ಸೌತಾಂಪ್ಟನ್: ಇಲ್ಲಿನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಸಾಗುತ್ತಿರುವ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲದತ್ತ ಸಾಗುತ್ತಿದೆ. ತನ್ನ ಮೊದಲ ಇನ್ನಿಂಗ್ಸ್ನಲ್ಲಿ 318 ರನ್ಗೆ ಆಲೌಟ್ ಆಗುವ ಮೂಲಕ ಕೆರಿಬಿಯನ್ನರು ಅಲ್ಪ ಮುನ್ನಡೆ ಸಾಧಿಸಿದ್ದರೆ, ಇತ್ತ ಆಂಗ್ಲರು ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.
ಇಂಗ್ಲೆಂಡ್ ತಂಡವನ್ನು 204 ರನ್ಗೆ ಆಲೌಟ್ ಮಾಡಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಎರಡನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 57 ರನ್ ಬಾರಿಸಿತ್ತು. ಮೂರನೇ ದಿನದಾಟ ಆರಂಭದಲ್ಲಿ ಶಾಯ್ ಹೋಪ್ 16 ರನ್ಗೆ ಔಟ್ ಆಗುವ ಮೂಲಕ ಆಘಾತ ನೀಡಿದರು.
SENA ದೇಶಗಳಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಮೂವರು ಬ್ಯಾಟ್ಸ್ಮನ್ಗಳು ಇವರೇ..!
ಇತ್ತ ಬ್ರಾಥ್ವೈಟ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದರೆ, ಶಮರ್ ಬ್ರೂಕ್ಸ್ ಸಾಥ್ ನೀಡಿದರು. ಬ್ರಾಥ್ವೈಟ್ 125 ಎಸೆತಗಳಲ್ಲಿ 65 ಹಾಗೂ ಶಮರ್ 39 ರನ್ ಗಳಿಸಿ ನಿರ್ಗಮಿಸಿದರು. ರಾಸ್ಟನ್ ಚೇಸ್ 47 ರನ್ ಗಳಿಸಿದರೆ, ಡೌರಿಚ್ ತಂಡಕ್ಕೆ ಆಸರೆಯಾಗಿ 115 ಎಸೆತಗಳಲ್ಲಿ 61 ರನ್ ಬಾರಿಸಿ ಇನ್ನಿಂಗ್ಸ್ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾದರು.
ಅಂತಿಮವಾಗಿ ವೆಸ್ಟ್ ಇಂಡೀಸ್ 102 ಓವರ್ನಲ್ಲಿ 318 ರನ್ಗೆ ಆಲೌಟ್ ಆಯಿತು. 114 ರನ್ಗಳ ಮುನ್ನಡೆ ಸಾಧಿಸಿತು. ಇಂಗ್ಲೆಂಡ್ ಪರ ನಾಯಕ ಬೆನ್ ಸ್ಟೋಕ್ಸ್ 4 ವಿಕೆಟ್ ಕಿತ್ತರೆ, ಜೇಮ್ಸ್ ಆ್ಯಂಡರ್ಸನ್ 3 ವಿಕೆಟ್ ಪಡೆದರು.
Sourav Ganguly: ನನ್ನನ್ನ ತಂಡದಿಂದ ಕೈಬಿಡಲು ಚಾಪೆಲ್ ಒಬ್ಬರೇ ಕಾರಣರಲ್ಲ..!
ಬಳಿಕ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 15 ರನ್ ಗಳಿಸಿದೆ. ರಾರಿ ಬರ್ನ್ಸ್ 10 ಹಾಗೂ ಡೋಮಿನಿಕ್ ಸಿಬ್ಲಿ 5 ರನ್ ಗಳಿಸಿ 4ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ ತಂಡ ಇನ್ನೂ 99 ರನ್ಗಳ ಹಿನ್ನಡೆಯಲ್ಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ