India vs Australia 2nd Test: ಟೀಮ್ ಇಂಡಿಯಾಗೆ 4 ಸಲಹೆಗಳನ್ನು ನೀಡಿದ ಗೌತಮ್ ಗಂಭೀರ್

ಡಿಸೆಂಬರ್ 26 ರಿಂದ ಭಾರತ-ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತಿದೆ. ಹೆಚ್ಚಿನವರು ಬಾಕ್ಸಿಂಗ್ ಡೇ ಟೆಸ್ಟ್ ಎಂದರೆ ಎರಡು ತಂಡಗಳ ಹಣಾಹಣಿ ಅಥವಾ ಕಾಳಗ ಅಂದುಕೊಂಡಿದ್ದಾರೆ. ಹೀಗಾಗಿ ಇದನ್ನು ಬಾಕ್ಸಿಂಗ್ ಡೇ ಎಂದು ವರ್ಣಿಸಲಾಗುತ್ತಿದೆ ಎಂದು ಭಾವಿಸಿದ್ದಾರೆ. ಆದರೆ ಇಲ್ಲಿ ಬಾಕ್ಸಿಂಗ್ ಎಂದರೆ ಮುಷ್ಠಿ ಕಾಳಗವಲ್ಲ. ಬದಲಾಗಿ ಕ್ರಿಸ್​ಮಸ್ ಮರುದಿನ ನಡೆಯುತ್ತಿರುವುದರಿಂದ ಬಾಕ್ಸಿಂಗ್ ಡೇ ಪಂದ್ಯ ಎಂದು ಕರೆಯಲಾಗುತ್ತಿದೆ.

Gautam Gambhir

Gautam Gambhir

 • Share this:
  ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಹೀನಾಯ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದರೂ, 2ನೇ ಇನಿಂಗ್ಸ್​ನಲ್ಲಿ ಕೇವಲ 36 ರನ್​ಗಳಿಗೆ ಮಕಾಡೆ ಮಲಗಿತ್ತು. ಈ ಸೋಲಿನೊಂದಿಗೆ ಭಾರತ 4 ಟೆಸ್ಟ್ ಪಂದ್ಯಗಳಲ್ಲಿ 0-1 ಅಂತರದಲ್ಲಿ ಹಿನ್ನಡೆ ಸಾಧಿಸಿದೆ. ಇನ್ನು ಮುಂದಿನ ಟೆಸ್ಟ್ ಪಂದ್ಯಗಳಿಂದ ಪಿತೃತ್ವ ರಜೆಯ ಕಾರಣ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಹೀಗಾಗಿ ಭಾರತ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

  ಇನ್ನು ಡಿಸೆಂಬರ್ 26 ರಿಂದ ಶುರುವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್​ ತಂಡದಲ್ಲಿ ಟೀಮ್ ಇಂಡಿಯಾ 4 ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಬೇಕೆಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. 2ನೇ ಪಂದ್ಯದಲ್ಲಿ ಭಾರತ ತಂಡವು ಐವರು ಬೌಲರುಗಳನ್ನು ಕಣಕ್ಕಿಳಿಸುವುದು ಉತ್ತಮ. ಇದರಿಂದ ಆಸ್ಟ್ರೇಲಿಯಾ ಬ್ಯಾಟ್ಸ್​ಮನ್​ಗಳ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸಬಹುದು ಎಂದು ಗಂಭೀರ್ ತಿಳಿಸಿದ್ದಾರೆ.

  ಮೊದಲ ಟೆಸ್ಟ್ ಪಂದ್ಯದಲ್ಲಿ ವಿಫಲರಾಗಿರುವ ಪೃಥ್ವಿ ಶಾ ಬದಲು ಶುಭ್​ಮನ್​ ಗಿಲ್​ಗೆ ಅವಕಾಶ ನೀಡಬೇಕು. ಮಯಾಂಕ್ ಅಗರ್ವಾಲ್ ಹಾಗೂ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿ. ಹಾಗೆಯೇ ಚೇತೇಶ್ವರ ಪೂಜಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್​ ಬೀಸುವುದರಿಂದ ಟೀಮ್ ಇಂಡಿಯಾಗೆ ಅನುಕೂಲವಾಗಲಿದೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

  ಇನ್ನು ನಾಯಕ ಅಜಿಂಕ್ಯ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. ಅಲ್ಲದೆ ವೃದ್ಧಿಮಾನ್ ಸಾಹ ಹಾಗೂ ಹನುಮ ವಿಹಾರಿ ಬದಲಿಗೆ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಅವಕಾಶ ನೀಡಬೇಕು. ಅಲ್ಲದೆ ವಿರಾಟ್ ಕೊಹ್ಲಿ ಅವರ ಜಾಗದಲ್ಲಿ ಕೆಎಲ್ ರಾಹುಲ್ ಅವರನ್ನು 5ನೇ ಕ್ರಮಾಂಕದಲ್ಲಿ ಬಳಸಿಕೊಳ್ಳಬೇಕು ಎಂದು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಸಲಹೆ ನೀಡಿದ್ದಾರೆ.

  ಏನಿದು ಬಾಕ್ಸಿಂಗ್ ಡೇ ಟೆಸ್ಟ್​?

  ಡಿಸೆಂಬರ್ 26 ರಿಂದ ಭಾರತ-ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತಿದೆ. ಹೆಚ್ಚಿನವರು ಬಾಕ್ಸಿಂಗ್ ಡೇ ಟೆಸ್ಟ್ ಎಂದರೆ ಎರಡು ತಂಡಗಳ ಹಣಾಹಣಿ ಅಥವಾ ಕಾಳಗ ಅಂದುಕೊಂಡಿದ್ದಾರೆ. ಹೀಗಾಗಿ ಇದನ್ನು ಬಾಕ್ಸಿಂಗ್ ಡೇ ಎಂದು ವರ್ಣಿಸಲಾಗುತ್ತಿದೆ ಎಂದು ಭಾವಿಸಿದ್ದಾರೆ. ಆದರೆ ಇಲ್ಲಿ ಬಾಕ್ಸಿಂಗ್ ಎಂದರೆ ಮುಷ್ಠಿ ಕಾಳಗವಲ್ಲ. ಬದಲಾಗಿ ಕ್ರಿಸ್​ಮಸ್ ಮರುದಿನ ನಡೆಯುತ್ತಿರುವುದರಿಂದ ಬಾಕ್ಸಿಂಗ್ ಡೇ ಪಂದ್ಯ ಎಂದು ಕರೆಯಲಾಗುತ್ತಿದೆ.

  ಅಂದರೆ ಕ್ರಿಸ್​ಮಸ್ ದಿನ ಸ್ನೇಹಿತರು, ಕುಟುಂಬದವರು ಪರಸ್ಪರ ಗಿಫ್ಟ್ ಬಾಕ್ಸ್ ನೀಡುತ್ತಾರೆ​. ಮರುದಿನ ಅಂದರೆ ಡಿಸೆಂಬರ್ 26 ರಂದು ಆ ಬಾಕ್ಸ್​ ಓಪನ್ ಮಾಡಲಾಗುತ್ತದೆ. ಇದೇ ಕಾರಣದಿಂದ ಬಾಕ್ಸ್​ ಓಪನ್ ಮಾಡುವ ದಿನವನ್ನು ಬಾಕ್ಸಿಂಗ್ ಡೇ ಎನ್ನಲಾಗುತ್ತದೆ. ಇದೇ ದಿನ ಪಂದ್ಯವನ್ನು ಆಯೋಜಿಸುತ್ತಿರುವುದರಿಂದ ಬಾಕ್ಸಿಂಗ್ ಡೇ ಟೆಸ್ಟ್ ಎಂಬ ಹೆಸರು ಬಂದಿದೆ.
  Published by:zahir
  First published: