Suresh Raina: ನಿಮ್ಮ ಪರಿಶ್ರಮ ಶ್ಲಾಘನೀಯ: ಮುಖ್ಯಮಂತ್ರಿ, ಪೊಲೀಸರಿಗೆ ಧನ್ಯವಾದ ತಿಳಿಸಿದ ಸುರೇಶ್ ರೈನಾ!

ಆಗಸ್ಟ್ 28ರ ರಾತ್ರಿ ದರೋಡೆಕೋರರ ತಂಡ ಸುರೇಶ್ ರೈನಾ ಕುಟುಂಬದ ಮನೆ ಮೇಲೆಗೆ ದಾಳಿ ನಡೆಸುವ ಮೊದಲು ಮೂರು ಕಡೆ ದರೋಡೆಗೆ ವಿಫಲ ಯತ್ನ ನಡೆಸಿದ್ದರು. ಕೊನೆಗೆ ರೈನಾ ಸೋದರತ್ತೆ ಮನೆ ಮೇಲೆ ದಾಳಿಗೆ ಯತ್ನ ನಡೆಸಿದ್ದಾರೆ.

news18-kannada
Updated:September 16, 2020, 8:13 PM IST
Suresh Raina: ನಿಮ್ಮ ಪರಿಶ್ರಮ ಶ್ಲಾಘನೀಯ: ಮುಖ್ಯಮಂತ್ರಿ, ಪೊಲೀಸರಿಗೆ ಧನ್ಯವಾದ ತಿಳಿಸಿದ ಸುರೇಶ್ ರೈನಾ!
ಸುರೇಶ್ ರೈನಾ.
  • Share this:
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಸಂಬಂಧಿಯ ಕೊಲೆ ಪ್ರಕರಣ ಬೇಧಿಸಿರುವ ಪೋಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರು ದರೋಡೆಕೋರರು, ಅಂತರರಾಜ್ಯ ಗ್ಯಾಂಗ್‌ನ ಸದಸ್ಯರೆಂದು ತಿಳಿದುಬಂದಿದ್ದು ಇತರೆ 11 ಮಂದಿ ಆರೋಪಿಗಳನ್ನು ಇನ್ನೂ ಬಂಧಿಸಬೇಕಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ. ಈ ಪ್ರಕರಣದ ಕುರಿತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಾತನಾಡಿ, ಸುರೇಶ್ ರೈನಾ ಕುಟುಂಬದ ಮೇಲೆ ದಾಳಿ ನಡೆಸಿದ್ದ ಪ್ರಕರಣವನ್ನು ಪಂಜಾಬ್ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದಿದ್ದಾರೆ.

ಕಳೆದ ಆಗಸ್ಟ್ 28ರಂದು ರಾತ್ರಿ ರೈನಾ ಸೋದರತ್ತೆ ಕುಟುಂಬದ ಮೇಲೆ ತಂಡವೊಂದು ದಾಳಿ ಮಾಡಿತ್ತು. ಮನೆಯ ಮಹಡಿಯ ಮೇಲೆ ಮಲಗಿದ್ದ ಕುಟುಂಬದ ಎಲ್ಲರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಈ ಘಟನೆಯಲ್ಲಿ ರೈನಾರ ಸೋದರ ಮಾವ ಸಾವನ್ನಪ್ಪಿದ್ದರು. ಅತ್ತೆಗೆ ಗಂಭೀರ ಗಾಯವಾಗಿ ಆಸ್ಪತ್ರೆ ಸೇರಿದ್ದರು. ಜೊತೆಗೆ ಅವರ ಮಕ್ಕಳಿಬ್ಬರು ಕೂಡ ಹಲ್ಲೆಗೊಳಗಾಗಿದ್ದರು.

ಸದ್ಯ ಅಂತಾರಾಜ್ಯ ದರೋಡೆಕೋರರ ತಂಡ ಈ ಕೃತ್ಯವನ್ನು ಮಾಡಿರುವುದು ತನಿಖೆಯಲ್ಲಿ ಖಚಿತವಾಗಿದೆ. ಈಗಾಗಲೇ 3 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ 11 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಬೇಕಾಗಿದೆ ಎಂದು ಡಿಜಿಪಿ ದಿನಕರ್ ಗುಪ್ತಾ ತಿಳಿಸಿದ್ದಾರೆ.

ಆಗಸ್ಟ್ 28ರ ರಾತ್ರಿ ದರೋಡೆಕೋರರ ತಂಡ ಸುರೇಶ್ ರೈನಾ ಕುಟುಂಬದ ಮನೆ ಮೇಲೆಗೆ ದಾಳಿ ನಡೆಸುವ ಮೊದಲು ಮೂರು ಕಡೆ ದರೋಡೆಗೆ ವಿಫಲ ಯತ್ನ ನಡೆಸಿದ್ದರು. ಕೊನೆಗೆ ರೈನಾ ಸೋದರತ್ತೆ ಮನೆ ಮೇಲೆ ದಾಳಿಗೆ ಯತ್ನ ನಡೆಸಿದ್ದಾರೆ.

ಈ ಪ್ರಕರಣದ ಬಳಿಕ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆಯನ್ನು ನಡೆಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶಿಸಿದ್ದರು. ಬಾರ್ಡರ್ ರೇಂಜ್ ಐಜಿಪಿ ನೇತೃತ್ವದ ಎಸ್‌ಐಟಿ ತಂಡ ತನಿಖೆಯನ್ನು ನಡೆಸಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ.

ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿ 3 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಸುರೇಶ್ ರೈನಾ ಟ್ವೀಟ್ ಮಾಡುವ ಮೂಲಕ ಪಂಜಾಬ್ ಪೊಲೀಸ್ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ. "ತನಿಖಾಧಿಕಾರಿಗಳನ್ನು ಇಂದು ಮುಂಜಾನೆ ಭೇಟಿ‌ ಮಾಡಿದೆ. ಅವರು ನನ್ನ ಕುಟುಂಬದ ಮೇಲೆ ದಾಳಿ‌ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ನಾನು ಕಳೆದುಕೊಂಡ ಆಪ್ತರನ್ನು ಮತ್ತೆ ಕರೆತರಲು ಸಾಧ್ಯವಿಲ್ಲ.ಆದರೆ ಮುಂದೆ ನಡೆಯಬುದಾದ ಅಪರಾಧಕ್ಕೆ ಬ್ರೇಕ್ ಬಿದ್ದಿದೆ. ಪಂಜಾಬ್ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಧನ್ಯವಾದಗಳು" ಎಂದು ಸುರೇಶ್ ರೈನಾ ಟ್ವೀಟ್ ಮಾಡಿದ್ದಾರೆ.


ಬಂಧಿತರು ಪಠಾಣ್ ಕೋಟ್ ರೈಲ್ವೆ ನಿಲ್ದಾಣದಲ್ಲಿರುವ ಕೊಳೆಗೇರಿಯಲ್ಲಿ ವಾಸವಾಗಿದ್ದರು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಇವರನ್ನು ಬಂಧಿಸಲಾಗಿದೆ. ಆರೋಪಿಗಳು ಇದೇ ರೀತಿಯಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ದರೋಡೆ ಮತ್ತು ಕೊಲೆ ಮಾಡಿದ್ದಾರೆ. ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಇವರು ಶ್ರೀಮಂತರ ಮನೆ ನೋಡಿ ದರೋಡೆ ಮಾಡುತ್ತಿದ್ದರು. ತಡೆಯಲು ಬಂದವರನ್ನು ರಾಡುಗಳಿಂದ ಹೊಡೆದು ಕೊಲೆ ಮಾಡುತ್ತಿದ್ದರು ಎಂದು ಗುಪ್ತಾ ತಿಳಿಸಿದ್ದಾರೆ.
Published by: Vinay Bhat
First published: September 16, 2020, 8:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading