• Home
 • »
 • News
 • »
 • sports
 • »
 • England vs India: ಇಂಗ್ಲೆಂಡ್ ಸರಣಿಯಿಂದಲೇ ಟೀಮ್ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸವಾಲು

England vs India: ಇಂಗ್ಲೆಂಡ್ ಸರಣಿಯಿಂದಲೇ ಟೀಮ್ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸವಾಲು

Team India

Team India

ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಮಯಾಂಕ್ ಅರ್ಗವಾಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ.

 • Share this:

  ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋಲಿನ ನೋವಿನ ಬೆನ್ನಲ್ಲೇ ಇದೀಗ ಮತ್ತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಅಭಿಯಾನ ಆರಂಭಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ದ ಆಗಸ್ಟ್ 4 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯೊಂದಿಗೆ ಭಾರತದ ವರ್ಲ್ಡ್ ಟೆಸ್ಟ್ ಚಾಂಪಿಯನ್​ಶಿಪ್ ಅಭಿಯಾನ ಶುರುವಾಗಲಿದೆ.


  ಅಂದರೆ 2ನೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯೊಂದಿಗೆ ಆರಂಭವಾಗಲಿದ್ದು, ಜೂನ್ 2023 ರವರೆಗೆ ವಿಶ್ವ ಟೆಸ್ಟ್ ಸರಣಿ ನಡೆಯಲಿದೆ. ಆಗಸ್ಟ್ 2021 ರಿಂದ ಜೂನ್ 2023 ರವರೆಗೆ ನಡೆಯಲಿರುವ ವಿವಿಧ ದೇಶಗಳ ಟೆಸ್ಟ್ ಸರಣಿಯ ಅಂಕಗಳನ್ನು ಆಧರಿಸಿ ಎರಡು ತಂಡಗಳು ಫೈನಲ್ ಪ್ರವೇಶಿಸಲಿದೆ.


  ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಬಳಿಕ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಭಾರತದಲ್ಲಿ ಟೆಸ್ಟ್ ಆಡಲಿದೆ. ಇದಾದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿ ಆಡಬೇಕಿದೆ. ಇನ್ನು ಆಸ್ಟ್ರೇಲಿಯಾ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದ ವಿರುದ್ದದ ಟೆಸ್ಟ್ ಸರಣಿಗಳೊಂದಿಗೆ ಟೀಮ್ ಇಂಡಿಯಾದ 2ನೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಭಿಯಾನ ಅಂತ್ಯವಾಗಲಿದೆ.


  2ನೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನಿಯಮ ಬದಲಾವಣೆ:


  ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯದ ಬೆನ್ನಲ್ಲೇ ಇದೀಗ ಮುಂದಿನ ವರ್ಲ್ಡ್ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಹೊಸ ನಿಯಮಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ಅದರಂತೆ 2021 ರಿಂದ 2023 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅಂಕಗಳ ಬದಲಾವಣೆಯಾಗಲಿದೆ.


  ಐಸಿಸಿ ನೂತನವಾಗಿ ಪ್ರಕಟಿಸಿರುವ ನಿಯಮದಂತೆ ಮುಂದಿನ ಟೆಸ್ಟ್ ಚಾಂಪಿಯನ್​​ಶಿಪ್​ನಲ್ಲಿ ಪ್ರತಿ ಪಂದ್ಯಕ್ಕೆ ಅಂಕ ನೀಡಲಾಗುತ್ತದೆ. ಈ ಹಿಂದೆ ಟೆಸ್ಟ್ ಸರಣಿಯೊಂದಕ್ಕೆ 120 ಅಂಕ ನಿಗದಿಪಡಿಸಲಾಗಿತ್ತು. ಇದರಿಂದ ಕಡಿಮೆ ಪಂದ್ಯಗಳ ಸರಣಿ ಆಡುತ್ತಿದ್ದ ತಂಡಗಳಿಗೆ ಅನುಕೂಲಕರವಾಗಿತ್ತು.


  ಇದೀಗ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ. ಇದರಿಂದ ಸರಣಿಗಳ ಪಂದ್ಯಾವಳಿಯ ಲೆಕ್ಕಚಾರ ಸಮಗೊಳ್ಳಲಿದೆ.


  ಹೊಸ ನಿಯಮದ ಪ್ರಕಾರ ಆಡಿದ ಪಂದ್ಯಗಳಲ್ಲಿ ಗೆದ್ದ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ರ್‍ಯಾಂಕ್ ಪಡೆದುಕೊಳ್ಳಲಿವೆ. ಇದರಿಂದ ಪಂದ್ಯಗಳಿಗೆ ಅಥವಾ ಸರಣಿಗೆ ಅನುಸಾರವಾಗಿ ಶ್ರೇಯಾಂಕ ಪಟ್ಟಿ ಬದಲಾಗಬಹುದು. ಅಲ್ಲದೆ ರ್ಯಾಕಿಂಗ್ ಪಟ್ಟಿಯಲ್ಲಿ ಪಂದ್ಯಕ್ಕನುಸಾರವಾಗಿ ಪೈಪೋಟಿ ಕಂಡು ಬರಲಿದೆ.


  ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸಿರೀಸ್ ನಿಯಮಗಳ ಪ್ರಕಾರ, ಒಂದು ತಂಡವು ಮೂರು ದೇಶೀಯ ಮತ್ತು ಮೂರು ವಿದೇಶಿ ಸರಣಿಗಳನ್ನು ಆಡಬೇಕಾಗುತ್ತದೆ. ಭಾರತ ತಂಡವು ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ತಮ್ಮ ಮನೆಯಲ್ಲಿ ಎದುರಿಸಲಿದೆ. ಹಾಗೆಯೇ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಒಟ್ಟಿನಲ್ಲಿ ಹೊಸ ನಿಯಮನುಸಾರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಡೆಯಲಿರುವುದರಿಂದ ಮುಂದಿನ ದಿನಗಳಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅಗ್ರ ಕ್ರಮಾಂಕಕ್ಕಾಗಿ ರೋಚಕ ಪೈಪೋಟಿ ಕಂಡು ಬರಲಿದೆ.


  ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಮಯಾಂಕ್ ಅರ್ಗವಾಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕುರ್, ಉಮೇಶ್ ಯಾದವ್, ಕೆಎಲ್ ರಾಹುಲ್, ವೃದ್ಧಿಮಾನ್ ಸಾಹ, ಅಕ್ಷರ್ ಪಟೇಲ್

  Published by:zahir
  First published: