ಟಿ20 ವಿಶ್ವಕಪ್ಗೂ ಮುನ್ನ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ವಿರುದ್ದ ಸರಣಿ ಆಡಲಿದೆ. ಜೂನ್ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ಮತ್ತು 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಈ ಮೂಲಕ ಚುಟುಕು ಕದನಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಲು ದಕ್ಷಿಣ ಆಫ್ರಿಕಾ ಸಜ್ಜಾಗಿದೆ. ಈ ವಿಷಯವನ್ನು ಬಹಿರಂಗಪಡಿಸಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ನ ನಿರ್ದೇಶಕ ಗ್ರೇಮ್ ಸ್ಮಿತ್ ಟಿ20 ಕ್ರಿಕೆಟ್ ಕದನಕ್ಕಾಗಿ ಬಲಿಷ್ಠ ತಂಡವನ್ನು ರೂಪಿಸುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ.
ಅದರಂತೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್ ತಂಡಕ್ಕೆ ಮರಳು ಸೂಚನೆ ನೀಡಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ದಕ್ಷಿಣ ಆಫ್ರಿಕಾದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಬಹುದು. ಅವರೊಂದಿಗೆ ಕ್ರಿಸ್ ಮೊರಿಸ್ ಮತ್ತು ಇಮ್ರಾನ್ ತಾಹಿರ್ ಕೂಡ ತಂಡಕ್ಕೆ ಮರಳಬಹುದು ಎಂದು ಸ್ಮಿತ್ ಹೇಳಿದ್ದಾರೆ. ಇದರೊಂದಿಗೆ ಎಬಿಡಿ ಮತ್ತೆ ಕಂಬ್ಯಾಕ್ ಮಾಡುವುದು ಖಚಿತವಾದಂತಾಗಿದೆ.
ಈ ಬಾರಿಯ ಐಪಿಎಲ್ ವೇಳೆ ಮಾತನಾಡಿದ್ದ ಎಬಿ ಡಿವಿಲಿಯರ್ಸ್, ಟಿ20 ವಿಶ್ವಕಪ್ ವೇಳೆ ದಕ್ಷಿಣ ಆಫ್ರಿಕಾ ಪರ ಆಡುವ ಅವಕಾಶ ಸಿಗುವುದಾದರೆ ಅದು ಅದ್ಭುತವೆನಿಸಲಿದೆ ಎಂದು ಹೇಳಿದ್ದರು. ಅತ್ತ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಕೋಚ್ ಮಾರ್ಕ್ ಬೌಚರ್ ಕೂಡ ಎಬಿಡಿ ಅವರನ್ನು ತಂಡಕ್ಕೆ ಕರೆತರುವ ಪ್ರಯತ್ನದಲ್ಲಿದ್ದಾರೆ. ಐಪಿಎಲ್ ಬಳಿಕ ಈ ಬಗ್ಗೆ ಬೌಚರ್ ಅವರೊಂದಿಗೆ ಚರ್ಚಿಸುವುದಾಗಿ ಎಬಿಡಿ ತಿಳಿಸಿದ್ದರು.
ಕಳೆದ ವರ್ಷ ಬೌಚರ್ ನನ್ನನ್ನು ತಂಡಕ್ಕೆ ವಾಪಾಸ್ ಆಗುತ್ತೀರಾ ಎಂದು ಕೇಳಿದ್ದರು. ನಾನು ಕೂಡ ಖಂಡಿತವಾಗಿಯೂ ಎಂದು ತಿಳಿಸಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇವೆ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದರು. 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ನೀಡಿದ್ದ ಎಬಿಡಿ ಆ ಬಳಿಕ 2019 ರ ವಿಶ್ವಕಪ್ ಆಡುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಈ ಬಗ್ಗೆ ಆಸಕ್ತಿ ಹೊಂದಿರಲಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ