• ಹೋಂ
 • »
 • ನ್ಯೂಸ್
 • »
 • ಕ್ರೀಡೆ
 • »
 • MS Dhoni: T20 ವಿಶ್ವಕಪ್​ನಲ್ಲಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಗೌರವ ಧನ ನಿರಾಕರಿಸಿದ ಎಂ.ಎಸ್. ಧೋನಿ

MS Dhoni: T20 ವಿಶ್ವಕಪ್​ನಲ್ಲಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಗೌರವ ಧನ ನಿರಾಕರಿಸಿದ ಎಂ.ಎಸ್. ಧೋನಿ

ಎಂ.ಎಸ್. ಧೋನಿ.

ಎಂ.ಎಸ್. ಧೋನಿ.

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಧೋನಿ ಯಾವುದೇ ಶುಲ್ಕ ಪಡೆಯುತ್ತಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

 • Share this:

  ಕಳೆದ ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ ಕಪ್​ ಗೆಲ್ಲುವ ಉತ್ತಮ ಅವಕಾಶವನ್ನು ಕೈಚೆಲ್ಲಿತ್ತು. ಅದರ ಬೆನ್ನಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿ ಇದ್ದಾಗ್ಯೂ ನ್ಯೂಜಿಲೆಂಡ್ (New Zealand) ವಿರುದ್ಧ ಸೆಮಿ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿತ್ತು. ಹೀಗಾಗಿ ಯುಎಇ ಯಲ್ಲಿ ಈ ತಿಂಗಳ ಮೂರನೇ ವಾರದಿಂದ ಆರಂಭವಾಗಲಿರುವ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಗೆಲ್ಲಲೇಬೇಕೆಂದು ಬಿಸಿಸಿಐ ಪಣ ತೊಟ್ಟಿದೆ. ಮತ್ತೊಂದೆಡೆ ವಿರಾಟ್​ ಕೊಹ್ಲಿಗೆ (Virat Kohli) ನಾಯಕನಾಗಿ ಇದು ಕೊನೆಯ ಟೂರ್ನಿಯಾಗಿದ್ದು, ಅವರೂ ಸಹ ಗೆಲ್ಲಲೇಬೇಕೆಂಬ ಒತ್ತಡದಲ್ಲಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ (MS Dhoni) ಅವರನ್ನು ಭಾರತ ತಂಡಕ್ಕೆ ಮೆಂಟರ್ ಆಗಿ ನಿಯೋಜಿಸಿತ್ತು. ಆದರೆ, ಈ ಸೇವೆಗೆ ಧೋನಿ ಯಾವುದೇ ಸಂಭಾವನೆ ಪಡೆದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಜಯ್ ಶಾ ಸ್ಪಷ್ಟಪಡಿಸಿದ್ದಾರೆ.


  ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮಾರ್ಗದರ್ಶಕರಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಸೇವೆ ಸಲ್ಲಿಸಲು ಒಂದು ಪೈಸೆಯನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಮುಂಬರುವ ಅಕ್ಟೋಬರ್ 16 ರಂದು ಯುಎಇಯಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗೆ ಧೋನಿಯನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಲಾಗಿದೆ.


  ಸುದ್ದಿ ಸಂಸ್ಥೆ ANI ಯೊಂದಿಗೆ ಮಾತನಾಡಿದ ಶಾ, "ಧೋನಿ ಭಾರತ ಕ್ರಿಕೆಟ್​ನ ದಂತಕಥೆ. ಆದರೆ, ಅವರು ತನ್ನ ಹೊಸ ಪಾತ್ರಕ್ಕಾಗಿ ಅವರು ಯಾವ ಷರತ್ತನ್ನೂ ವಿಧಿಸಿಲ್ಲ. ಟಿ-20 ವಿಶ್ವಕಪ್‌ಗಾಗಿ ಭಾರತೀಯ ತಂಡದ ಮಾರ್ಗದರ್ಶಕರಾಗಿ ಅವರ ಸೇವೆಗಳಿಗಾಗಿ ಯಾವುದೇ ಗೌರವ ಧನವನ್ನು ಪಡೆಯುತ್ತಿಲ್ಲ" ಎಂದು ಮಾಹಿತಿ ನೀಡಿದ್ದಾರೆ.


  ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. "ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಧೋನಿ ಯಾವುದೇ ಶುಲ್ಕ ಪಡೆಯುತ್ತಿಲ್ಲ" ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ತಿಳಿಸಿದ್ದಾರೆ. 40 ವರ್ಷದ ಧೋನಿ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದರು. ಅವರು ಕೊನೆಯ ಏಕದಿನ ಪಂದ್ಯವನ್ನು 2019 ರ ವಿಶ್ವಕಪ್ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ್ದರು. ಆ ಪಂದ್ಯದಲ್ಲಿ ಭಾರತ ಸೋಲನ್ನಪ್ಪಿತ್ತು. ಆನಂತರ ಅವರು ಮತ್ತೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ.


  ಭಾರತ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂದು ಬಣ್ಣಿಸಲಾಗುವ ಮತ್ತು ಟಿ20 ಮಾದರಿ ಕ್ರಿಕೆಟ್​ನ ಅತ್ಯುತ್ತಮ ತಂತ್ರಗಾರ ಎಂದು ಹೆಸರಾಗಿರುವ ಎಂ.ಎಸ್​. ಧೋನಿ ಅವರ ಆಗಮನ ಈ ವರ್ಷದ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ವರದಾನವಾಗಲಿದೆ. ಧೋನಿ ಮಾರ್ಗದರ್ಶನದಲ್ಲಿ ವಿರಾಟ್​ ಕೊಹ್ಲಿ ತಂಡವನ್ನು ಅತ್ಯತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ನಾಯಕ ಧೋನಿ 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಟಿ 20 ವಿಶ್ವಕಪ್ ಮತ್ತು 2011 ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜಯಿಸಿದ ತಂಡದ ನಾಯಕರಾಗಿದ್ದರು.


  ಇದನ್ನೂ ಓದಿ: Rishabh Pant- ಎರಡು ಬಾರಿ ಧೋನಿ ಔಟ್ ಮಾಡಲು ರಿಷಭ್ ಪಂತ್ ಹೆಣೆದ ಬಲೆ ನಿಜಕ್ಕೂ ಸೋಜಿಗ


  ಕಳೆದ ಆಗಸ್ಟ್ 15 ರಂದು ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಎಂ.ಎಸ್​. ಧೋನಿ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದರು. ಅವರ ಈ ನಿರ್ಧಾರ ಅನೇಕ ಅಭಿಮಾನಿಗಳನ್ನು  ಆಶ್ಚರ್ಯಚಕಿತಗೊಳಿಸಿತ್ತು. ಜಾರ್ಖಂಡ್‌ನ ಧೋನಿ ತಮ್ಮ ವೃತ್ತಿ ಜೀವನದಲ್ಲಿ 90 ಟೆಸ್ಟ್, 350 ಏಕದಿನ ಮತ್ತು 98 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕ್ರಮವಾಗಿ 4876, 10773 ಮತ್ತು 1617 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾದ ನಂತರ ಅವರು ಐಪಿಎಲ್​ನಲ್ಲಿ ಮಾತ್ರ ಕಣಕ್ಕಿಳಿಯುತ್ತಿದ್ದಾರೆ. ಅಲ್ಲದೆ, ರಾಂಚಿಯ ತಮ್ಮ ಊರಿನಲ್ಲಿ  ಸಾವಯವ ಕೃಷಿಯಲ್ಲಿ ತೊಡಗಿದ್ದಾರೆ.

  Published by:MAshok Kumar
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು