ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ 8ನೇ ಆವೃತ್ತಿ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಅದರಲ್ಲೂ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ನಾಯಕ, ಐಪಿಎಲ್ನ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಕೀರೊನ್ ಪೊಲಾರ್ಡ್ ಬಾರ್ಬಡೋಸ್ ಟ್ರೈಡೆಂಟ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಕೆರಿಬಿಯನ್ ಲೀಗ್ 9ನೇ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ 19 ರನ್ಗಳ ರೋಚಕ ಗೆಲುವು ಸಾಧಿಸಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದೆ.
ಟಾಸ್ ಗೆದ್ದ ಬಾರ್ಬಡೋಸ್ ಟ್ರೈಡೆಂಟ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ಗೆ ಇಳಿದ ಟ್ರಿನ್‌ಬಾಗೊ ತಂಡ ಬೇಗನೆ ಎಲ್. ಸಿಮಾನ್ಸ್(21) ಹಾಗೂ ಸುನೀಲ್ ನರೈನ್(8) ವಿಕಟ್ ಕಳೆದುಕೊಂಡಿತಾದರೂ, ಬಳಿಕ ಕಾಲಿನ್ ಮನ್ರೋ ಹಾಗೂ ಬ್ರಾವೋ ಅಬ್ಬರದ ಬ್ಯಾಟಿಂಗ್ ನಡೆಸಿದರು. ಮೈಚಳಿ ಬಿಟ್ಟು ಆಡಿದ ಈ ಜೋಡಿ ತಂಡದ ಮೊತ್ತವನ್ನು ಏರಿಸಿತು.
IPL 2020: ಐಪಿಎಲ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯಿಂದ ಆರ್ಸಿಬಿ ಆಟಗಾರರಿಗೆ ಖಡಕ್ ಎಚ್ಚರಿಕೆ!
FURNITURE DESTROYED! Reifer strikes Narine departs. #CPL20 #TKRvBT #CricketPlayedLouder pic.twitter.com/sXCUjvtm22
— CPL T20 (@CPL) August 23, 2020
ಪೊಲಾರ್ಡ್ ಕೇವಲ 17 ಎಸೆತಗಳಲ್ಲಿ ಅಮೋಘ 4 ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸಿ ಅಜೇಯ 41 ರನ್ ಚಚ್ಚಿದರು. ಬ್ರಾವೋ 36 ಎಸೆತಗಳಲ್ಲಿ ಅಜೇಯ 54 ರನ್ ಬಾರಿಸಿದರು. ಅಂತಿಮವಾಗಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡ 20 ಓವರ್ನಲ್ಲಿ 3 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿತು.
POWERFUL POLLY! @KieronPollard55 makes it look easy. #CPL20 #TKRvBT #CricketPlayedLouder pic.twitter.com/Hq9XQV58W8
— CPL T20 (@CPL) August 23, 2020
IPL 2020: ಕನ್ನಡಿಗರಿಂದ ಕೂಡಿರುವ ಪಂಜಾಬ್ ತಂಡಕ್ಕೆ ಕೊರೋನಾಘಾತ: ಸ್ಟಾರ್ ಆಟಗಾರ ಆಡೋದೆ ಡೌಟ್
ಬಾರ್ಬಡೋಸ್ ಟ್ರೈಡೆಂಟ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 166 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲೊಪ್ಪಿಗೊಂಡಿತು. ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡ 19 ರನ್ಗಳ ಜಯ ಸಾಧಿಸಿತು.
ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನೂ ಗೆದ್ದು 6 ಅಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ಲೂಸಿಯ ಜೌಕ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಗೆದ್ದು ಎರಡನೇ ಸ್ಥಾನದಲ್ಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ