HOME » NEWS » Sports » CRICKET CHECK INDIA VS ENGLAND 2ND ODI PREDICTED PLAYING 11 ZP

India vs England 2nd ODI: ಇಂಡಿಯಾ-ಇಂಗ್ಲೆಂಡ್ 2ನೇ ಏಕದಿನ: ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ..!

ಭಾರತ: ವಿರಾಟ್ ಕೊಹ್ಲಿ (ನಾಯಕ) ಶಿಖರ್ ಧವನ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಕೆ.ಎಲ್.ರಾಹುಲ್ (ವಿಕೆಟ್​ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ.

news18-kannada
Updated:March 25, 2021, 8:47 PM IST
India vs England 2nd ODI: ಇಂಡಿಯಾ-ಇಂಗ್ಲೆಂಡ್ 2ನೇ ಏಕದಿನ: ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ..!
India vs England
  • Share this:
ಪುಣೆಯ ಮಹಾರಾಷ್ಟ್ರ ಕ್ರಿಕೆಟ್​ ಅಸೋಸಿಯೇಷನ್ ಮೈದಾನದಲ್ಲಿ ಶುಕ್ರವಾರ ಭಾರತ-ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವನ್ನು 66 ರನ್​ಗಳಿಂದ ಗೆದ್ದುಕೊಂಡಿರುವ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲೂ ಜಯ ಸಾಧಿಸಿ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಅತ್ತ ಇಂಗ್ಲೆಂಡ್ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿದೆ.

ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ 2ನೇ ಪಂದ್ಯದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಅವರಿಗೆ 2ನೇ ಪಂದ್ಯದ ವೇಳೆ ವಿಶ್ರಾಂತಿ ನೀಡಲಿದ್ದಾರೆ. ಅದರಂತೆ ದ್ವಿತೀಯ ಏಕದಿನ ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದ ಬ್ಯಾಟಿಂಗ್ ವೇಳೆ ಗಾಯಗೊಂಡ ರೋಹಿತ್ ಶರ್ಮಾ ಫೀಲ್ಡಿಂಗ್​ಗೆ ಇಳಿದಿರಲಿಲ್ಲ. ಅವರ ಬದಲಿ ಆಟಗಾರನಾಗಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದಿದ್ದರು. ಹೀಗಾಗಿ 2ನೇ ಪಂದ್ಯದಲ್ಲೂ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಮೊಣಕೈ ಗಾಯಕ್ಕೆ ತುತ್ತಾಗಿರುವ ರೋಹಿತ್ ಶರ್ಮಾ 2ನೇ ಪಂದ್ಯದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಮುಂಬರುವ ಐಪಿಎಲ್ ಹಾಗೂ ಟಿ20 ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಟೀಮ್ ಮ್ಯಾನೇಜ್ಮೆಂಟ್​ ಹಿಟ್​ಮ್ಯಾನ್​ಗೆ ವಿಶ್ರಾಂತಿ ನೀಡಬಹುದು. ಅಲ್ಲದೆ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಇರುವುದರಿಂದ ತಂಡವು ಆತಂಕ ಪಡುವ ಅಗತ್ಯತೆ ಕೂಡ ಇಲ್ಲ. ಹೀಗಾಗಿ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಶುಭ್​ಮನ್ ಗಿಲ್ ಆರಂಭಿಕರಾಗಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಇನ್ನು ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಶ್ರೇಯಸ್ ಉಳಿದ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಅಯ್ಯರ್​ಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅಲಭ್ಯರಾಗಲಿದ್ದಾರೆ. ಇವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ.

ಹಾಗೆಯೇ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾ ವೇಗಿಗಳು ಮಿಂಚಿದರೂ, ಸ್ಪಿನ್ನರ್ ಕುಲ್​ದೀಪ್ ಯಾದವ್ ಯಾವುದೇ ರೀತಿಯ ಪ್ರಭಾವ ಬೀರಿರಲಿಲ್ಲ. 9 ಓವರ್‌ಗಳನ್ನು ಎಸೆದ ಕುಲ್​ದೀಪ್ 68 ರನ್​ ನೀಡಿ ದುಬಾರಿ ಎನಿಸಿಕೊಂಡಿದ್ದರು. ಹೀಗಾಗಿ 2ನೇ ಏಕದಿನ ತಂಡದಲ್ಲಿ ಕುಲ್​ದೀಪ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇವರ ಬದಲಿಯಾಗಿ ಮತ್ತೋರ್ವ ಸ್ಪಿನ್ನರ್ ಯಜುವೇಂದ್ರ ಚಹಲ್ ಅಥವಾ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯೆಯಿದೆ.

ಇನ್ನು ಇಂಗ್ಲೆಂಡ್ ತಂಡದ ಆಟಗಾರರು ಕೂಡ ಗಾಯದ ಸಮಸ್ಯೆಗೆ ಒಳಗಾಗಿರುವುದು ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ಇಯಾನ್ ಮೋರ್ಗನ್ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆ ಪಡೆದು ಬ್ಯಾಟಿಂಗ್​ಗೆ ಇಳಿದರೂ ಉತ್ತಮ ಪ್ರದರ್ಶನ ನೀಡಲಾಗಿರಲಿಲ್ಲ.

ಹಾಗೆಯೇ ಸ್ಯಾಮ್ ಬಿಲ್ಲಿಂಗ್ಸ್ ಕೂಡ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯುವ ಯತ್ನದಲ್ಲಿ ಗಾಯಗೊಂಡಿದ್ದರು. ಭುಜದ ಭಾಗ ಊದಿಕೊಂಡಿದ್ದರೂ ಬಿಲ್ಲಿಂಗ್ಸ್​ ಬ್ಯಾಟಿಂಗ್​ಗೆ ಆಗಮಿಸಿದ್ದರು. ಇದೇ ವೇಳೆ ಇಂಗ್ಲೆಂಡ್ ತಂಡದ ಇಬ್ಬರು ಆಟಗಾರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ರಿಪೋರ್ಟ್ ಸಿಗಲು 48 ಗಂಟೆಗಳ ಕಾಲ ಕಾಯಬೇಕಾಗುತ್ತದೆ. ಈ ವರದಿ ಬಳಿಕವಷ್ಟೇ ಇಬ್ಬರ ಫಿಟ್​ನೆಸ್ ನಿರ್ಧಾರವಾಗಲಿದೆ.​ ಹೀಗಾಗಿ ಇವರಿಬ್ಬರೂ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಇನ್ನು ಮೊದಲ ಪಂದ್ಯದಲ್ಲಿ ವಿಫಲರಾಗಿದ್ದ ಆದಿಲ್ ರಶೀದ್ ಸ್ಥಾನದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಏಕದಿನ ಕ್ರಿಕೆಟ್​ಗೆ ಪಾದರ್ಪಣೆ ಮಾಡುವ ಸಾಧ್ಯತೆಯಿದೆ.ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ:
ಭಾರತ: ವಿರಾಟ್ ಕೊಹ್ಲಿ (ನಾಯಕ) ಶಿಖರ್ ಧವನ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಕೆ.ಎಲ್.ರಾಹುಲ್ (ವಿಕೆಟ್​ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಯಜ್ವೇಂದ್ರ ಚಹಲ್.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ)/ ಇಯಾನ್ ಮೋರ್ಗನ್, ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಬೆನ್ ಸ್ಟೋಕ್ಸ್, ಮೊಯೀನ್ ಅಲಿ, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಮಾರ್ಕ್ ವುಡ್, ಮ್ಯಾಟ್ ಪಾರ್ಕಿನ್ಸನ್
Published by: zahir
First published: March 25, 2021, 8:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories