ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯುತ್ತಿದ್ದಾರೆ. ಅಂತಿಮ ಟೆಸ್ಟ್ ಪಂದ್ಯದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಪಾಂಡ್ಯ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಡೇಡಿಯಂನಲ್ಲಿ ಹಾರ್ದಿಕ್ ಫೀಲ್ಡಿಂಗ್ ಪ್ರಾಕ್ಟೀಸ್ ಮಾಡುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯವೂ ಅಹಮದಾಬಾದ್‌ನ ಈ ಕ್ರೀಡಾಂಗಣದಲ್ಲಿ ನಡೆಯಿತು. ಇಲ್ಲಿಯವರೆಗೆ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ತಂಡದ ಆಡುವ ಇಲೆವೆನ್‌ನ ಭಾಗವಾಗಿರಲಿಲ್ಲ. ಟೀಮ್ ಇಂಡಿಯಾ ಪರ 2018 ರಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿರುವ ಹಾರ್ದಿಕ್ ಪಾಂಡ್ಯ ಅಂತಿಮ ಟೆಸ್ಟ್ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.
2019 ರಲ್ಲಿ ಬೆನ್ನು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಳಿಕ ಪಾಂಡ್ಯಗೆ ಟೆಸ್ಟ್ ಕ್ರಿಕೆಟ್ನಲ್ಲಿ ಸ್ಥಾನ ಲಭಿಸಿಲ್ಲ. ಅಲ್ಲದೆ ಕಳೆದೊಂದು ವರ್ಷದಿಂದ ಬೌಲಿಂಗ್ನಿಂದಲೂ ದೂರ ಉಳಿದಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರೊಂದಿಗೆ ಭರ್ಜರಿ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಪಾಂಡ್ಯ ಒಂದು ಕೈಯಿಂದ ಹಿಡಿದಿರುವ ಅದ್ಭುತವಾಗಿ ಕ್ಯಾಚ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
@hardikpandya7 #hardikpandya #INDvENG #TeamIndia #ViratKohli @BCCI #hardikpandya #fan Hardik pandya ♥👑 pic.twitter.com/AU8m6FEr3K
— JÏŤÉŃĎÄŔ_PÀVÍŸÅ (@Jitendar_Paviya) February 28, 2021
View this post on Instagram
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ