Breaking: Kapil Dev: ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಕಪಿಲ್ ದೇವ್

ಕಪಿಲ್ ದೇವ್

 • Share this:
  ನವ ದೆಹಲಿ (ಅ. 23): ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ಇಲ್ಲಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಸದ್ಯ 61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

  ಕಪಿಲ್‌ ದೇವ್‌ ಅವರಿಗೆಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕರ್ ತಮ್ಮ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.

  ಜನವರಿ 6, 1959ರಲ್ಲಿ ಚಂಡೀಘಡದಲ್ಲಿ ಜನಿಸಿದ ಕಪಿಲ್ ದೇವ್, 1983ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ನಾಯಕನಾಗಿ ಪ್ರಮುಖ ಪಾತ್ರವಹಿಸಿದ್ದರು. ಕಪಿಲ್ ದೇವ್ ತಮ್ಮ 16 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಭಾರತಕ್ಕೆ ಏಕಾಂಗಿಯಾಗಿ ಹಲವಾರು ಸ್ಮರಣೀಯ ಗೆಲುವುಗಳನ್ನು ತಂದಿಟ್ಟಿದ್ದಾರೆ.

  131 ಟೆಸ್ಟ್ ಪಂದ್ಯಗಳನ್ನಾಡಿದ್ದ ಕಪಿಲ್ ದೇವ್ 8 ಶತಕ ಹಾಗೂ 27 ಅರ್ಧಶತಕಗಳ ನೆರವಿನಿಂದ 5248 ರನ್ ಬಾರಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲೂ 434 ವಿಕೆಟ್ ಕಬಳಿಸಿದ್ದಾರೆ. ಇನ್ನು 225 ಏಕದಿನ ಪಂದ್ಯಗಳನ್ನಾಡಿರುವ ಕಪಿಲ್, 1 ಶತಕ ಹಾಗೂ 14 ಅರ್ಧಶತಕಗಳ ಸಹಿತ 3,783 ರನ್ ಬಾರಿಸಿದ್ದಾರೆ. ಬೌಲಿಂಗ್’ನಲ್ಲಿ 253 ವಿಕೆಟ್ ಪಡೆದಿದ್ದಾರೆ.
  Published by:Vinay Bhat
  First published: