Mohammed Siraj: ರಾಷ್ಟ್ರಗೀತೆ ವೇಳೆ ಕಣ್ಣೀರು ಹಾಕಿದ್ದರ ಹಿಂದಿನ ಕಹಾನಿ ತಿಳಿಸಿದ ಸಿರಾಜ್..!
ಸಿರಾಜ್ ಅವರ ತಂದೆಯು ಕಳೆದ ನವೆಂಬರ್ 20 ರಂದು ಅನಾರೋಗ್ಯದಿಂದ ನಿಧನರಾಗಿದ್ದರು. ಈ ವೇಳೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ವೇಗಿ ಕ್ವಾರಂಟೈನ್ನಲ್ಲಿದ್ದರು. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಸವಾಲಿನ ವಿಷಯವಾಗಿತ್ತು.
ಆಸ್ಟ್ರೇಲಿಯಾ-ಭಾರತ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮೂರನೇ ಪಂದ್ಯವು ಆರಂಭವಾಗಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಶುರುವಾದ ಈ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಎಲ್ಲರ ಗಮನ ಸೆಳೆದಿದ್ದರು. ಪಂದ್ಯಾರಂಭಕ್ಕೂ ಮುನ್ನ ನಡೆದ ರಾಷ್ಟ್ರಗೀತೆ ಗೌರವದ ವೇಳೆ ಸಿರಾಜ್ ಕಣ್ಣೀರಿಟ್ಟಿದ್ದರು. ಭಾವುಕ ಕ್ಷಣಗಳ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಅಷ್ಟೊಂದು ಭಾವುಕರಾಗಿ ಕಣ್ಣೀರಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಖುದ್ದು ಸಿರಾಜ್ ಉತ್ತರಿಸಿದ್ದಾರೆ. ಮೊದಲ ದಿನದಾಟದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸಿರಾಜ್, ತಮ್ಮ ಕಣ್ಣೀರಿನ ಹಿಂದಿನ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ.
ರಾಷ್ಟ್ರಗೀತೆ ಹಾಡುವಾಗ ನನಗೆ ತಂದೆಯ ನೆನಪಾಯ್ತು. ಈ ವೇಳೆ ನನಗೆ ಭಾವನೆಗಳನ್ನು ನಿಂತ್ರಿಸಲು ಸಾಧ್ಯವಾಗಲಿಲ್ಲ. ನನ್ನ ತಂದೆಗೆ ನಾನು ಭಾರತದ ಪರ ಟೆಸ್ಟ್ ಕ್ರಿಕೆಟ್ ಆಡಬೇಕು ಎಂಬುದು ದೊಡ್ಡ ಆಸೆಯಿತ್ತು. ಇಂದು ಅವರು ಬದುಕಿದ್ದರೆ ನಾನು ಟೆಸ್ಟ್ ಆಡುವುದನ್ನು ನೋಡಿರುತ್ತಿದ್ದರು ಎಂದು ಸಿರಾಜ್ ತಿಳಿಸಿದ್ದಾರೆ.
ಸಿರಾಜ್ ಅವರ ತಂದೆಯು ಕಳೆದ ನವೆಂಬರ್ 20 ರಂದು ಅನಾರೋಗ್ಯದಿಂದ ನಿಧನರಾಗಿದ್ದರು. ಈ ವೇಳೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ವೇಗಿ ಕ್ವಾರಂಟೈನ್ನಲ್ಲಿದ್ದರು. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಸವಾಲಿನ ವಿಷಯವಾಗಿತ್ತು. ಹೀಗಾಗಿ ಅಂತ್ಯಕ್ರಿಯೆಗಾಗಿ ತಾಯ್ನಾಡಿಗೆ ವಾಪಸ್ ಆಗಲು ಸಾಧ್ಯವಾಗಿರಲಿಲ್ಲ.
ಇದೀಗ ತಂದೆಯ ಆಸೆಯಂತೆ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಟೆಸ್ಟ್ ಆಡುತ್ತಿದ್ದಾರೆ. ಅಲ್ಲದೆ ಮೊದಲ ಟೆಸ್ಟ್ನಲ್ಲೇ 5 ವಿಕೆಟ್ ಉರುಳಿಸಿ ಮಿಂಚಿದ್ದರು. ಅಲ್ಲದೆ 2ನೇ ಟೆಸ್ಟ್ನಲ್ಲೂ ಅಪಾಯಕಾರಿ ಡೇವಿಡ್ ವಾರ್ನರ್ ವಿಕೆಟ್ ಉರುಳಿಸಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟಿದ್ದಾರೆ.
Published by:zahir
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ