ಭಾರತ-ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. 2ನೇ ಇನಿಂಗ್ಸ್ನ ಫೀಲ್ಡಿಂಗ್ ವೇಳೆ ಚೆಂಡನ್ನು ಹಿಡಿಯಲು ಡೈವ್ ಹೊಡೆದಿದ್ದ ಅಯ್ಯರ್ ಅವರ ಭುಜಕ್ಕೆ ಪೆಟ್ಟಾಗಿದ್ದು, ಹೀಗಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ಗೂ ಕೂಡ ಅಲಭ್ಯರಾಗಲಿದ್ದಾರೆ.
ಸದ್ಯದ ಶ್ರೇಯಸ್ ಅಯ್ಯರ್ ಅವರ ಸ್ಕ್ಯಾನಿಂಗ್ ರಿಪೋರ್ಟ್ ಪ್ರಕಾರ, ಅವರ ಎಡ ಭುಜಕ್ಕೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ತಿಳಿದು ಬಂದಿದೆ. ಅದರಂತೆ ಏಪ್ರಿಲ್ ಮೊದಲ ವಾರದಲ್ಲಿ ಸರ್ಜರಿಗೆ ಒಳಗಾಗಲಿದ್ದಾರೆ. ಆ ಬಳಿಕ ಅಯ್ಯರ್ ಕನಿಷ್ಠ 4-5 ತಿಂಗಳುಗಳವರೆಗೆ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸೆಪ್ಟೆಂಬರ್ವರೆಗೂ ಮೈದಾನಕ್ಕಿಳಿಯಲಾಗುವುದಿಲ್ಲ. ಇದರೊಂದಿಗೆ ಈ ಬಾರಿಯ ಐಪಿಎಲ್ನಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದಿಲ್ಲ ಎಂಬುದು ಖಾತ್ರಿಯಾಗಿದೆ.
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಬಿದ್ದಿರುವ ಸುದ್ದಿ ಬೆನ್ನಲ್ಲೇ ಅನೇಕ ಅಭಿಮಾನಿಗಳು ಶ್ರೇಯಸ್ ಅಯ್ಯರ್ ಅವರಿಗೆ ಬೇಗ ಗುಣಮುಖರಾಗಲಿ ಎಂದು ಹಾರೈಸಿ ಸಂದೇಶಗಳನ್ನು ರವಾನಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ