HOME » NEWS » Sports » CRICKET GAUTAM GAMBHIR FEELS HARDIK PANDYA IS AS GOOD A FINISHER AS MS DHONI YUVRAJ SINGH ZP

Gautam Gambhir: ಈತ ಧೋನಿ ಹಾಗೂ ಯುವರಾಜ್ ಸಿಂಗ್ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ..!

ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಕೆಲವೇ ಕೆಲವು ಮಂದಿ ಇದ್ದಾರೆ. ಈ ಹಿಂದೆ ಯುವರಾಜ್ ಸಿಂಗ್ ಮತ್ತು ಎಂಎಸ್ ಧೋನಿ ಇದ್ದರು. ಈಗ ಪಾಂಡ್ಯ- ಗ್ಲೆನ್ ಮ್ಯಾಕ್ಸ್ ವೆಲ್ ಇದ್ದಾರೆ.

news18-kannada
Updated:December 9, 2020, 6:31 PM IST
Gautam Gambhir: ಈತ ಧೋನಿ ಹಾಗೂ ಯುವರಾಜ್ ಸಿಂಗ್ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ..!
Dhoni _ Yuvraj Singh
  • Share this:
ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಏಕದಿನ ಸರಣಿ ಸೋಲಿನ ಸೇಡನ್ನು ಕೊಹ್ಲಿ ಪಡೆ ತೀರಿಸಿಕೊಂಡತಾಗಿದೆ. ಭಾರೀ ರೋಚಕತೆ ಕಾರಣವಾಗಿದ್ದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದು ಹಿಟ್ಟರ್ ಹಾರ್ದಿಕ್ ಪಾಂಡ್ಯ.

ಅದರಲ್ಲೂ 2ನೇ ಟಿ20 ಪಂದ್ಯದಲ್ಲಿ 22 ಎಸೆತಗಳಲ್ಲಿ 42 ರನ್ ಸಿಡಿಸಿ ಅಬ್ಬರಿಸಿದ್ದ ಹಾರ್ಡ್​ ಹಿಟ್ಟರ್ ಪಾಂಡ್ಯ ಭಾರತಕ್ಕೆ ಜಯದೊಂದಿಗೆ ಸರಣಿ ಗೆಲುವು ತಂದುಕೊಟ್ಟಿದ್ದರು. ಈ ಅಮೋಘ ಇನಿಂಗ್ಸ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್, ಭಾರತ ತಂಡ ಕಂಡಂತಹ ಗ್ರೇಟ್ ಫಿನಿಶರ್​ಗಳಾದ ಯುವರಾಜ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ಸ್ಥಾನವನ್ನು ಹಾರ್ದಿಕ್ ಪಾಂಡ್ಯ ತುಂಬಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಟ ನನಗೇನು ಅಚ್ಚರಿ ಮೂಡಿಸಿಲ್ಲ. ಏಕೆಂದರೆ ಇಂಡಿಯನ್ ಪ್ರೀಮಿಯರ್​ ಲೀಗ್​ನಲ್ಲೂ ಪಾಂಡ್ಯ ಇಂತಹ ಸಿಡಿಲಬ್ಬರ ಪ್ರದರ್ಶಿಸಿದ್ದಾರೆ. ಐಪಿಎಲ್​ನಂತಹ ದೊಡ್ಡ ಟೂರ್ನಿಯಲ್ಲಿ ಉತ್ತಮವಾಗಿ ಆಡಿ ಅಂತರಾಷ್ಟ್ರೀಯ ಕ್ರಿಕೆಟ್ ಆಡುವಾಗ ಆತ್ಮ ವಿಶ್ವಾಸ ಕೂಡ ಹೆಚ್ಚಿರುತ್ತದೆ. ಹಾಗಾಗಿ ಪಾಂಡ್ಯ ಅವರ ಸ್ಪೋಟಕ ಇನಿಂಗ್ಸ್​ ಹೊಸದಂತೆ ಕಾಣಲಿಲ್ಲ ಎಂದು ಗೌತಮ್ ಗಂಭೀರ್ ತಿಳಿಸಿದರು.

ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಕೆಲವೇ ಕೆಲವು ಮಂದಿ ಇದ್ದಾರೆ. ಈ ಹಿಂದೆ ಯುವರಾಜ್ ಸಿಂಗ್ ಮತ್ತು ಎಂಎಸ್ ಧೋನಿ ಇದ್ದರು. ಈಗ ಪಾಂಡ್ಯ- ಗ್ಲೆನ್ ಮ್ಯಾಕ್ಸ್ ವೆಲ್ ಇದ್ದಾರೆ. ಇವರು ಯಾವುದೇ ಗುರಿಯನ್ನು ಬೆನ್ನಟ್ಟುವ ಸಾಮರ್ಥ್ಯ ಹೊಂದಿದ್ದಾರೆ. ಕೊನೆಯ ಓವರ್‌ನಲ್ಲಿ ನಿಮಗೆ 20-25 ರನ್‌ಗಳ ಅಗತ್ಯವಿದ್ದರೂ ಸಹ ಅದನ್ನು ಚೇಸ್ ಮಾಡುವ ವಿಶ್ವಾಸ ಮೂಡಿಸುತ್ತಾರೆ ಎಂದು ಗೌತಮ್ ಗಂಭೀರ್ ಹೇಳಿದರು.

ಇದನ್ನೂ ಓದಿ: 55 ಎಸೆತ, 5 ಬೌಂಡರಿ, 20 ಸಿಕ್ಸ್, ಸ್ಪೋಟಕ ಶತಕ: ಈ ಬ್ಯಾಟ್ಸ್​ಮನ್ ಮೇಲೆ ಕಣ್ಣಿಟ್ಟಿದೆ RCB..!
Published by: zahir
First published: December 9, 2020, 6:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories