ಮ್ಯಾನ್ಚೆಸ್ಟರ್ (ಸೆ. 16): ಮ್ಯಾನ್ಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ, ಮಾರ್ಗನ್ ಪಡೆಗೆ ಆರಂಭದಲ್ಲೇ ಹಿನ್ನಡೆಯಾಗಿದೆ. 100 ರನ್ಗೂ ಮೊದಲೇ ಪ್ರಮುಖ ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದೆ. ಸದ್ಯ ಆಡಿರುವ ಎರಡು ಪಂದ್ಯಗಳ ಪೈಕಿ ಎರಡೂ ತಂಡ 1-1ರ ಸಮಬಲ ಸಾಧಿಸಿದೆ.
ಟಾಸ್ ಗೆದ್ದ ಇಯಾನ್ ಮಾರ್ಗನ್ ಬಳಗ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ, ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಮಿಚೆಲ್ ಸ್ಟಾರ್ಕ್ ಬೌಲಿಂಗ್ನಲ್ಲಿ ಜೇಸನ್ ರಾಯ್ ಅವರು ಮ್ಯಾಕ್ಸ್ವೆಲ್ಗೆ ಕ್ಯಾಚಿತ್ತು ಔಟ್ ಆದರು. ಅಚ್ಚರಿ ಎಂಬಂತೆ ಎರಡನೇ ಎಸೆತದಲ್ಲಿ ಜೋ ರೂಟ್ ಎಲ್ಬಿ ಬಲೆಗೆ ಸಿಲುಕಿದರು.
S Sreesanth: 2023ರ ವಿಶ್ವಕಪ್ ಆಡುವುದು ನನ್ನ ಗುರಿ: ಶ್ರೀಶಾಂತ್
ನಾಯಕ ಇಯಾನ್ ಮಾರ್ಗನ್ ಇನ್ನಿಂಗ್ಸ್ ಕಟ್ಟಲು ಹೊರಟರಾದರೂ 23 ರನ್ ಗಳಿಸಿದ್ದಾಗ ಝಂಪ ಬೌಲಿಂಗ್ನಲ್ಲಿ ನಿರ್ಗಮಿಸಬೇಕಾಯಿತು. ಬಳಿಕ ಜಾನಿ ಬೈರ್ ಸ್ಟೋ ತಂಡವನ್ನು ಮೇಲುತ್ತುವ ಪ್ರಯತ್ನ ನಡೆಸುತ್ತಿದ್ದಾರೆ. ಅದರಂತೆ ಅರ್ಧಶತಕವನ್ನೂ ಬಾರಿಸಿದರು. ಆದರೆ, ಇವರಿಗೆ ಜಾಸ್ ಬಟ್ಲರ್ ಉತ್ತಮ ಸಾತ್ ನೀಡಲಿಲ್ಲ. ಕೇವಲ 8 ರನ್ ಗಳಿಸಿ ಬಟ್ಲರ್ ಕೂಡ ನಿರ್ಗಮಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಸದ್ಯ ತಂಡದ ಮೊತ್ತ ಮೂರಂಕಿ ದಾಟುವ ಮುನ್ನವೇ ಇಂಗ್ಲೆಂಡ್ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿದೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಿಕ ಪಂದ್ಯದಲ್ಲಿ ಗೆದ್ದಿತ್ತು. ದ್ವಿತೀಯ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಜಯ ದಾಖಲಿಸಿತ್ತು. ಸರಣಿಯೀಗ 1-1ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.
ಇನ್ನೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರೆ ಎಂದೇ ಹೇಳಲಾಗಿದ್ದ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
IPL 2020: CSK ತಂಡಕ್ಕೆ ಶಾಕ್ ಮೇಲೆ ಶಾಕ್: ಮೊದಲ ಪಂದ್ಯದಿಂದ ಸ್ಟಾರ್ ಆಟಗಾರ ಹೊರಕ್ಕೆ
ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜಾನಿ ಬೈರ್ಸ್ಟೋವ್, ಜೋ ರೂಟ್, ಇಯಾನ್ ಮಾರ್ಗನ್ (ಸಿ), ಜೋಸ್ ಬಟ್ಲರ್ (ವಿಕೆ), ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ವೋಕ್ಸ್, ಟಾಮ್ ಕರನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್ (ಸಿ), ಮಾರ್ಕಸ್ ಸ್ಟೊಯಿನಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆ), ಗ್ಲೆನ್ ಮ್ಯಾಕ್ಸ್ವೆಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್ವುಡ್, ಆಡಂ ಝಂಪ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ