಲಿದೆ ಎಂದು ವರದಿಯಾಗಿದೆ. ಈ ಸರಣಿಗೆ ನ್ಯೂಜಿಲೆಂಡ್ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇನ್ನಷ್ಟೇ ರೂಪುರೇಷೆಗಳನ್ನು ಸಿದ್ಧಪಡಿಸಬೇಕಿದೆ. ಹಾಗೆಯೇ ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಕೊರೋನಾ ವೈರಸ್ ಕಾರಣದಿಂದಾಗಿ ಅನಿರೀಕ್ಷಿತವಾಗಿ ರದ್ದಾಗಿತ್ತು. ಈ ಸರಣಿಯನ್ನು ಇದೀಗ ಅಕ್ಟೋಬರ್​ನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.


ವಿಶ್ವಕಪ್ ಆರಂಭಕ್ಕೂ ಮುನ್ನ ತಂಡ ಉತ್ತಮ ಲಯದಲ್ಲಿರಲು, ಮತ್ತೆರಡು ಸರಣಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ಭಾರತ ತಂಡಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಇಂಗ್ಲೆಂಡ್ ವಿರುದ್ಧದ ಸರಣಿ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಇದರ ಬಳಿಕ ಭಾರತವು ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಆಡಲಿದೆ. ಇದೇ ವೇಳೆ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನೂ ಭಾರತ ಆಡಬೇಕಿದೆ. ಈ ನಡುವೆ ಏಷ್ಯಾ ಕಪ್ ಕೂಡ ಜರುಗಲಿದ್ದು, ಅದರ ಬಳಿಕ ಅಕ್ಟೋಬರ್​ನಲ್ಲಿ ಟಿ20 ಸರಣಿಯನ್ನು ಆಯೋಜಿಸಲಿದೆ.
Published by: zahir
First published: March 18, 2021, 8:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories